ಪೊನ್ನಂಪೇಟೆ: ವಿಶ್ವ ಶೌಚಾಲಯ ದಿನದ ಅಂಗವಾಗಿ ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ವಚ್ಛ ಭಾರತ್ ಮಿಷನ್ -೨ ರ ಅಡಿಯಲ್ಲಿ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮ ಮಟ್ಟದ ಸ್ವಚ್ಛತಾ ಓಟ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಪೊನ್ನಂಪೇಟೆ ತಾಲೂಕು ಕಚೇರಿ ಮುಂಭಾಗದಿAದ ಇಲ್ಲಿನ ಕಾನೂರು ಜಂಕ್ಷನ್‌ವರೆಗೆ ನಡೆದ ಓಟದ ಸ್ಪರ್ಧೆಯಲ್ಲಿ ಬಾಲಕರ ವಿಭಾಗದಲ್ಲಿ ಬಿ.ಪಿ.ಮೋಹನ್ ಪ್ರಥಮ, ವಚನ್ ಉತ್ತಪ್ಪ ದ್ವಿತೀಯ, ತನಿಶ್ ತಮ್ಮಯ್ಯ ತೃತೀಯ, ಆರ್ಯನ್ ೪ನೇ ಹಾಗೂ ತನಿಶ್ ಮಾದಪ್ಪ ೫ ನೇ ಸ್ಥಾನ ಪಡೆದುಕೊಂಡರು. ಬಾಲಕಿಯರ ವಿಭಾಗದಲ್ಲಿ ಯಜ್ಞ ಪ್ರಥಮ, ಕೌಶಲ್ಯ ದ್ವಿತೀಯ, ಕ್ಯೂಮಿಕ ತೃತೀಯ, ತಪಸ್ವಿ ತಂಗಮ್ಮ ೪ ನೇ ಹಾಗೂ ದಿಯಾ ೫ ನೇ ಸ್ಥಾನ ಪಡೆದುಕೊಂಡರು.

ಗ್ರಾ.ಪA. ಅಧ್ಯಕ್ಷೆ ಗಿರಿಜಾ ವೆಂಕಟೇಶ್ ಸ್ವಚ್ಛತಾ ಪ್ರತಿಜ್ಞಾವಿಧಿ ಬೋಧಿಸಿದರು. ಪಿಡಿಓ ಪುಟ್ಟರಾಜು ಅಭಿಯಾನದ ಬಗ್ಗೆ ಮಾಹಿತಿ ನೀಡಿದರು. ಗ್ರಾ.ಪಂ.ಉಪಾಧ್ಯಕ್ಷೆ ಬೊಟ್ಟಂಗಡ ದಶಮಿ ಸದಾ ಸ್ವಚ್ಛತಾ ಓಟಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಸ್ವಚ್ಛ ಭಾರತ್ ಮಿಷನ್‌ನ ತಾಲೂಕು ನೋಡಲ್ ಅಧಿಕಾರಿ ಸೂರಜ್, ಗ್ರಾ.ಪಂ. ಸದಸ್ಯರಾದ ರಾಮಕೃಷ್ಣ, ಅಜೀಜ್, ವಿಜಯ್ ಕುಮಾರ್, ಜುನೈದ್ ಹಿರಿಯ ಅಂರ‍್ರಾಷ್ಟಿçÃಯ ಓಟಗಾರ ಪೆಮ್ಮಂಡ ಅಪ್ಪಯ್ಯ, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾಕಾರ್ಯಕರ್ತೆಯರು, ಪಂಚಾಯಿತಿ ಸಿಬ್ಬಂದಿ, ಕ್ರೀಡಾ ವಸತಿ ನಿಲಯ ತರಬೇತುದಾರರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.ಮುಳ್ಳೂರು: ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ಆಲೂರುಸಿದ್ದಾಪುರ ಗ್ರಾ.ಪಂ. ಮತ್ತು ಸ್ವಚ್ಛ ಭಾರತ್ ಮಿಷನ್-೨ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಮಾಹಿತಿ ಮತ್ತು ಸ್ವಚ್ಛತಾ ಓಟ-೨೦೨೨ ಜನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ವಿಶ್ವ ಶೌಚಾಲಯ ದಿನದ ಅಂಗವಾಗಿ ಆಲೂರುಸಿದ್ದಾಪುರ ಸರಕಾರಿ ಪ್ರೌಢಶಾಲೆ ಮತ್ತು ಸರಕಾರಿ ಕೈಗಾರಿಕಾ ತರಬೆೆÃತಿ ಕೇಂದ್ರದ ವಿದ್ಯಾರ್ಥಿಗಳು ಸ್ವಚ್ಛತಾ ಓಟ-೨೦೨೨ ದಿನದ ಪ್ರಯುಕ್ತ ಆಲೂರುಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಿAದ ಗ್ರಾಮ ಪಂಚಾಯಿತಿವರೆಗೆ ಓಟದ ಮೂಲಕ ದಿನದ ಮಹತ್ವ ಕುರಿತು ಜನ ಜಾಗೃತಿ ಮೂಡಿಸಿದರು. ಆಲೂರುಸಿದ್ದಾಪುರ ಗ್ರಾ.ಪಂ. ಉಪಾಧ್ಯಕ್ಷೆ ದಮಯಂತಿ ಕರುಂಬಯ್ಯ ಸ್ವಚ್ಛತಾ ಓಟಕ್ಕೆ ಚಾಲನೆ ನೀಡಿದರು.

