ಕೂಡಿಗೆ, ನ. ೨೫: ಕೂಡಿಗೆ ಗ್ರಾಮ ಪಂಚಾಯಿತಿಯ ಮಾಸಿಕ ಸಭೆ ಮಂಗಳಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ಜರುಗಿತು. ಜಲ ಜೀವನ್ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಂಬAಧಿಸಿದ ಇಲಾಖೆಯವರನ್ನು ಒತ್ತಾಯ ಮಾಡುವಂತೆ ಮತ್ತು ೧೫ನೇ ಹಣಕಾಸು ಯೋಜನೆಯಲ್ಲಿ ಕ್ರಿಯಾ ಯೋಜನೆಗೊಂಡ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಹಾಜರಿದ್ದ ಸರ್ವ ಸದಸ್ಯರು ಸಭೆಯ ಮೂಲಕ ಒತ್ತಾಯ ಮಾಡಿದರು.

ಕಾಮಗಾರಿಗಳಿಗೆ ಕ್ರಿಯಾ ಯೋಜನೆಯ ಮೂಲಕ ಹಣವನ್ನು ಬಿಡುಗಡೆಗೊಳಿಸಿದರೂ ಸಹ ಅನೇಕ ಗ್ರಾಮಗಳಲ್ಲಿ ಕಾಮಗಾರಿಯು ಪೂರ್ಣಗೊಂಡಿರುವುದಿಲ್ಲ. ಆದ್ದರಿಂದ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸುವಂತೆ ಸಭೆಯಲ್ಲಿ ತೀರ್ಮಾಸಿದರು.

ನಂತರ ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ಜಲ ಜೀವನ್ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳು ಉಪ ಗ್ರಾಮಗಳಲ್ಲಿ ಸರಿಯಾದ ರೀತಿಯಲ್ಲಿ ಪೂರ್ಣಗೊಳಿಸಲು ಸಂಬAಧಿಸಿದ ಅಧಿಕಾರಿಗಳಿಗೆ ಪತ್ರ ವ್ಯವಹಾರವನ್ನು ನಡೆಸುವಂತೆ ಸಭೆಯಲ್ಲಿ ಚರ್ಚೆಗಳು ನಡೆದಿವೆ.

ನಂತರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಚಿತ್ವದ ಬಗ್ಗೆ ಹೆಚ್ಚಿನ ಗಮನವನ್ನು ಹರಿಸಿ ಸ್ವಚ್ಛತೆಯನ್ನು ಕಾಪಾಡಲು ಹೆಚ್ಚಿನ ಅನುದಾನವನ್ನು ಕಾಯ್ದಿರಿಸಿ, ಅಭಿವೃದ್ಧಿಗೆ ಪೂರಕವಾದ ಅಂಶಗಳನ್ನು ಕೈಗೊಳ್ಳುವ ವಿಷಯದ ಬಗ್ಗೆ ಚರ್ಚಿಸಿದರು. ಈಗಾಗಲೇ ಸರಕಾರದ ನಿಯಮಗಳ ಪ್ರಕಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಿಳಾ ಕ್ರೀಡಾ ಕೂಟ ಮತ್ತು ಸಾರ್ವಜನಿಕ ಕ್ರೀಡಾಕೂಟಗಳನ್ನು ಏರ್ಪಡಿಸುವ ಬಗ್ಗೆ ಚರ್ಚೆಗಳು ನಡೆದವು.

ಅಭಿವೃದ್ಧಿ ಅಧಿಕಾರಿ ಎಂ.ಕೆ. ಅಯಿಷಾ ಸಭೆಗೆ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ಸಮರ್ಪಕವಾದ ಮಾಹಿತಿಯನ್ನು ಒದಗಿಸಿದರು. ಅಲ್ಲದೆ ಮುಂದಿನ ದಿನಗಳಲ್ಲಿ ಶುಚಿತ್ವ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆಧ್ಯತೆಯನ್ನು ನೀಡಲಾಗುವುದು. ಸಾರ್ವಜನಿಕ, ಮತ್ತು ಅಂಗಡಿ ಮಾಲೀಕರು ಪ್ಲಾಸ್ಟಿಕ್ ಬಳಕೆ ಮಾಡಿದರೆ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದಕ್ಕೆ ಸಂಬAಧಿಸಿದAತೆ ಸಾರ್ವಜನಿಕವಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗ್ರಾಮದ ಪ್ರಗತಿಗೆ ಸಾರ್ವಜನಿಕರ ಕಂದಾಯವನ್ನು ಸಂದಾಯ ಮಾಡುವ ಮೂಲಕ ಸಹಕಾರ ನೀಡಬೇಕು. ಅಲ್ಲದೆ ಅಂಗಡಿ ಮಳಿಗೆಗಳ ಪರವಾನಿಗೆಯನ್ನು ನವೀಕರಣ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭ ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ, ಸದಸ್ಯರಾದ ಟಿ.ಪಿ. ಹಮೀದ್, ಅನಂತ್, ಶಿವಕುಮಾರ್, ಹೆಚ್.ಎಸ್. ರವಿ, ಚಂದ್ರು, ಜಯಶ್ರೀ, ಜಯಶೀಲಾ, ವಾಣಿ ಹಾಜರಿದ್ದರು.