ನಾಪೋಕ್ಲು, ನ. ೨೭: ನಾಪೋಕ್ಲು ನಾಡು ಗ್ರಾಹಕರ ಸಹಕಾರ ಸಂಘ ನಿಯಮಿತ ಇದರ ನೂತನ ಕಟ್ಟಡದ ಉದ್ಘಾಟನೆ ಸಮಾರಂಭದಲ್ಲಿ ಸಹಕಾರಿ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಸ್ಥಳೀಯ ಗ್ರಾಹಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕ ಕೊಂಬAಡ ಕೆ. ಗಣೇಶ್, ಮಾಜಿ ಅಧ್ಯಕ್ಷ ಬಿದ್ದಾಟಂಡ ಪಾಪ ಮುದ್ದಯ್ಯ, ಅವರನ್ನು ಸಂಘದ ಪರವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭ ಕರ್ನಾಟಕ ಸಹಕಾರ ಎಪೆಕ್ಸ್ ಬ್ಯಾಂಕ್ ನಿರ್ದೇಶಕರು ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧ್ಯಕ್ಷರು, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರು ಆದ ಕೊಡಂದೆರ ಪಿ ಬಾಂಡ್ ಗಣಪತಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕ, ಕೊಡಗು ಸಹಕಾರ ರತ್ನ ಪ್ರಶಸ್ತಿ ಪುರಸ್ಕರ್ತರು ಆದ ಅಪ್ಪಚೇಟ್ಟೋಳಂಡ ಕೆ.ಮನು ಮುತ್ತಪ್ಪ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಉಪಾಧ್ಯಕ್ಷ ಕೇಟೋಳಿರ ಎಸ್. ಹರೀಶ್ ಪೂವಯ್ಯ, ಸಹಕಾರ ಸಂಘದ ಅಧ್ಯಕ್ಷರಾದ ಪಟ್ರಪಂಡ ಮೋಹನ್ ಮುದ್ದಯ್ಯ , ಮಡಿಕೇರಿ ಹಾಪ್‌ಕಾಮ್ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ , ಸ್ಥಳೀಯ ಪೊಲೀಸ್ ಠಾಣಾಧಿಕಾರಿ ಸದಾಶಿವ, ಗ್ರಾಹಕರ ಸಹಕಾರ ಸಂಘದ ಉಪಾಧ್ಯಕ್ಷರಾದ ನಾಟೋಳಂಡ ಕಸ್ತೂರಿ ಉತ್ತಪ್ಪ, ನಿರ್ದೇಶಕರಾದ ನಾಯಕಂಡ ಟಿ. ಮುತ್ತಪ್ಪ ಕುಂಜಣ್ಣ, ಬೋಟ್ಟೋಳಂಡ ಕೆ.ಕುಟ್ಟಪ್ಪ, ಪಾಡಿಅಮ್ಮಂಡ ಎ.ಮನು ಮಹೇಶ್, ಕೇಟೋಳಿರ ಪ್ರಣಿತ ಗಣಪತಿ, ಬಿ .ಆರ್. ರಾಮಣ್ಣ, ಕುಲ್ಲೇಟಿರ ಎಂ ಅರುಣ್ ಬೇಬ, ಎಚ್.ಎ. ಬೊಳ್ಳು, ಗ್ರಾಹಕರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಲ್ಲೇಂಗಡ ತಮ್ಮಿ ತಿಮ್ಮಯ್ಯ ಸ್ಥಳೀಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಿಬ್ಬಂದಿ, ಹಿರಿಯರು ಉಪಸ್ಥಿತರಿದ್ದರು.