ಮಡಿಕೇರಿ, ನ. ೨೮: ಗೋಣಿಕೊಪ್ಪ ಲಯನ್ಸ್ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭ ಡಿ.೨ರಂದು ಮಧ್ಯಾಹ್ನ ೨ ಗಂಟೆಗೆ ಗೋಣಿಕೊಪ್ಪ ಲಯನ್ಸ್ ನರ್ಸರಿ ಹಾಗೂ ಪ್ರಾಥಮಿಕ ಶಾಲಾ ಆವರಣದಲ್ಲಿ ಜರುಗಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್ ಜಿಲ್ಲಾ ಗವರ್ನರ್ ಸಂಜೀತ್ ಶೆಟ್ಟಿ ಹಾಗೂ ಗೌರವ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲಚೀರ ಎ. ಅಯ್ಯಪ್ಪ ಅವರು ಪಾಲ್ಗೊಳ್ಳಲಿದ್ದಾರೆ.