ಮಡಿಕೇರಿ, ನ. ೨೬ : ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿಸೆಂಬರ್ ೭ ರಂದು ಬೆಳಗ್ಗೆ ೧೧ ಗಂಟೆಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ಮತ್ತು ಬೆಳಗ್ಗೆ ೧೧.೩೦ ಕ್ಕೆ ಕೊಡಗು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಪ್ರಾಧಿಕಾರದ ಸದಸ್ಯರೂ ಆದ ಜಿಲ್ಲಾ ಪೊಲೀಸ್ ಅಧೀಕ್ಷಕರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಪ್ರಾದೇಶಿಕ ಸಾರಿಗೆ ಅಧಿಕಾರಿ ಅವರು ತಿಳಿಸಿದ್ದಾರೆ.