ಸೋಮವಾರಪೇಟೆ, ನ. ೨೮ : ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ವತಿಯಿಂದ ಜಿಲ್ಲಾ ಕಸಾಪ ಸಹಯೋಗದೊಂದಿಗೆ ಇಲ್ಲಿನ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.

ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಡಿ.ಸುಜಲಾದೇವಿ, ವೃತ್ತ ನಿರೀಕ್ಷಕ ಪರಶಿವಮೂರ್ತಿ, ಸರಕಾರಿ ಆಸ್ಪತ್ರೆಯ ಶಸ್ತçಚಿಕಿತ್ಸಕ ಡಾ.ಸತೀಶ್, ಕವಿ ಮತ್ತು ಬರಹಗಾರ ನ.ಲ. ವಿಜಯ, ಪ್ರಗತಿಪರ ಕೃಷಿಕ ಶಾಂತಳ್ಳಿಯ ಕೆ.ಕೆ.ಮುತ್ತಣ್ಣ ಇವರುಗಳನ್ನು ಸನ್ಮಾನಿಸಲಾಯಿತು.

ತಾಲೂಕು ಕಸಾಪ ಅಧ್ಯಕ್ಷ ಎಸ್.ಡಿ. ವಿಜೇತ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ, ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್, ಮಾಜೀ ಸಚಿವ ಬಿ.ಎ. ಜೀವಿಜಯ, ಮಡಿಕೇರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಕಾವೇರಿ ಪ್ರಕಾಶ್, ವಿಧಾನಪರಿಷತ್ ಮಾಜಿ ಸದಸ್ಯ ಎಸ್. ಜಿ. ಮೇದಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್, ಸಂತ ಜೋಸೆಪ್ಸ್ ವಿದ್ಯಾಸಂಸ್ಥೆಯ ಸಂಚಾಲಕ ರಾಯಪ್ಪ, ಜಿಲ್ಲಾ ಕಸಾಪ ಪದಾಧಿಕಾರಿಗಳು, ತಾಲೂಕು ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.