ಮಡಿಕೇರಿ, ನ. ೨೮: ಶಾಲಾ- ಕಾಲೇಜು ವಿದ್ಯಾರ್ಥಿಗಳಲ್ಲಿ ರಾಷ್ಟçಪ್ರೇಮ, ರಾಷ್ಟಿçÃಯ ಭಾವೈಕ್ಯತೆ, ಪ್ರಕೃತಿ ಪ್ರೇಮ, ಉತ್ತಮ ವ್ಯಕ್ತಿತ್ವ, ಸೇವಾ ಮನೋಭಾವ ಹಾಗೂ ಉತ್ತಮ ನಾಯಕತ್ವದ ಗುಣಗಳನ್ನು ಬೆಳೆಸಲು ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಕೌಟ್ಸ್ ಗೈಡ್ಸ್ ತತ್ವಗಳನ್ನು ಕಲಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ರಾಜ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಶನಿವಾರ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಮಡಿಕೇರಿ ನಗರದ ಮ್ಯಾನ್ಸ್ ಕಾಂಪೌAಡ್ನ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್ - ಗೈಡ್ಸ್ ಭವನದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ನ ಶಿಕ್ಷಕರಿಗೆ ಒಂದು ವಾರ ಕಾಲ ಏರ್ಪಡಿಸಿದ್ದ ಮೂಲ ತರಬೇತಿ ಶಿಬಿರದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಅಂತರರಾಷ್ಟಿçÃಯ ಸ್ಕೌಟ್ಸ್ ಹಾಗೂ ಗೈಡ್ಸ್ ಸಂಸ್ಥೆಯು ಬೆಳೆದು ಬಂದ ದಾರಿ ಹಾಗೂ ಸಂಸ್ಥೆಯು ಸಮಾಜದ ವಿವಿಧ ಸ್ತರಗಳಲ್ಲಿ ಕೈಗೊಂಡಿರುವ ಸೇವಾ ಚಟುವಟಿಕೆಗಳ ಕುರಿತು ತಿಳಿಸಿದರು. ವಿದ್ಯಾರ್ಥಿಗಳು ಉತ್ತಮ ನಾಯಕತ್ವ ಹಾಗೂ ದೇಶಸೇವಾ ಮನೋಭಾವ ಬೆಳೆಸಿಕೊಂಡು ಸತ್ಪçಜೆಯಾಗಿ ರೂಪುಗೊಳ್ಳಲು ತರಬೇತಿನಿರತ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.
ಸ್ಕೌಟ್ಸ್ ಹಾಗೂ ಗೈಡ್ಸ್ ಸಂಸ್ಥೆಯು ವಿಶ್ವವ್ಯಾಪಿಯಾಗಿರುವ ಒಂದು ಯುವ ಜನಾಂಗದ ಕೂಟ. ಈ ಚಳುವಳಿಯ ಉದ್ದೇಶವು ಯುವ ಪೀಳಿಗೆಯ ದೈಹಿಕ, ಮಾನಸಿಕ ಮತ್ತು ಅಧ್ಯಾತ್ಮಿಕ ಬೆಳವಣಿಗೆಯಾಗಿದೆ. ಈ ಚಳುವಳಿಯನ್ನು ೧೯೦೭ರಲ್ಲಿ ರಾಬರ್ಟ್ ಬೇಡೆನ್ ಪೊವೆಲ್ ಇಂಗ್ಲೆAಡ್ನಲ್ಲಿ ಪ್ರಾರಂಭಿಸಿದರು. ಇದೀಗ ಈ ಸಂಸ್ಥೆಯು ಬೃಹತ್ತಾಗಿ ಬೆಳೆಯುವ ಮೂಲಕ ಸಮಾಜದಲ್ಲಿ ವಿದ್ಯಾರ್ಥಿ ಗಳಲ್ಲಿ ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ವಿಶೇಷ ಸಂಘಟನೆಯಾಗಿ ರೂಪುಗೊಂಡಿದೆ ಎಂದು ಪಿ.ಜಿ.ಆರ್.ಸಿಂಧ್ಯ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾತನಾಡಿ, ಜಿಲ್ಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಸಂಸ್ಥೆಯ ವತಿಯಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಶಿಸ್ತು- ಸಂಯಮ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ದಿಸೆಯಲ್ಲಿ ಹಲವಾರು ತರಬೇತಿ ಹಾಗೂ ಕಾರ್ಯಕ್ರಮಗಳನ್ನು ಸಂಘಟಿಸಲಾಗು ತ್ತಿದೆ. ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಹಾಗೂ ಕೋವಿಡ್ - ೧೯ ರ ಸಂಕಷ್ಟದ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತಮ್ಮನ್ನು ವಿವಿಧ ಸೇವಾ ಕಾರ್ಯಗಳಲ್ಲಿ ತೊಡಗಿಸಿ ಕೊಂಡು ಉತ್ತಮ ಸೇವೆ ಸಲ್ಲಿಸಿದ್ದು ಹೆಮ್ಮೆಯ ಸಂಗತಿ ಎಂದರು.
ಡಿ. ೨೧ ರಿಂದ ಮೂಡುಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ನಡೆಯಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ನ ಅಂತರರಾಷ್ಟಿçÃಯ ಜಂಬೂರಿ ಸಮ್ಮೇಳನಕ್ಕೆ ಜಿಲ್ಲೆಯಿಂದ ೬೦೦ ಮಂದಿ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು. ಸಂಸ್ಥೆಯ ರಾಜ್ಯ ಮುಖ್ಯ ತರಬೇತುದಾರ ಬಾಲಕೃಷ್ಣ, ಗೋಪಾಲಕೃಷ್ಣ, ಶ್ರೀರಾಮ್, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ವಸಂತಿ, ಖಜಾಂಚಿ ಪುಷ್ಪವೇಣಿ, ಸ್ಥಾನೀಕ ಆಯುಕ್ತ ಎಚ್.ಆರ್.ಮುತ್ತಪ್ಪ, ಜಿಲ್ಲಾ ಸಂಘಟಕಿ ಯು.ಸಿ. ದಮಯಂತಿ, ಸಂಪನ್ಮೂಲ ತರಬೇತುದಾರರಾದ ಮೈತ್ರಿರಾವ್, ಜಾಜಿ, ಸುಲೋಚನ, ಅಲೀಮ, ರವಿಚಂದ್ರ ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು.