ಸೋಮವಾರಪೇಟೆ, ನ. ೨೭ : ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಶೀಘ್ರವಾಗಿ ಕಡತಗಳನ್ನು ವಿಲೇವಾರಿಗೊಳಿಸಬೇಕೆಂದು ಇಲ್ಲಿನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ಗೋಕುಲ್ ಅವರು ಅಧಿಕಾರಿಗಳಿಗೆ ತಿಳಿಸಿದರು.

ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ತಾಲೂಕು ಆಡಳಿತದ ವತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಂವಿಧಾನ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಷ್ಟçದಲ್ಲಿ ಜನಸಾಮಾನ್ಯರು ಉತ್ತಮವಾಗಿ ಜೀವಿಸಲು ಅನುಕೂಲವಾಗುವಂತೆ ಸಂವಿಧಾನ ರಚನೆಯಾಗಿದೆ. ಅದಕ್ಕೆ ಚ್ಯುತಿಬಾರದಂತೆ ಕರ್ತವ್ಯ ನಿರ್ವಹಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಜನಸಾಮಾನ್ಯರು ಕಂದಾಯ ಹಾಗೂ ಸರ್ವೆ ಇಲಾಖೆಗೆ ದಿನನಿತ್ಯ ಅಲೆಯುತ್ತಿದ್ದಾರೆ. ಈ ಬಗ್ಗೆ ನ್ಯಾಯಾಲಯದ ಗಮನಕ್ಕೂ ಬಂದಿದೆ. ಸರ್ವೇ, ಪೋಡಿ, ದುರಸ್ತಿಗೆ ಸಂಬAಧಿಸಿದAತೆ ಸಮಸ್ಯೆಗಳಾಗಿವೆ. ಇದಕ್ಕೆ ಸಂಬAಧಿಸಿದAತೆ ಕೆಲವು ಪ್ರಕರಣಗಳು ನ್ಯಾಯಾಲಯದಲ್ಲಿವೆ. ಜಮೀನು ವಿಚಾರಕ್ಕೆ ಸಂಬAಧಿಸಿದAತೆ ಅಧಿಕಾರಿಗಳು ಸಮರ್ಪಕ ಹಾಗೂ ತುರ್ತು ಸ್ಪಂದನೆ ನೀಡಬೇಕಿದೆ ಎಂದು ಸೂಚಿಸಿದರು.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಗೋಪಾಲಕೃಷ್ಣ ಅವರು ಮಾತನಾಡಿ, ಕೆಲವು ವಿದ್ಯಾರ್ಥಿಗಳು ಹಾಗೂ ಯುವಕರು ಗಾಂಜಾ ವ್ಯಸನಿಗಳಾಗಿ ಹಾದಿ ತಪ್ಪುತಿದ್ದಾರೆ. ಅವರ ಮೇಲೆ ಪೊಲೀಸ್ ಇಲಾಖೆ ಕಣ್ಣಿಡಬೇಕು ಎಂದರು.

ಪಟ್ಟಣದಲ್ಲಿ ಚಿಕ್ಕ ವಯಸ್ಸಿನ ವಿದ್ಯಾರ್ಥಿಗಳು ಗಾಂಜಾಕ್ಕೆ ದಾಸರಾಗಿ ಅಲೆಯುತ್ತಿದ್ದಾರೆ. ಅಪ್ರಾಪ್ತರು ಹಾಗೂ ದಾಖಲೆ ಇಲ್ಲದೆ ವಾಹನ ಚಾಲನೆ ಮಾಡುತ್ತಿರುವ ಘಟನೆಗಳು ನಡೆಯುತ್ತಿವೆ. ಇಂತಹ ಸಂದರ್ಭ ಅಪಘಾತವಾದರೆ ಆಸ್ತಿ, ಪಾಸ್ತಿ ಮಾರಿ ಪರಿಹಾರ ನೀಡುವ ಪರಿಸ್ಥಿತಿ ಎದುರಾಗುತ್ತದೆ ಎಂದು ಎಚ್ಚರಿಸಿದ ಅವರು, ಈ ಬಗ್ಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಹಾಗೂ ತಮ್ಮ ಮಕ್ಕಳ ಬಗ್ಗೆ ಪೋಷಕರು ಗಮನ ಹರಿಸಬೇಕು ಎಂದರು. ತಹಶೀಲ್ದಾರ್ ಎಸ್.ಎನ್.ನರಗುಂದ, ಪೊಲೀಸ್ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್ ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದರು.