ಮಡಿಕೇರಿ, ನ. ೨೬: ಮೀನುಗಾರಿಕೆ ಇಲಾಖೆ ವತಿಯಿಂದ ಮೀನು ಹಿಡಿಯುವ ಬೋಟ್/ ಸಲಕರಣೆಗಳನ್ನು ಶಾಸಕ ಎಂ.ಪಿ.ಅಪ್ಪಚ್ಚುರAಜನ್ ಮತ್ತು ಕೆ.ಜಿ.ಬೋಪಯ್ಯ ಅವರು ತಮ್ಮ ಕಚೇರಿ ಬಳಿ ಅರ್ಹರಿಗೆ ಶುಕ್ರವಾರ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕವಾಗಿ ಸದೃಢರಾಗುವಂತಾಗಬೇಕು ಎಂದು ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕಿ ದೀಪಾಂಜಲಿ ಅವರು ಬೋಟ್ ಅಥವಾ ಮೀನು ಹಿಡಿಯುವ ಸಲಕರಣೆಗಳನ್ನು ತಲಾ ೧೦ ಸಾವಿರ ರೂ ನಂತೆ ೭೫ ಮಂದಿ ಅರ್ಹರಿಗೆ ಒಟ್ಟು ೭.೫೦ ಲಕ್ಷ ರೂ. ವೆಚ್ಚದಲ್ಲಿ ವಿತರಿಸಲಾಗುತ್ತಿದೆ ಎಂದರು.
ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ೪೧ ಮಂದಿಗೆ, ವೀರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ೩೪ ಮಂದಿಗೆ ಉಚಿತವಾಗಿ ಅರ್ಹರಿಗೆ ಬೋಟ್ ಅಥವಾ ಮೀನು ಹಿಡಿಯುವ ಸಲಕರಣೆಗಳನ್ನು ನೀಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.