ಮಡಿಕೇರಿ, ನ.೨೫ : ಜಿಲ್ಲಾ ಮಟ್ಟದಲ್ಲಿ ವಿಶ್ವ ವಿಶೇಷಚೇತನರ ದಿನಾಚರಣೆ ಆಚರಿಸುವ ಸಲುವಾಗಿ ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನೆ, ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ, ಪಾಲಿಬೆಟ್ಟ ಚೆಷೈರ್ ಹೋಂ ಶಾಲೆ, ದೇವರಪುರ ಅಮೃತವಾಣಿ ಶಾಲೆ, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್, ಎಂಆರ್‌ಡಬ್ಲೂö್ಯ, ವಿಆರ್‌ಡಬ್ಲೂö್ಯ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವೀರಾಜಪೇಟೆ ತಾಲೂಕಿನ ವಿಶೇಷಚೇತನರಿಗೆ ತಾಲ್ಲೂಕು ಮಟ್ಟದ ಕ್ರೀಡಾ ಮತ್ತು ಪ್ರತಿಭಾ ಸ್ಪರ್ಧೆಯು ತಾ. ೨೮ ರಂದು ಬೆಳಗ್ಗೆ ೧೦ ಗಂಟೆಗೆ ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆಯಲಿದೆ. ಈ ಆಟೋಟ ಸ್ಪರ್ಧೆಯಲ್ಲಿ ವೀರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕಿನ ವಿಶೇಷ ಚೇತನರು ಭಾಗವಹಿಸುವಂತೆ ಪೊನ್ನಂಪೇಟೆ ತಾಲ್ಲೂಕು ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.