ಸಾರ್ವಜನಿಕ ಸಮುದಾಯ ಭವನದಲ್ಲಿ ನಡೆದ ವಿಶ್ವ ಶೌಚಾಲಯ ದಿನಾಚರಣೆಯ ಮಾಹಿತಿ ಕಾರ್ಯಕ್ರಮದಲ್ಲಿ ದಿನದ ಮಹತ್ವ ಕುರಿತು ಆಲೂರುಸಿದ್ದಾಪುರ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಹರೀಶ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ -ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ಶೌಚಾಲಯದ ವ್ಯವಸ್ಥೆ ಮಾಡಿಕೊಳ್ಳುವುದು ಅಗತ್ಯ ಇದೆ ಎಂದರು. ಸರಕಾರದ ಸ್ವಚ್ಛ ಭಾರತ್ ಯೋಜನೆಯಲ್ಲಿ ಬಯಲು ಮುಕ್ತ ಶೌಚಾಲಯ ಕಾರ್ಯಕ್ರಮವು ಒಂದಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ ಗ್ರಾ.ಪಂ.ಗಳ ಮೂಲಕ ಪ್ರತಿ ಗ್ರಾಮಗಳ ಪ್ರತಿ ಮನೆಗಳಲ್ಲಿ ಶೌಚಾಲಯ ವ್ಯವಸ್ಥೆ ಮಾಡಿಕೊಳ್ಳಲು ನೆರವು ಮತ್ತು ಮಾಹಿತಿಯನ್ನು ನೀಡುತ್ತಿದೆ. ಪ್ರತಿಯೊಂದು ಗ್ರಾ.ಪಂ.ಗಳು ಬಯಲು ಮುಕ್ತ ಶೌಚಾಲಯವಾಗಬೇಕೆಂಬ ಉದ್ದೇಶದಿಂದ ವಿಶ್ವ ಶೌಚಾಲಯ ದಿನವನ್ನು ಗ್ರಾ.ಪಂ.ಗಳು ಆಚರಿಸುತ್ತಿವೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ಅಥವಾ ಅಕ್ಕಪಕ್ಕದ ಮನೆಗಳಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲದಿದ್ದಲ್ಲಿ ಪೋಷಕರಿಗೆ ವ್ಯವಸ್ಥೆ ಮಾಡಿಕೊಳ್ಳುವಂತೆ ಅರಿವು ಮೂಡಿಸುವಂತೆ ಸಲಹೆ ನೀಡಿದರು.

