ಮಡಿಕೇರಿ, ನ. ೨೬: ಡಿಸೆಂಬರ್ ೨೧ ರಿಂದ ೨೮ರ ತನಕ ಮೂಡಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆ ಆವರಣದಲ್ಲಿ ಸ್ಕೌಟ್ ಹಾಗೂ ಗೈಡ್ಸ್ ವಿದ್ಯಾರ್ಥಿಗಳಿಗಾಗಿ ‘ಸಾಂಸ್ಕೃತಿಕ ಜಾಂಬೂರಿ’ ಹಮ್ಮಿಕೊಳ್ಳಲಾಗಿದೆ ಎಂದು ಸ್ಕೌಟ್, ಗೈಡ್ ಸಂಸ್ಥೆಯ ಕರ್ನಾಟಕ ರಾಜ್ಯದ ಮುಖ್ಯ ಆಯುಕ್ತ ಪಿ.ಜಿ. ಆರ್. ಸಿಂಧ್ಯಾ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳ ಸರ್ವಾಂಗೀಣ ಪ್ರಗತಿಗೆ ಸಂಸ್ಥೆ ಶ್ರಮಿಸುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರಕಾರ ಕೂಡ ಪೂರಕ ಸಹಕಾರ ನೀಡುತ್ತಿದೆ. ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳ ಮಾರ್ಗದರ್ಶನ ಸಂಸ್ಥೆಗೆ ಸದಾ ಇದೆ. ಜೊತೆಗೆ ಸ್ಕೌಟ್, ಗೈಡ್‌ನಲ್ಲಿ ವಿದ್ಯಾರ್ಥಿಗಳನ್ನು ಹೆಚ್ಚಿಸಲು ಪ್ರಯತ್ನಗಳು ನಡೆಯುತ್ತಿವೆ. ಸಂಸ್ಥೆಯಿAದ ಆಯೋಜಿಸಿದ್ದ ಬೇಸಿಗೆ ಶಿಬಿರದಲ್ಲಿ ೧.೫೦ ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪರಿಸರ, ಸಾಮಾಜಿಕ ಪ್ರಜ್ಞೆಯನ್ನು ಮೂಡಿಸುವ ಕೆಲಸವಾಗುತ್ತಿದೆ ಎಂದರು.

ಈ ವರ್ಷ ನಡೆಯುವ ‘ಸಾಂಸ್ಕೃತಿಕ ಜಾಂಬೂರಿ’ ಮೂಲಕ ಮಕ್ಕಳಲ್ಲಿ ರಾಜ್ಯ ಹಾಗೂ ದೇಶದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪರಿಚಯಿಸುವ ಕೆಲಸ ಮಾಡಲಾಗು ತ್ತಿದೆ. ೪೧ ಸಾವಿರ ಮಕ್ಕಳು, ೪ ಸಾವಿರ ಶಿಕ್ಷಕರು ಇದರಲ್ಲಿ ಭಾಗವಹಿಸಲು ಈಗಾಗಲೇ ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿಯ ಕಾಲವಕಾಶ ಮುಗಿದಿದ್ದು, ಕಾರ್ಯಕ್ರಮ ವೀಕ್ಷಿಸಲು ಯಾರು ಬೇಕಾದರೂ ಬರಬಹುದಾಗಿದೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಆಹಾರ ಪದ್ಧತಿ, ಉಡುಗೆ

(ಮೊದಲ ಪುಟದಿಂದ) ತೊಡುಗೆ, ಪ್ರಾಕೃತಿಕ ವಿಶೇಷತೆಗಳ ಬಗ್ಗೆ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾಹಿತಿ ಒದಗಿಸಿದರು.

ಶಿಬಿರಾರ್ಥಿಗಳಿಗೆ ನಿತ್ಯ ಯೋಗ, ಧ್ಯಾನ, ಸಾಂಸ್ಕೃತಿಕ, ಕ್ರೀಡಾ ಕಾರ್ಯಕ್ರಮಗಳು ನಡೆಯಲಿವೆ. ಕೊಡಗಿನ ೧೦೦ ಬುಡಕಟ್ಟು ಮಕ್ಕಳಿಂದ ಸಾಂಸ್ಕೃತಿಕ ನೃತ್ಯ ನಡೆಯಲಿದೆ ಎಂದು ತಿಳಿಸಿದ ಅವರು, ಸ್ಕೌಟ್, ಗೈಡ್‌ನ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ಸರಕಾರಿ ಹುದ್ದೆಯಲ್ಲಿ ಮೀಸಲಾತಿ ಒದಗಿಸುವಂತೆ ಸರಕಾರಕ್ಕೆ ಬೇಡಿಕೆ ಸಲ್ಲಿಕೆಯಾಗಿದೆ. ಈಗಾಗಲೇ ರೈಲ್ವೆ ವಲಯದಲ್ಲಿ ಮೀಸಲಾತಿ ಇದೆ. ಒಡಿಸ್ಸಾದಲ್ಲಿ ವೈದ್ಯಕೀಯ, ಇಂಜಿನಿಯರಿAಗ್ ವಿದ್ಯಾಭ್ಯಾಸಕ್ಕೆ ಮೀಸಲಾತಿ ಒದಗಿಸಲಾಗಿದೆ. ರಾಷ್ಟçಪತಿ ಪುರಸ್ಕಾರ ಪರೀಕ್ಷೆಯಲ್ಲಿ ಉತ್ತೀರ್ಣರಾದ ೨ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮೀಸಲಾತಿ ದೊರೆಯುತಿತ್ತು. ಈ ಪರೀಕ್ಷೆಗೆ ಕೆಲ ವರ್ಷದಿಂದ ನಡೆಯದ ಹಿನ್ನೆಲೆ ಮೀಸಲಾತಿ ದೊರೆತ್ತಿಲ್ಲ ಎಂದರು.

ಗೋಷ್ಠಿಯಲ್ಲಿ ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯು, ಸ್ಥಾನಿಕ ಆಯುಕ್ತ ಹೆಚ್.ಆರ್.ಮುತ್ತಪ್ಪ, ತರಬೇತಿ ಆಯುಕ್ತೆ ಮೈಥಿಲಿ ರಾವ್, ಖಜಾಂಜಿ ಪುಷ್ಪಾವೇಣಿ, ಪ್ರಧಾನ ಕಾರ್ಯದರ್ಶಿ ವಸಂತಿ ಹಾಜರಿದ್ದರು.