ಸೋಮವಾರಪೇಟೆ, ನ. ೨೬: ಇಲ್ಲಿನ ಭುವನ ಮಂದಾರ ರೈತ ಉತ್ಪಾದಕರ ಸಂಸ್ಥೆಯ ವಾರ್ಷಿಕ ಮಹಾಸಭೆ ತಾ.೨೮ರಂದು ಬೆಳಿಗ್ಗೆ ೧೧ಗಂಟೆಗೆ ಸಫಾಲಿ ಹಾಲ್‌ನಲ್ಲಿ ನಡೆಯಲಿದೆ ಎಂದು ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಎಚ್.ಪಿ. ತೃಪ್ತಿ ತಿಳಿಸಿದ್ದಾರೆ.

ಸಂಸ್ಥೆಯ ನಿರ್ದೇಶಕ ಎಸ್.ಎಂ. ಡಿಸಿಲ್ವಾ, ನಬಾರ್ಡ್ ಬ್ಯಾಂಕ್ ಡಿ.ಡಿ.ಎಂ. ರಮೇಶ್‌ಬಾಬು, ಒ.ಡಿ.ಪಿ. ಸಂಸ್ಥೆ ನಿರ್ದೇಶಕ ಅಲೆಕ್ಸ್ ಪ್ರಶಾಂತ್ ಸಿಕ್ವೆರಾ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಯಾದವ್‌ಬಾಬು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.