ಹೆಬ್ಬಾಲೆ, ನ. ೨೬: ಹೆಬ್ಬಾಲೆ ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ಬನಶಂಕರಿ ದೇವಿಯ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಶನಿವಾರ ಏರ್ಪಡಿಸಿದ್ದ ಗ್ರಾಮೀಣ ಜಾನಪದ ಕ್ರೀಡೆಯಾದ ಎತ್ತಿನ ಗಾಡಿ ಓಟ ಹಾಗೂ ಚಕ್ರಕಟ್ಟಿ ಗಾಡಿ ಓಡಿಸುವ ಸ್ಪರ್ಧೆಗಳು ನೆರೆದಿದ್ದ ಕ್ರೀಡಾ ಪ್ರೇಮಿಗಳ ಮನರಂಜಿಸುವ ರೋಮಾಂಚನಕಾರಿ ಅನುಭವ ನೀಡಿತು.

ಬನಶಂಕರಿ ಅಮ್ಮನವರ ಹಬ್ಬದ ಅಂಗವಾಗಿ ನಡೆದ ಈ ಗಾಡಿ ಓಟದ ಸ್ಪರ್ಧೆಯಲ್ಲಿ ಹೆಬ್ಬಾಲೆ ಸುತ್ತಮುತ್ತಲಿನ ಜನರು ಸೇರಿದಂತೆ ಮೈಸೂರು, ಚಿಕ್ಕಮಗಳೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಗಳ ಗಡಿ ಭಾಗದ ಜನತೆ ಭಾಗವಹಿಸಿದ್ದು ವಿಶೇಷವೆನಿಸಿತ್ತು.

ಗ್ರಾಮದ ಮಾದರಿ ಯುವಕ ಸಂಘದ ಆಶ್ರಯದಲ್ಲಿ ನಡೆದ ಸ್ಪರ್ಧೆಯಲ್ಲಿ ಚಕ್ರಕಟ್ಟಿ ಗಾಡಿ ಓಡಿಸುವ ಸ್ಪರ್ಧೆ ಗೆ ೧೦೦ ಮೀಟರ್ ದೂರ ನಿಗದಿಪಡಿಸಲಾಗಿತ್ತು.

ಭತ್ತದ ಕೊಯ್ಲು ಆರಂಭಗೊಳ್ಳುತ್ತಿದ್ದAತೆ ಸುಗ್ಗಿಗೆ ಮುನ್ನ ವರ್ಷಕ್ಕೆ ಒಮ್ಮೆ ಬನಶಂಕರಿ ಅಮ್ಮನ ಹಬ್ಬದ ಅಂಗವಾಗಿ ನಡೆಯುವ ಈ ಸ್ಪರ್ಧೆಯಲ್ಲಿ ಭಾಗವಹಿಸುವ ರೈತಾಪಿ ವರ್ಗದವರು ಗಾಡಿ ಓಟಕ್ಕೆ ಎತ್ತುಗಳನ್ನು ತಯಾರು ಮಾಡಿ ಗಾಡಿಗಳನ್ನು ಅಣಿಗೊಳಿಸುವದು ಇಲ್ಲಿ ಮೊದಲಿನಿಂದಲೂ ನಡೆದುಕೊಂಡು ಬಂದಿರುವ ಈ ಜಾತ್ರೆಯ ವೈಶಿಷ್ಟö್ಯವಾಗಿದೆ.

ಎತ್ತಿನ ಗಾಡಿ ಸ್ಪರ್ಧೆಯಲ್ಲಿ ಮೊದಲ ಮೂರು ಸ್ಥಾನ ಗಳಿಸಿದ ಎತ್ತಿನ ಗಾಡಿ ಮಾಲೀಕರಿಗೆ ಕ್ರಮವಾಗಿ ೮ ಗ್ರಾಂ ಚಿನ್ನ ಹಾಗೂ ೬ ಗ್ರಾಂ.ಚಿನ್ನ, ತೃತೀಯ ಬಹುಮಾನ ೪ ಗ್ರಾಂ. ಚಿನ್ನವನ್ನು ಬಹುಮಾನ ರೂಪದಲ್ಲಿ ವಿಜೇತರಿಗೆ ವಿತರಿಸಲಾಯಿತು.

ಚಕ್ರಕಟ್ಟಿ ಗಾಡಿ ಓಡಿಸುವ ಸ್ಪರ್ಧೆಗೆ ೨೪ ಕ್ಕೂ ಹೆಚ್ಚಿನ ಎತ್ತಿನ ಗಾಡಿ ಮಾಲೀಕರು ಪಾಲ್ಗೊಂಡಿದ್ದರು. ಎತ್ತಿನ ಗಾಡಿ ಓಟವನ್ನು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಸಲಾಯಿತು.

ರೋಮಾಂಚನಕಾರಿ ಹಾಗೂ ಸಾಹಸಮಯ ಕ್ರೀಡೆಯಾದ ಎತ್ತಿನ ಗಾಡಿ ಸ್ಪರ್ಧೆ ವೀಕ್ಷಿಸಲು ಸಾವಿರಾರೂ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.

ಗ್ರಾಮೀಣ ಪ್ರದೇಶದ ಜಾನಪದ ಕ್ರೀಡೆಗಳಲ್ಲಿ ಒಂದಾದ ಎತ್ತಿನ ಗಾಡಿ ಸ್ಪರ್ಧೆಯನ್ನು ಕಳೆದ ೨೩ ವರ್ಷಗಳಿಂದ ಮಾದರಿ ಯುವಕ ಸಂಘವು ನಡೆಸಿಕೊಂಡು ಬರುವ ಮೂಲಕ ಗ್ರಾಮೀಣ ಕ್ರೀಡೆಯ ಬೆಳವಣಿಗೆಗೆ ಒತ್ತು ನೀಡಲಾಗುತ್ತಿದೆ.

ಬೆಳಿಗ್ಗೆ ೧೨.೩೦ ಗÀಂಟೆಗೆ ಎತ್ತಿನ ಗಾಡಿ ಸ್ಪರ್ಧೆ ಆರಂಭಗೊAಡ ಸಂದರ್ಭ ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನರು ಶಿಳ್ಳೆ ಹೊಡೆಯುತ್ತ ಕೂಗುವ ಮೂಲಕ ಎತ್ತುಗಳಿಗೆ ಹುರಿದುಂಬಿಸುತ್ತಿದ್ದ ದೃಶ್ಯ ಎಲ್ಲೆಡೆ ಕಂಡು ಬರುತ್ತಿತ್ತು. ಕೆಲವು ಎತ್ತಿನ ಗಾಡಿಗಳು ಯಾದ್ವತದ್ವ ಓಡುತ್ತ ಜನರತ್ತ ಧಾವಿಸಿ ಬಂದವು ಆದರೆ ಯಾವುದೇ ಅಪಾಯ ಸಂಭವಿಸಲಿಲ್ಲ.

ದಿನವಿಡೀ ನಡೆದ ಕ್ರೀಡಾಕೂಟ ದಲ್ಲಿ ಮಕ್ಕಳು ಮಹಿಳೆಯರು ಹಾಗೂ ವೃದ್ಧರು ಸಾಮೂಹಿಕವಾಗಿ ಪಾಲ್ಗೊಂಡಿದ್ದುದು ಕಂಡುಬAದಿತು. ಜಾತ್ರೆಯ ಅಂಗವಾಗಿ ಏರ್ಪಡಿಸಿದ್ದ ಎತ್ತಿನ ಗಾಡಿ ಓಟ ಸ್ಪರ್ಧೆಯನ್ನು ಉದ್ಯಮಿ ಮೋಹನ್ ಲಾಲ್ ಚೌದರಿ ಉದ್ಘಾಟಿಸಿದರು. ಗ್ರಾಮೀಣ ಕ್ರೀಡಕೂಟಗಳಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎಸ್.ಮಂಜುನಾಥ್ ಚಾಲನೆ ನೀಡಿದರು.

ತೀರ್ಪುಗಾರರಾಗಿ ದೈಹಿಕ ಶಿಕ್ಷಣ ಶಿಕ್ಷಕರಾದ ಕರುಂಬಯ್ಯ, ಬೊಜೇಗೌಡ, ಎಚ್.ಡಿ. ಲೋಹಿತ್ ಕುಮಾರ್ ಕಾರ್ಯನಿರ್ವಹಿಸಿದರು.

ಈ ಸಂದರ್ಭ ಮಾದರಿ ಯುವಕ ಸಂಘದ ಅಧ್ಯಕ್ಷ ಎಚ್.ಎಸ್. ಮಧುಸೂದನ್, ಗೌರವ ಅಧ್ಯಕ್ಷ ಎಚ್.ಆರ್. ಶ್ರೀನಿವಾಸ್, ಉಪಾಧ್ಯಕ್ಷ ಎಚ್.ಆರ್. ರವಿ, ಕಾರ್ಯದರ್ಶಿ ಎಚ್.ಎಂ. ತಿಮ್ಮಪ್ಪ, ಖಜಾಂಚಿ ಎಚ್.ಎಸ್. ರಘು, ಸಂಘಟನಾ ಕಾರ್ಯದರ್ಶಿ ತನುಕುಮಾರ್, ನಿರ್ದೇಶಕರಾದ ಶಮಂತ್, ಗಣೇಶ್, ಆದರ್ಶ, ಶ್ಯಾಮು, ಜಗದೀಶ್ ಪಟೇಲ್, ತ್ರಿನೇಶ್, ಮಣಿಕಂಠ, ದಿಲೀಪ್, ಸಲಹೆಗಾರರಾದ ಎಚ್.ಎಸ್. ಮಂಜುನಾಥ್, ಆರ್.ಆರ್. ಕುಮಾರ್, ನಿವೃತ್ತ ಸೈನಿಕ ಪುಟ್ಟೇಗೌಡ, ಚಂದ್ರಶೇಖರ್, ಎಚ್.ಈ. ಜಗದೀಶ್, ಪ್ರದೀಪ್ ಇದ್ದರು.