ಭಾಗಮಂಡಲ, ನ. ೨೬: ಸಮೀಪದ ಅಯ್ಯಂಗೇರಿ ಗ್ರಾಮ ಪಂಚಾಯಿತಿಯ ಸಂಜೀವಿನಿ ಒಕ್ಕೂಟದ ವತಿಯಿಂದ ಮಹಿಳೆಯರಿ ಗಾಗಿ ವಿವಿಧ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ಒತ್ತಡಗಳನ್ನು ಬದಿಗೊತ್ತಿ ಸಂಜೀವಿನಿ ಒಕ್ಕೂಟದ ಸದಸ್ಯರು ಮಹಿಳೆಯರು ಕ್ರೀಡಾಕೂಟದಲ್ಲಿ ಸಂಭ್ರಮದಿAದ ಪಾಲ್ಗೊಂಡಿದ್ದರು ವಿವಿಧ ಆಟೋ ಟಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಕೆ.ಜಿ. ಬೋಪಯ್ಯ ಸಂಸಾರದಲ್ಲಿ ಪ್ರಮುಖ ಪಾತ್ರ ವಹಿಸುವ ಮಹಿಳೆಯರಲ್ಲಿ ಕುಟುಂಬ ನಿರ್ವಹಣೆ ಮಾಡುವ ಶಕ್ತಿ ಇದೆ. ವಿವಿಧ ಒಕ್ಕೂಟಗಳ ಮೂಲಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸರ್ಕಾರ ಸಹಾಯಧನ ನೀಡುತ್ತಿದೆ ಸ್ವಯಂ ಉದ್ಯೋಗ ಮಾಡುವುದಿದ್ದರೂ ಧನ ಸಹಾಯ ಲಭ್ಯವಿದೆ ಆರ್ಥಿಕ ಸಂಪನ್ಮೂ ಲಗಳನ್ನು ಕೋಢೀಕರಿಸಿಕೊಂಡು ಮಹಿಳೆಯರು ಜೀವನದಲ್ಲಿ ಮುಂದೆ ಬರಬೇಕು ಎಂದರು.

ಭಾಗಮAಡಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹೊಸೂರು ಸತೀಶ್ ಕುಮಾರ್ ಮಾತನಾಡಿ, ಸ್ತಿç ಶಕ್ತಿ ಗುಂಪುಗಳ ರಚನೆಯಾದ ಬಳಿಕ ಮಹಿಳೆಯರು ಆರ್ಥಿಕವಾಗಿ ಸಬಲ ರಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಸಂಜೀವಿನಿ ಒಕ್ಕೂಟ ಗ್ರಾಮದಲ್ಲಿ ಸಮಾಜವನ್ನು ಮುಖ್ಯವಾಹಿನಿಗೆ ತರುವಂತೆ ಆಗಬೇಕು.

ಮಹಿಳೆಯರಿಗೆ ಸಮಾಜವನ್ನು ಪರಿವರ್ತನೆ ಮಾಡುವ ಜವಾಬ್ದಾರಿ ಇದೆ ಸರ್ಕಾರದ ಯೋಜನೆಗಳು ಸಂಜೀವಿನಿ ಒಕ್ಕೂಟದ ಮೂಲಕ ಜನಸಾಮಾ ನ್ಯರಿಗೆ ತಲುಪಬೇಕು. ನಿರಂತರವಾಗಿ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಕ್ರೀಡಾಕೂಟಗಳು ಸಾಂಸ್ಕೃತಿಕ ಕಾರ್ಯಕ್ರಮಗಳು ಒಕ್ಕೂಟದ ಒಂದು ಭಾಗವಾಗಿ ಮಹಿಳೆಯರನ್ನು ಒಗ್ಗೂಡಿಸು ವಂತಾಗಬೇಕು ಎಂದರು.

ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಹೇಮಾವತಿ ವಹಿಸಿದ್ದರು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಜಿತ್ ಉಪಾಧ್ಯಕ್ಷ ಮಿಶ್ರಿಯ ಗ್ರಾಮ ಪಂಚಾಯಿತಿ ಸದಸ್ಯರಾದ ಚಂಗಪ್ಪ, ರತಿ, ಕಾವೇರಮ್ಮ, ರಾಶಿದ್, ಸಿರಕಜೆ ನಾಗೇಶ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೋಡಿರ ಪ್ರಸನ್ನ, ಜಿಲ್ಲಾ ಕಾರ್ಯಕ್ರಮ ಸಂಯೋಜಕ ಕುಮಾರ್, ಮೇಲ್ವಿಚಾರಕರಾದ ಶ್ವೇತಾ, ಪವಿತ್ರ, ಆರೋಗ್ಯ ಇಲಾಖೆಯ ಮಿಲನ್, ಒಕ್ಕೂಟದ ಜಯಮಾಲಾ ಮತ್ತು ಚಂದ್ರಾವತಿ ಮತ್ತಿತರರು ಉಪಸ್ಥಿತರಿದ್ದರು.