ಸೋಮವಾರಪೇಟೆ, ನ.೨೮: ಭಾರತೀಯ ಜನತಾ ಪಾರ್ಟಿ ಸೋಮವಾರಪೇಟೆ ಮಂಡಲದ ವತಿಯಿಂದ ಹಿರಿಯ ಸಹಕಾರಿ, ಸಹಕಾರಿ ರತ್ನ ಪ್ರಶಸ್ತಿಗೆ ಭಾಜನರಾದ ಕೊಮಾರಪ್ಪ ಹಾಗೂ ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ರವಿ ಕಾಳಪ್ಪ ಅವರುಗಳನ್ನು ಸನ್ಮಾನಿಸಲಾಯಿತು. ಇಲ್ಲಿನ ಕೊಡವ ಸಮಾಜದಲ್ಲಿ ನಡೆದ ಮಂಡಲ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸನ್ಮಾನಿಸಿದರು.
ಈ ಸಂದರ್ಭ ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಿಕಟಪೂರ್ವ ಅಧ್ಯಕ್ಷ ಬಿ.ಬಿ. ಭಾರತೀಶ್, ಮಾಜೀ ಎಂ.ಎಸ್.ಸಿ. ಎಸ್.ಜಿ. ಮೇದಪ್ಪ, ಪಕ್ಷದ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಮಾದಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.