ಅರಿವು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸ್ವಚ್ಛತಾ ಪ್ರತಿಜ್ಞೆ ವಿಧಿ ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ದಮಯಂತಿ ಕರುಂಬಯ್ಯ, ಸರಕಾರಿ ಪ್ರೌಢಶಾಲಾ ಶಿಕ್ಷಕ ಜವರಯ್ಯ, ಸಂಜೀವಿನಿ ಒಕ್ಕೂಟದ ತಾಲೂಕು ವಲಯ ಮೇಲ್ವಿಚಾರಕಿ ಭವ್ಯ ಹಾಜರಿದ್ದರು.ಕೂಡಿಗೆ: ಸ್ವಚ್ಛ ಭಾರತ್ ಅಭಿಯಾನದಡಿ ಸೋಮವಾರಪೇಟೆ ತಾಲೂಕು ಪಂಚಾಯಿತಿ ಸಹಯೋಗದೊಂದಿಗೆ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಹಾಗೂ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್, ಎನ್.ಎಸ್.ಎಸ್. ಘಟಕ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಕೂಡ್ಲೂರು ಗ್ರಾಮದಲ್ಲಿ ವಿಶ್ವ ಶೌಚಾಲಯ ದಿನವನ್ನು ಆಚರಿಸಲಾಯಿತು.

ವಿಶ್ವ ಶೌಚಾಲಯ ದಿನದ ಮಹತ್ವ ಕುರಿತು ಮಾಹಿತಿ ನೀಡಿದ ರಾಷ್ಟಿçÃಯ ಹಸಿರು ಪಡೆಯ ಕೊಡಗು ಜಿಲ್ಲಾ ನೋಡಲ್ ಅಧಿಕಾರಿಯೂ ಆದ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಸ್ವಚ್ಛತೆ, ಆರೋಗ್ಯ ಮತ್ತು ನೈರ್ಮಲ್ಯದ ಮಹತ್ವದ ಬಗ್ಗೆ ಅರಿವು ಮೂಡಿಸುವುದೇ ಈ ದಿನದ ಗುರಿಯಾಗಿದೆ. ನಾವು ಪ್ರತಿನಿತ್ಯ ಬಳಸುವ ಶೌಚಾಲಯವನ್ನು ನಾವು ಬಳಸಿದ ನಂತರ ಸ್ವತಃ ನಾವೇ ಸ್ವಚ್ಛಗೊಳಿಸುವ ಮೂಲಕ, ಶೌಚಾಲಯವನ್ನು ಸ್ವಚ್ಛತೆ ಮತ್ತು ನೈರ್ಮಲ್ಯದಿಂದ ಬಳಕೆ ಮಾಡಿದರೆ ಉತ್ತಮ ಆರೋಗ್ಯ ಹಾಗೂ ಯೋಗಕ್ಷೇಮ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದರು. ವಿಶ್ವ ಶೌಚಾಲಯ ದಿನದ ಅಂಗವಾಗಿ ಏರ್ಪಡಿಸಿದ್ದ ಸ್ವಚ್ಛತಾ ಓಟ ಹಾಗೂ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಪ್ರತಿಯೊಬ್ಬರೂ ಪ್ರತಿನಿತ್ಯ ಶೌಚಾಲಯ ಬಳಕೆ ಮಾಡುವ ಮೂಲಕ ಸಾಂಕ್ರಾಮಿಕ ರೋಗಗಳಿಂದ ದೂರವಿದ್ದು, ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕಿದೆ ಎಂದರು. ದಿನದ ಉದ್ದೇಶದ ಕುರಿತು ಮಾಹಿತಿ ನೀಡಿದ ಶಾಲೆಯ ಇಕೋ ಕ್ಲಬ್‌ನ ಉಸ್ತುವಾರಿ ಶಿಕ್ಷಕಿ ಬಿ.ಡಿ. ರಮ್ಯ, ನಾವು ಈಗ ತಾಂತ್ರಿಕವಾಗಿ ಹೆಚ್ಚು ಪ್ರಗತಿ ಹೊಂದುತ್ತಿದ್ದರೂ ಭಾರತ ಸೇರಿದಂತೆ ಇನ್ನೂ ಹಲವು ದೇಶಗಳಲ್ಲಿ ಬಯಲು ಶೌಚಾಲಯಗಳಿಂದ ಮುಕ್ತವಾಗಿಲ್ಲ. ಆದ್ದರಿಂದ, ನಾವು ಬಯಲು ಶೌಚಾಲಯ ಬಳಕೆಯಿಂದ ಉಂಟಾಗುವ ಸಾಂಕ್ರಾಮಿಕ ರೋಗಗಳಿಂದ ಮುಕ್ತಿಹೊಂದಿ ಉತ್ತಮ ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಶೌಚಾಲಯವನ್ನು ಬಳಕೆ ಮಾಡಿಕೊಳ್ಳಬೇಕಾಗಿದೆ ಎಂದರು. ಪ್ರೌಢಶಾಲಾ ಶಿಕ್ಷಕರಾದ ಕೆ. ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಅನ್ಸಿಲಾ ರೇಖಾ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಹೆಚ್.ಎಸ್. ಸುಜಾತ, ಪಂಚಾಯಿತಿ ಸಿಬ್ಬಂದಿಗಳಾದ ಎಂ.ಎಲ್. ಅವಿನಾಶ್, ಮಮತ, ಶಿಕ್ಷಕರು, ಪಂಚಾಯಿತಿ ನೌಕರರು ಇದ್ದರು.

ಇದೇ ವೇಳೆಯಲ್ಲಿ ಶಾಲಾ ಮೈದಾನದಲ್ಲಿ ಸ್ವಚ್ಛತೆಗಾಗಿ ಓಟ ನಡೆಸಲಾಯಿತು. ನಂತರ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಕೂಡ್ಲೂರು ಗ್ರಾಮದಲ್ಲಿ ಜಾಥಾ ನಡೆಸುವ ಮೂಲಕ ಶೌಚಾಲಯದ ಸ್ವಚ್ಛತೆ, ಆರೋಗ್ಯ ಹಾಗೂ ನೈರ್ಮಲ್ಯದ ಕುರಿತಾದ ಭಿತ್ತಿಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುವ ಮೂಲಕ ಜನಜಾಗೃತಿ ಮೂಡಿಸಿದರು. ನಂತರ ಕೂಡ್ಲೂರು ಗ್ರಾಮದಲ್ಲಿ ವಿಶ್ವ ಶೌಚಾಲಯದ ದಿನ ಮಹತ್ವ ಕುರಿತು ಜಾಗೃತಿ ಜಾಥಾ ನಡೆಸಲಾಯಿತು.

ವಿಶ್ವ ಶೌಚಾಲಯ ದಿನದ ಅಂಗವಾಗಿ ಶಾಲಾ ಮೈದಾನದಲ್ಲಿ ಮಕ್ಕಳಿಗೆ ಸ್ವಚ್ಛತಾ ಓಟವನ್ನು ಹಮ್ಮಿಕೊಳ್ಳಲಾಯಿತು. ನಂತರ ಶಾಲೆಯಿಂದ ಕೂಡ್ಲೂರು ಗ್ರಾಮದಲ್ಲಿ ಜಾಗೃತಿ ಜಾಥಾ ನಡೆಸಿದ ಮಕ್ಕಳು ಭಿತ್ತಿಫಲಕಗಳನ್ನು ಹಿಡಿದು ಜನರಲ್ಲಿ ಶೌಚಾಲಯ ಬಳಕೆಯ ಮಹತ್ವ ಕುರಿತು ಜಾಗೃತಿ ಮಂಡಿಸಲಾಯಿತು.

ವಿದ್ಯಾರ್ಥಿಗಳು ಜಾಥಾದಲ್ಲಿ ಸ್ವಚ್ಛತೆಯೇ ಸೇವೆ, ಸ್ವಚ್ಚತೆ ಇದ್ದಲ್ಲಿ ಆರೋಗ್ಯ, ಶೌಚಾಲಯ ಬಳಸಿ - ಆರೋಗ್ಯ ರಕ್ಷಿಸಿ, ಬಯಲು ಶೌಚಾಲಯ ಮುಕ್ತಗೊಳಿಸೋಣ ಬನ್ನಿ ಎಂಬಿತ್ಯಾದಿ ಘೋಷಣೆಗಳನ್ನು ಪ್ರಚುರಪಡಿಸಿದರು.

ದಿನದ ಅಂಗವಾಗಿ ಮಕ್ಕಳಿಗೆ ಶೌಚಾಲಯದ ಮಾದರಿ ತಯಾರಿಕೆ, ಚಿತ್ರಕಲಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.