ದೆಹಲಿ ಅಬಕಾರಿ ಹಗರಣ: ೭ ಆರೋಪಿಗಳ ವಿರುದ್ಧ ಚಾರ್ಜ್ಶೀಟ್

ನವದೆಹಲಿ, ನ. ೨೫: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬAಧಿಸಿದAತೆ ಬಂಧಿತ ಇಬ್ಬರು ಉದ್ಯಮಿಗಳು ಸೇರಿದಂತೆ ಏಳು ಆರೋಪಿಗಳ ವಿರುದ್ಧ ಸಿಬಿಐ ಶುಕ್ರವಾರ ತನ್ನ ಮೊದಲ ಚಾರ್ಜ್ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಬ್ಬರು ಬಂಧಿತ ಉದ್ಯಮಿಗಳಲ್ಲದೆ, ಸುದ್ದಿ ವಾಹಿನಿಯೊಂದರ ಮುಖ್ಯಸ್ಥರು, ಹೈದರಾಬಾದ್ ಮೂಲದ ಮದ್ಯ ಉದ್ಯಮಿ, ದೆಹಲಿ ಮೂಲದ ಮದ್ಯ ವಿತರಕರು ಮತ್ತು ಅಬಕಾರಿ ಇಲಾಖೆಯ ಇಬ್ಬರು ಅಧಿಕಾರಿಗಳ ವಿರುದ್ಧ ಸಿಬಿಐ ಚಾರ್ಜ್ಶೀಟ್ ಸಲ್ಲಿಸಿದೆ ಎಂದು ಅವರು ಹೇಳಿದ್ದಾರೆ. ಸಿಬಿಐ ಎಫ್‌ಐಆರ್‌ನಲ್ಲಿ ಹೆಸರಿಸಲಾದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಹೆಸರು ಇಂದು ಸಲ್ಲಿಸಲಾದ ಚಾರ್ಜ್ಶೀಟ್‌ನಲ್ಲಿ ಇಲ್ಲ. ತನಿಖಾ ಸಂಸ್ಥೆಯು ತನಿಖೆ ಕೈಗೆತ್ತಿಕೊಂಡ ೬೦ ದಿನಗಳಲ್ಲಿ ಸಲ್ಲಿಸಿದ ಮೊದಲ ಚಾರ್ಜ್ಶೀಟ್ ಇದಾಗಿದೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ ೧೨೦-ಬಿ(ಕ್ರಿಮಿನಲ್ ಪಿತೂರಿ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಆರೋಪ ಹೊರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಯು ಸಿಸೋಡಿಯಾ ಅವರ "ಆಪ್ತ ಸಹಾಯಕ" ದಿನೇಶ್ ಅರೋರಾ ಅವರನ್ನು ಪ್ರಕರಣದಲ್ಲಿ ಅಪ್ರೂವರ್(ಮಾಫಿ ಸಾಕ್ಷಿದಾರ) ಮಾಡುವ ಮೂಲಕ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಎನ್‌ಐಎ ಆದೇಶ

ಬೆಂಗಳೂರು, ನ. ೨೫: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ರಾಜ್ಯದಲ್ಲಿ ತೀರ್ವ ಆಂತಕ ಮೂಡಿಸಿತ್ತು. ಇದೀಗ ತನಿಖೆಯನ್ನು ಎನ್‌ಐಎ ತನಿಖೆಗೆ ಕೇಂದ್ರ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಮಂಗಳೂರಿನ ಆಟೋದಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬAಧಿಸಿದAತೆ ರಾಜ್ಯದ ಪೊಲೀಸರು ಪ್ರಾಥಮಿಕ ತನಿಖೆ ಮಾಡಿದ್ದಾರೆ. ಈ ತನಿಖೆಯಲ್ಲಿ ಸಂಗ್ರಹಿಸಲಾದ ಸಾಕ್ಷ್ಯಗಳನ್ನು ಆಧರಿಸಿ ರಾಜ್ಯ ಸರ್ಕಾರ ಯುಎಪಿಎ ಕಾಯ್ದೆ ಅನ್ವಯ ಎನ್‌ಐಎ ತನಿಖೆ ನಡೆಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು. ಕಳೆದ ನವೆಂಬರ್ ೨೦ ರಂದು ಮಂಗಳೂರಿನ ಕಂಕನಾಡಿ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ದಿಢೀರ್ ನಿಗೂಢ ಸ್ಫೋಟ ಸಂಭವಿಸಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ಹಾಗೂ ವಿಧಿವಿಜ್ಞಾನ ಇಲಾಖೆಯ ತಜ್ಞರು ಹಾಗೂ ಬಾಂಬ್ ನಿಷ್ಕಿçಯ ದಳ ದೌಡಾಯಿಸಿ ಪರಿಶೀಲನೆ ನಡೆಸಿತ್ತು. ಶಿವಮೊಗ್ಗದ ತುಂಗಾ ನದಿ ದಡದಲ್ಲಿರುವ ಕೆಮ್ಮನಗುಂಡಿ ಎಂಬ ಸ್ಥಳದಲ್ಲಿ ನಡೆದಿದ್ದ ಪ್ರಾಯೋಗಿಕವಾಗಿ ಬಾಂಬ್ ಸ್ಫೋಟದಲ್ಲಿ ಶಾರೀಕ್ ಪಾತ್ರವಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಆತನ ಬೆನ್ನು ಬಿದ್ದಿದ್ದರು. ನಂತರ ಆತ ತಲೆಮರೆಸಿಕೊಂಡಿದ್ದು ಇದೀಗ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಮಾಡಿ ಸಿಕ್ಕಿಬಿದ್ದಿದ್ದಾನೆ. ಪ್ರಕರಣದ ಆರೋಪಿ ಶಂಕಿತ ಉಗ್ರ ಶಾರೀಕ್ ಬಗ್ಗೆ ಆಘಾತಕಾರಿ ಅಂಶಗಳು ಬೆಳಕಿಗೆ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಇದೀಗ ಈ ಪ್ರಕರಣವನ್ನು ರಾಜ್ಯ ಸರ್ಕಾರ, ಎನ್‌ಐಎ ತನಿಖೆಗೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿತ್ತು. ಶಂಕಿತ ಉಗ್ರ ಶಾರೀಕ್ ವಿರುದ್ಧ ಯುಎಪಿಎ ಕಾಯ್ದೆ ಅನ್ವಯ ಎನ್‌ಐಎ ತನಿಖೆ ನಡೆಸಲು ರಾಜ್ಯ ಸರ್ಕಾರ ಶಿಫಾರಸು ಮಾಡಿತ್ತು.

೧೫ ವರ್ಷ ಹಳೆಯ ಎಲ್ಲ ಸರ್ಕಾರಿ ವಾಹನಗಳು ಗುಜರಿಗೆ

ನಾಗಪುರ, ನ. ೨೫: ೧೫ ವರ್ಷ ಪೂರೈಸಿದ ಭಾರತ ಸರ್ಕಾರಕ್ಕೆ ಸೇರಿದ ಎಲ್ಲಾ ವಾಹನಗಳನ್ನು ಗುಜರಿ (ಸ್ಕಾçö್ಯಪ್) ಹಾಕಲಾಗುವುದು ಮತ್ತು ಆ ನಿಟ್ಟಿನಲ್ಲಿ ಸ್ಕಾçö್ಯಪ್ ನೀತಿಯನ್ನು ರಾಜ್ಯಗಳಿಗೂ ಕಳುಹಿಸಲಾಗಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಶುಕ್ರವಾರ ಹೇಳಿದ್ದಾರೆ. ನಾಗಪುರದಲ್ಲಿ ವಾರ್ಷಿಕ ಕೃಷಿ-ವಿಷನ್, ಕೃಷಿ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಗಡ್ಕರಿ, 'ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ೧೫ ವರ್ಷ ಪೂರೈಸಿರುವ ಕೇಂದ್ರ ಸರ್ಕಾರ ಎಲ್ಲ ವಾಹನಗಳನ್ನು ಸ್ಕಾçö್ಯಪ್ ಮಾಡುವ ಕಡತಕ್ಕೆ ಸಹಿ ಮಾಡಿದ್ದೇನೆ. ಕೇಂದ್ರ ಸರ್ಕಾರ ಈ ನೀತಿಯನ್ನು ಎಲ್ಲ ರಾಜ್ಯಗಳಿಗೂ ಕಳುಹಿಸಿದ್ದೇನೆ. ಅವರು ಇದನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಪಾಣಿಪತ್‌ನಲ್ಲಿ ಇಂಡಿಯನ್ ಆಯಿಲ್‌ನ ಎರಡು ಸ್ಥಾವರಗಳು ಬಹುತೇಕ ಪ್ರಾರಂಭವಾಗಿದ್ದು, ಅದರಲ್ಲಿ ಒಂದು ದಿನಕ್ಕೆ ಒಂದು ಲಕ್ಷ ಲೀಟರ್ ಎಥೆನಾಲ್ ಅನ್ನು ಉತ್ಪಾದಿಸುತ್ತದೆ ಮತ್ತು ಇನ್ನೊಂದು ದಿನಕ್ಕೆ ೧೫೦ ಟನ್ ಬಯೋ-ಬಿಟುಮೆನ್ ಅನ್ನು ಭತ್ತದ ಹುಲ್ಲು ಬಳಸಿ ತಯಾರಿಸುತ್ತದೆ ಎಂದು ತಿಳಿಸಿದರು. ಇದು ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ದೇಶದ ಅಕ್ಕಿ ಉತ್ಪಾದಿಸುವ ಭಾಗಗಳಲ್ಲಿ ದೊಡ್ಡ ಬದಲಾವಣೆ ತರಲಿದೆ. ಅಲ್ಲಿ ಭತ್ತದ ಹುಲ್ಲು ಸುಡುವುದರಿಂದ ಮಾಲಿನ್ಯ ಉಂಟಾಗುತ್ತದೆ. ಈಗ, ಎಥೆನಾಲ್ ಮತ್ತು ಜೈವಿಕ ಬಿಟುಮೆನ್ ಉತ್ಪಾದಿಸಲು ಅಕ್ಕಿ ಹುಲ್ಲು ಬಳಸವುದರಿಂದ ವಾಯು ಮಾಲಿನ್ಯ ತಡೆಯಬಹುದು ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಮಹಿಳಾ ಆಯೋಗದ ದೂರುಗಳ ತನಿಖೆಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು, ನ. ೨೫: ಮಹಿಳಾ ಆಯೋಗದಿಂದ ಸ್ವೀಕಾರವಾದ ದೂರುಗಳನ್ನು ೭ ರಿಂದ ೮ ಗಂಟೆಯೊಳಗೆ ತನಿಖೆ ಪ್ರಾರಂಭಿಸಬೇಕೆAದು ಆಯೋಗದ ಮಹಾನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯ ಮಹಿಳಾ ಆಯೋಗದ ರಜತ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ಮಹಿಳಾ ಆಯೋಗಕ್ಕೆ ಸಮರ್ಥ ವಕೀಲರನ್ನು ನೇಮಕ ಮಾಡಲಾಗುವುದು, ಆಯೋಗ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲು ಅಗತ್ಯ ಮೂಲಭೂತ ಸೌಕರ್ಯ ಒದಗಿಸಲು ಸರ್ಕಾರ ಸಿದ್ಧವಿದೆ ಎಂದರು. ಮಹಿಳೆಯರ ಕಲ್ಯಾಣ ಮತ್ತು ಸುರಕ್ಷತೆಗಾಗಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಆಶಾ ಕಾರ್ಯಕರ್ತೆಯರು, ಅಡುಗೆ ಮಾಡುವವರ ಗೌರವ ಧನ ಹೆಚ್ಚಿಸಲಾಗಿದೆ. ಈ ವರ್ಷ ೪,೦೦೦ ಹೊಸ ಅಂಗನವಾಡಿಗಳು ನಿರ್ಮಾಣವಾಗುತ್ತಿದ್ದು, ಮಹಿಳೆಯರಿಗೆ ಎಲ್ಲಾ ಹಂತದ ನೆರವು ನೀಡಲಾಗುತ್ತಿದೆ. ಮಹಿಳೆಯರು ಸಬಲರಾದರೆ ದೇಶ ಸಬಲವಾಗುತ್ತದೆ ಎಂದು ಅವರು ತಿಳಿಸಿದರು. ನಿರ್ಭಯ ಯೋಜನೆಯಡಿ ಬೆಂಗಳೂರಿನಲ್ಲಿ ೭,೫೦೦ ಕೃತಕ ಬುದ್ದಿಮತ್ತೆಯ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುತ್ತಿದೆ. ಮಹಿಳಾ ಪೊಲೀಸ್ ಒಳಗೊಂಡ ಪಿಂಕ್ ಹೊಯ್ಸಳ ವಾಹನಗಳು ಮಹಿಳೆಯರನ್ನು ರಕ್ಷಿಸಲು ಸಂಚರಿಸುತ್ತವೆ. ಶಾಲಾ-ಕಾಲೇಜುಗಳ ಹಾಸ್ಟೆಲ್‌ಗಳಲ್ಲಿ ಅಲ್ಪಾವಧಿ ಸ್ವಯಂ ರಕ್ಷಣಾ ತರಬೇತಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು. ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್, ರಾಷ್ಟಿçÃಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮುಂದಿನ ವಾರದಿಂದ ಮೂರು ಬಣ್ಣಗಳೊಂದಿಗೆ ಟ್ವಿಟರ್

ನ್ಯೂಯಾರ್ಕ್, ನ. ೨೫: ಕೊನೆಗೂ ಟ್ವಿಟರ್ ಖಾತೆ ಪರಿಶೀಲನೆ ಕಾರ್ಯ ಮುಂದಿನ ವಾರದಿಂದ ಪ್ರಾರಂಭವಾಗಲಿದೆ. ಸಿಇಓ ಎಲೋನ್ ಮಸ್ಕ್, ಮೈಕ್ರೋಬ್ಲಾಗಿಂಗ್ ಸೈಟ್‌ನಲ್ಲಿ ಈ ವಿಷಯವನ್ನು ಪ್ರಕಟಿಸಿದ್ದಾರೆ. ವಿಳಂಬಕ್ಕೆ ಕ್ಷಮಿಸಿ, ಮುಂದಿನ ವಾರ ಶುಕ್ರವಾರದಂದು ನಾವು ತಾತ್ಕಾಲಿಕವಾಗಿ ಪರಿಶೀಲನಾ ಕಾರ್ಯ ಪ್ರಾರಂಭಿಸುತ್ತಿದ್ದೇವೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ಕಂಪನಿಗಳಿಗೆ ಚಿನ್ನದ ಬಣ್ಣ, ಸರ್ಕಾರಕ್ಕೆ ಬೂದು ಬಣ್ಣ ಮತ್ತು ವ್ಯಕ್ತಿಗಳಿಗೆ (ಸೆಲೆಬ್ರಿಟಿ ಅಥವಾ ಇಲ್ಲದಿರಲಿ) ನೀಲಿ ಬಣ್ಣ ಇರಲಿದೆ ಮತ್ತು ಚೆಕ್ ಮಾಡುವ ಮುನ್ನ ಎಲ್ಲಾ ಪರಿಶೀಲಿಸಿದ ಖಾತೆಗಳನ್ನು ಕೈಯಾರೆ ದೃಢೀಕರಿಸಲಾಗುವುದು ಎಂದು ಸ್ಪೆಸ್ ಎಕ್ಸ್ ಮಾಲೀಕರು ಹೇಳಿದ್ದಾರೆ. ವಿವಿಧ ಸಂಸ್ಥೆಗಳು ಮತ್ತು ವ್ಯಕ್ತಿಗಳಿಗೆ ವಿಭಿನ್ನ ಬಣ್ಣಗಳ ಬಳಕೆ ಬಗ್ಗೆ ಅವರು ಈ ಹಿಂದೆ ಟ್ವೀಟ್ ಮಾಡಿದ್ದರು ಆದರೆ ಇತ್ತೀಚೆಗೆ ವಿವರಗಳನ್ನು ಹೊರಹಾಕಿದ್ದಾರೆ. ಪರಿಶೀಲಿಸಿದ ವೈಯಕ್ತಿಕ ಖಾತೆಗಳು ನೀಲಿ ಬಣ್ಣವನ್ನು ಹೊಂದಿರುತ್ತವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.