ಕೂಡಿಗೆ, ನ. ೨೫: ಕೂಡಿಗೆ ಪದವಿಪೂರ್ವ ಕಾಲೇಜಿನ ಪೋಷಕರ ಸಭೆಯು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಪದವಿಪೂರ್ವ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲಿನ ಅಂಕಪಟ್ಟಿಗಳನ್ನು ಪೋಷಕರು ವೀಕ್ಷಣೆ ಮಾಡುವುದು, ಕಲಾ ವಿಭಾಗ, ವಿಜ್ಞಾನ ವಿಭಾಗ ಮತ್ತು ವಾಣಿಜ್ಯ ವಿಭಾಗಗಳಲ್ಲಿ ವಿದ್ಯಾರ್ಥಿಗಳ ಪ್ರಗತಿಯ ಪರಿಶೀಲನೆ ಸೇರಿದಂತೆ ಕಾಲೇಜು ಅಭಿವೃದ್ಧಿಗೆ ಸಂಬAಧಿಸಿದAತೆ ವಿವಿಧ ವಿಷಯಗಳ ಬಗ್ಗೆ ಪೋಷಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಕಾಲೇಜು ಪ್ರಾಂಶುಪಾಲ ಡಾ. ಬಸಪ್ಪನವರು ಕಾಲೇಜು ವಿದ್ಯಾರ್ಥಿಗಳ ಪ್ರಗತಿಗೆ ಪೋಷಕರ ಪಾತ್ರ ಮುಖ್ಯವಾಗಿರುತ್ತದೆ. ಪೋಷಕರು ವಿದ್ಯಾರ್ಥಿಗಳ ಚಲನ ವಲನಗಳ ಬಗ್ಗೆ ಗಮನಹರಿಸಿ ಮುಂದಿನ ಶೈಕ್ಷಣಿಕ ಫಲಿತಾಂಶದ ಪ್ರಗತಿಗೆ ಸಹಕಾರವನ್ನು ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಎಂ.ಬಿ. ಮಹೇಶ್, ಪ್ರಾಂಶುಪಾಲ ಮತ್ತು ಉಪನ್ಯಾಸಕ ವೃಂದದವರು ಹಾಜರಿದ್ದರು.