*ಗೋಣಿಕೊಪ್ಪ, ನ. ೨೮: ಪೊನ್ನಂಪೇಟೆ ತಾಲೂಕು ರಚನೆಗೆ ಪೂರಕವಾಗಿ ಮಿನಿ ವಿಧಾನಸೌಧ ಪ್ರಸ್ತಾವನೆ ಇದ್ದು ಶೀಘ್ರದಲ್ಲೇ ಕಾಮಗಾರಿ ಕಾರ್ಯಾರಂಭಗೊAಡು ಈ ಭಾಗದ ಜನರಿಗೆ ಅಗತ್ಯ ಸೇವೆ ಸಿಗಲಿದೆ ಎಂದು ರಾಜ್ಯ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ, ಶಾಸಕ ಕೆ.ಜಿ. ಬೋಪಯ್ಯ ತಿಳಿಸಿದರು.

ರೂ. ೧೮ ಲಕ್ಷದ ೭೫ ಸಾವಿರಗಳ ಅನುದಾನದಲ್ಲಿ ನಿರ್ಮಾಣವಾದ ಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ ಹುದುಕೇರಿ ನಾಡ ಕಚೇರಿಯ ನೂತನ ಕಟ್ಟಡವನ್ನು ಜನಸೇವೆಗೆ ಸಮರ್ಪಿಸಿ ಮಾತನಾಡಿದರು.

ಗ್ರಾಮೀಣ ಜನರಿಗೆ ಎಲ್ಲಾ ಸೇವೆಗಳು ನಿಗದಿತ ಸಮಯದೊಳಗೆ ಸಿಗಬೇಕು ಎಂಬ ನಿಟ್ಟಿನಲ್ಲಿ ಮತ್ತು ನಾಡಕಚೇರಿಗಳನ್ನು ಬಲಪಡಿಸಬೇಕು ಎಂಬ ಉದ್ದೇಶದೊಂದಿಗೆ ರಾಜ್ಯದ ವಿವಿಧ ಭಾಗಗಳಲ್ಲಿ ಒಂದೇ ರೀತಿಯ ಪೂರ್ವಯೋಜಿತ ಕಟ್ಟಡವನ್ನು ಸ್ಥಾಪಿಸಲಾಗುತ್ತಿದೆ. ಈ ನೆಲೆಯಲ್ಲಿ ಅಗತ್ಯವಿರುವ ಸಿಬ್ಬಂದಿ ಕೊರತೆಗಳನ್ನು ತುಂಬಲಾಗುತ್ತಿದೆ ಎಂದು

ಹೇಳಿದರು.

(ಮೊದಲ ಪುಟದಿಂದ) ಜನರಿಗೆ ಕಂದಾಯ ಇಲಾಖೆಯಲ್ಲಿ ಹಲವಾರು ಕೆಲಸ ಕಾರ್ಯಗಳು ನಡೆಯಬೇಕಾಗಿದೆ. ಈ ಉದ್ದೇಶದೊಂದಿಗೆ ಸ್ಥಳೀಯ ನಾಡಕಚೇರಿಗಳನ್ನು ಅಭಿವೃದ್ಧಿ ಪಡಿಸುವ ಯೋಜನೆ ಹೊಂದ ಲಾಗಿದ್ದು ಸೂಕ್ತ ಸೇವೆಗೆ ಕಟ್ಟಡದ ಅವಶ್ಯಕತೆ ಇದೆ. ತಹಶೀಲ್ದಾರ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಜನರ ಸೇವೆಗೆ ಒತ್ತು ನೀಡಿದಾಗ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ಸಾಧ್ಯವಾಗಬಲ್ಲದು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಉತ್ತಮ ಕೆಲಸಗಳನ್ನು ನಿಭಾಯಿಸಬೇಕು ಎಂದು ಸಲಹೆ ನೀಡಿದರು.

ಕಾಫಿ, ಕಾಳು ಮೆಣಸು ಮತ್ತು ಅಡಕೆ ಬೆಳೆಗೆ ಪರಿಹಾರಕ್ಕೆ ಅರ್ಜಿ ಸಲ್ಲಿಸಿದವರಿಗೆ ಇನ್ನೊಂದು ವಾರದ ಒಳಗೆ ತಮ್ಮ ಖಾತೆಗೆ ಪರಿಹಾರ ನಿಧಿ ಜಮಾ ಆಗಲಿದೆ. ಈಗಾಗಲೇ ತಾಲೂಕಿನಲ್ಲಿ ೪೦೦೦ಕ್ಕೂ ಹೆಚ್ಚು ಜನ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸುವ ಸಂದರ್ಭ ಯಾವುದೇ ಲೋಪ ದೋಷಗಳು ಇಲ್ಲದೇ ಇದ್ದಲ್ಲಿ ನೇರವಾಗಿ ಖಾತೆಗೆ ಹಣ ಜಮಾ ಆಗಲಿದೆ ಎಂದು ತಿಳಿಸಿದರು.

ಜಿಲ್ಲಾ ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ ಮಾತನಾಡಿ, ಸಾರ್ವಜನಿಕರಿಗೆ ಕಂದಾಯ ಇಲಾಖೆಯಿಂದ ಉತ್ತಮ ಸೇವೆಯನ್ನು ನೀಡಲು ಪೂರಕವಾದ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ನೂತನ ಕಟ್ಟಡ ಪ್ರಾರಂಭಿಸಿ ಜನರಿಗೆ ಬೇಕಾದ ಸಕಲ ವ್ಯವಸ್ಥೆಗಳನ್ನು ನೀಡಲು ಸ್ಥಳೀಯವಾಗಿ ಉಪತಹಶೀಲ್ದಾರ್ ಮತ್ತು ಗ್ರಾಮ ಲೆಕ್ಕಿಗರನ್ನು ನೇಮಿಸಲಾಗುವುದು ಎಂದು ತಿಳಿಸಿದರು. ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಪ್ರಶಾಂತ್, ಹುದಿಕೇರಿ ಪಂಚಾಯಿತಿ ಅಧ್ಯಕ್ಷ ವಾಸು ಬಿದ್ದಪ್ಪ, ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ, ಬಿಜೆಪಿ ಮಂಡಲ ಅಧ್ಯಕ್ಷ ನೆಲ್ಲಿರ ಚಲನ್‌ಕುಮಾರ್, ಕಾರ್ಯದರ್ಶಿ ಅಜ್ಜಿಕುಟ್ಟೀರ ಪ್ರವೀಣ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಂಞAಗಡ ಅರುಣ್ ಭೀಮಯ್ಯ, ತಾಲೂಕು ಸರ್ವೇ ಅಧಿಕಾರಿ ಬಾನಂಗಡ ಅರುಣ್, ಕಂದಾಯ ಪರಿವೀಕ್ಷಕರು, ಗ್ರಾಮ ಲಕ್ಕಿಗರು ಮತ್ತು ಸ್ಥಳೀಯ ಗ್ರಾಮಸ್ಥರು ಹಾಜರಿದ್ದರು.