ಸೋಮವಾರಪೇಟೆ, ನ. ೨೪: ಪ್ರಸಕ್ತ ಸಾಲಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿAದ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು, ಮಡಿಕೇರಿ ಕ್ಷೇತ್ರದಿಂದ ೭ ಅಭ್ಯರ್ಥಿಗಳು, ವೀರಾಜಪೇಟೆ ಕ್ಷೇತ್ರದಿಂದ ೩ ಅಭ್ಯರ್ಥಿಗಳು ಸೇರಿ ಒಟ್ಟು ೧೦ ಮಂದಿ ಟಿಕೆಟ್‌ಗಾಗಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ.
ಕೊನೆ ಕ್ಷಣದಲ್ಲಿ ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿರುವ ಸೋಮವಾರಪೇಟೆ ತಾ.ಪಂ. ಮಾಜಿ ಅಧ್ಯಕ್ಷ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿರುವ, ಪ್ರಸ್ತುತ ಕೊಡಗು ಕಾಂಗ್ರೆಸ್ ಉಪಾಧ್ಯಕ್ಷರೂ ಆಗಿರುವ ಕೆ.ಎಂ. ಲೋಕೇಶ್ ಅವರು, ತಾವು ಪಕ್ಷಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಬಾರಿ ಟಿಕೆಟ್ ಲಭಿಸುವ ನಿರೀಕ್ಷೆಯಿದೆ ಎಂದು ‘ಶಕ್ತಿ’ಗೆ ತಿಳಿಸಿದ್ದಾರೆ.
ಮಡಿಕೇರಿ ಮತ್ತು ಸೋಮವಾರಪೇಟೆ ಕ್ಷೇತ್ರದಲ್ಲಿ ಈ ಹಿಂದೆ ಕಾಂಗ್ರೆಸ್ ಪಕ್ಷ ಬಲಕಳೆದುಕೊಂಡಿದ್ದ ಸಂದರ್ಭ ಅದರ ನೇತೃತ್ವವನ್ನು ವಹಿಸಿ ಬೂತ್ ಮಟ್ಟದಿಂದಲೂ ಪಕ್ಷ ಸಂಘಟಿಸಿದ್ದೇನೆ. ಇತರ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಕಾಂಗ್ರೆಸ್‌ಗೆ ಕರೆತಂದು, ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗದಂತೆ ನೋಡಿಕೊಂಡಿದ್ದೇನೆ. ಪಕ್ಷದ ಎಲ್ಲಾ ಕಾರ್ಯಕ್ರಮವನ್ನು ಬ್ಲಾಕ್‌ನ ಮುಖಂಡರೊAದಿಗೆ ಯಶಸ್ವಿಗೊಳಿಸಿದ್ದೇನೆ ಎಂದು ತಿಳಿಸಿದ್ದಾರೆ.