ಕುಶಾಲನಗರ, ನ. ೨೬: ಟೆಲಿಕಾಮ್ ರೆಗ್ಯೂಲೇಟರಿ ಅಥಾರಿಟಿ ಆಫ್ ಇಂಡಿಯಾ ಸಂಸ್ಥೆಯ ಗ್ರಾಹಕ ಯೋಜನೆಯಡಿಯಲ್ಲಿ ಕರ್ನಾಟಕ ಗ್ರಾಹಕ ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಂಘಟಿತ ಒಕ್ಕೂಟ ಮತ್ತು ಕೊಡಗು ಜಿಲ್ಲಾ ಗ್ರಾಹಕ ಕೇಂದ್ರ ಸಹಯೋಗದೊಂದಿಗೆ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರಾಹಕ ಜಾಗೃತಿ ಕಾರ್ಯಾಗಾರ ನಡೆಯಿತು.
ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಾಗಾರವನ್ನು ಒಕ್ಕೂಟದ ಸಂಚಾಲಕರಾದ ವಿ.ಕೆ ಸೋಮಶೇಖರ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಪ್ರತಿಯೊಬ್ಬ ಗ್ರಾಹಕ ತಮ್ಮ ಹಕ್ಕನ್ನು ತಿಳಿಯುವುದರೊಂದಿಗೆ ದಿನನಿತ್ಯದ ವ್ಯವಹಾರದಲ್ಲಿ ಜಾಗೃತಿ ವಹಿಸಬೇಕು ಎಂದರು. ತಮ್ಮ ಸಂಘಟನೆಯ ಮೂಲಕ ಟೆಲಿಕಾಮ್ ರೆಗ್ಯೂಲೇಟರಿ ಅಥಾರಿಟಿ ಆಫ್ ಇಂಡಿಯಾ ಹಾಗೂ ಕೇಬಲ್ ಸಂಸ್ಥೆಗಳ ಗ್ರಾಹಕರಿಗೆ ಅರಿವು ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದರು.
ಪ್ರತಿ ಜಿಲ್ಲೆಯಲ್ಲಿ ಗ್ರಾಹಕರಿಗೋಸ್ಕರ ೩ ಹಂತಗಳಲ್ಲಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಟ್ರಾಯ್ನೇರವಾಗಿ ಸಂಘಟನೆಗಳ ಹಾಗೂ ಸಂಪರ್ಕ ಮೂಲಕ ಸಂಸ್ಥೆ ತನ್ನಗ್ರಾಹಕರಿಗೆ ತಿಳುವಳಿಕೆ ನೀಡುವ ಬಗ್ಗೆ ಕಾರ್ಯಾಗಾರಗಳ ಮೂಲಕ ಜನರಿಗೆ ತಿಳಿಸುವ ಕೆಲಸ ನಡೆಯುತ್ತಿದೆ ಎಂದರು. ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಮತ್ತು ಯುವ ಪೀಳಿಗೆಯನ್ನು ಗುರಿಯಾಗಿಟ್ಟುಕೊಂಡು ಕೆಲಸ ನಿರ್ವಹಿಸಲಾಗುತ್ತಿದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಬಿ.ಎಂ ಪ್ರವೀಣ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಂ.ಎನ್ ಚಂದ್ರಮೋಹನ್, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರು ಹಾಗೂ ಪಟ್ಟಣ ಪಂಚಾಯಿತಿ ಸದಸ್ಯರಾದ ಅಮೃತ್ರಾಜ್, ಕೊಡಗು ಜಿಲ್ಲಾ ಗ್ರಾಹಕ ಕೇಂದ್ರ ಅಧ್ಯಕ್ಷರು ಹಾಗೂ ಕಾರ್ಯಕ್ರಮ ಸಂಯೋಜಕರಾದ ಬಿ.ಪಿ ಕೃಷ್ಣಮೂರ್ತಿ, ಕಾಲೇಜಿನ ಅರ್ಥಶಾಸ್ತç ವಿಭಾಗದ ಪ್ರಾಧ್ಯಾಪಕರಾದ ರಮೆಶ್ಚಂದ್ರ, ಹರ್ಷ, ಸುನೀಲ್ ಇದ್ದರು. ಕಾರ್ಯಾಗಾರದಲ್ಲಿ ಗ್ರಾಹಕರ ಕುಂದುಕೊರತೆ, ಅನಿವಾರ್ಯತೆ ಮತ್ತಿತರ ಬಗ್ಗೆ ಪಿಪಿಟಿ ಮೂಲಕ ಪ್ರಸ್ತುತಪಡಿಸಲಾಯಿತು.