ಕುಶಾಲನಗರ, ನ. ೨೮: ಕುಶಾಲನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅಂಗವಾಗಿ ರಕ್ತದಾನ ಶಿಬಿರ, ಆರೋಗ್ಯ ತಪಾಸಣಾ ಶಿಬಿರ ಮತ್ತಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ಕುಶಾಲನಗರ ಕಾರು ನಿಲ್ದಾಣ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಜಯವರ್ಧನ್ ಅವರು ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮ ಉದ್ಘಾಟಿಸಿದರು.

ಇದೇ ಸಂದರ್ಭ ರಕ್ತದಾನ ಶಿಬಿರ ಮತ್ತು ಆರೋಗ್ಯ ತಪಾಸಣಾ ಶಿಬಿರ ನಡೆಯಿತು.ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ಸಮೂಹ ನೃತ್ಯ ಸ್ಫರ್ಧೆ, ಡಾನ್ಸ್-ಡಾನ್ಸ್ ಕಾರ್ಯಕ್ರಮ ನಡೆಯಿತು. ಸಂಘದ ವತಿಯಿಂದ ನಿವೃತ್ತ ಸೈನಿಕರು ಹಾಗೂ ಪೌರಕಾರ್ಮಿಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಆಟೋZ Áಲಕರ ಸಂಘದ ಅಧ್ಯಕ್ಷರಾದ ಆರ್. ಮೋಹನ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಚೆಲುವರಾಜ್, ಬಿಜೆಪಿ ನಗರಾಧ್ಯಕ್ಷ ಉಮಶಂಕರ್, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ವೆಂಟೇಶ್ ಪೂಜಾರಿ, ತಾಲೂಕು ಅಧ್ಯಕ್ಷ ಬಿ.ಎ. ನಾಗೇಗೌಡ, ಸಂಘದ ಕಾರ್ಯದರ್ಶಿ ಪಿ. ಮಂಜು ಮತ್ತಿತರು ಇದ್ದರು.