*ಗೋಣಿಕೊಪ್ಪ, ನ. ೨೫: ಕನ್ನಡ ರಾಜ್ಯೋತ್ಸವ ಅಂಗವಾಗಿ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಬಾಲ ಭವನ ಸಮಿತಿ ವತಿಯಿಂದ ಗೋಣಿಕೊಪ್ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ನಾಡು ನುಡಿ ಸಂಬAಧಿಸಿದ ಗೀತೆಗಾಯನ ಸ್ಪರ್ಧೆಯನ್ನು ನಡೆಸಲಾಯಿತು.
ಒಂದರಿAದ ೧೦ನೇ ತರಗತಿಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಕನ್ನಡ ಗೀತೆಗಳನ್ನು ಹಾಡಿದರು. ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಸಂಶನಾ ಪತ್ರ ಮತ್ತು ನಗದು ರೂಪದ ಬಹುಮಾನ ನೀಡಲಾಯಿತು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಜೇಶ್ ಕೆ,ಆರ್, ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ರೀತಾ, ಶಾಲೆಯ ಮುಖ್ಯ ಶಿಕ್ಷಕ, ಜಿಲ್ಲಾ ಮುಖ್ಯ ಶಿಕ್ಷಕರ ಅಧ್ಯಕ್ಷÀ ಹೆಚ್.ಕೆ. ಕುಮಾರ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಂದ್ರ, ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಮಹೇಶ್, ಸಿಆರ್ಪಿ ರಾಧಾ, ನೇತ್ರ, ತಂಗಮ್ಮ ಹಾಗೂ ಶಾಲಾ ಮಕ್ಕಳು ಶಾಲಾ ಶಿಕ್ಷಕರು ಇದ್ದರು.