ಟಾಟಾ ಒಡೆತನದ ಏರ್ ಇಂಡಿಯಾದೊAದಿಗೆ ವಿಸ್ತಾರಾ ವಿಲೀನ

ನವದೆಹಲಿ, ನ. ೨೯: ಟಾಟಾ ಸಮೂಹ ಒಡೆತನದ ಏರ್ ಇಂಡಿಯಾದೊAದಿಗೆ ವಿಸ್ತಾರಾ ಏರ್‌ಲೈನ್ಸ್ ಅನ್ನು ವಿಲೀನಗೊಳಿಸಲಾಗುವುದು ಎಂದು ಸಿಂಗಾಪುರ್ ಏರ್‌ಲೈನ್ಸ್ ಘೋಷಿಸಿದೆ. ಟಾಟಾ ಸಮೂಹವು ವಿಸ್ತಾರಾ ದಲ್ಲಿ ಶೇ. ೫೧ ರಷ್ಟು ಪಾಲನ್ನು ಹೊಂದಿದೆ ಮತ್ತು ಉಳಿದ ಶೇ. ೪೯ ರಷ್ಟು ಷೇರುಗಳು ಸಿಂಗಾಪುರ್ ಏರ್‌ಲೈನ್ಸ್(ಎಸ್‌ಐಎ)ನಲ್ಲಿದೆ. ವಿಸ್ತಾರಾ ಏರ್ ಲೈನ್ಸ್ ಅನ್ನು ಏರ್ ಇಂಡಿಯಾ ಜೊತೆ ವಿಲೀನಗೊಳಿಸುತ್ತಿದ್ದು, ಇದು ಎಲ್ಲಾ ಪ್ರಮುಖ ಮಾರುಕಟ್ಟೆ ವಿಭಾಗಗಳಲ್ಲಿ ಗಮನಾರ್ಹ ಉಪಸ್ಥಿತಿ ಯೊಂದಿಗೆ ವಿಸ್ತರಿಸಿದ ಏರ್ ಇಂಡಿಯಾ ಗ್ರೂಪ್‌ನಲ್ಲಿ ಎನ್‌ಐಎ ಶೇ. ೨೫.೧ ಪಾಲನ್ನು ನೀಡುತ್ತದೆ. ಎಸ್‌ಐ ಮತ್ತು ಟಾಟಾ ನಿಯಂತ್ರಕ ಅನುಮೋದನೆಗಳಿಗೆ ಒಳಪಟ್ಟು ಮಾರ್ಚ್ ೨೦೨೪ ರೊಳಗೆ ವಿಲೀನವನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಎಸ್‌ಐಎ ಪ್ರಕಟಣೆಯಲ್ಲಿ ತಿಳಿಸಿದೆ.

ನೋಯ್ಡಾ ಪೊಲೀಸ್ ಆಯುಕ್ತರಾಗಿ ಲಕ್ಷ್ಮಿಸಿಂಗ್ ನೇಮಕ

ನೋಯ್ಡಾ, ನ. ೨೯: ಉತ್ತರ ಪ್ರದೇಶ ಸರ್ಕಾರ ಐಪಿಎಸ್ ಅಧಿಕಾರಿ ಲಕ್ಷ್ಮಿಸಿಂಗ್ ಅವರನ್ನು ನೋಯ್ಡಾ ನೂತನ ಪೊಲೀಸ್ ಆಯುಕ್ತರನ್ನಾಗಿ ನೇಮಿಸಿದ್ದು, ರಾಜ್ಯದ ಪೊಲೀಸ್ ಕಮಿಷನರೇಟ್ ಮುಖ್ಯಸ್ಥರಾಗಿರುವ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನೋಯ್ಡಾ ಆಯುಕ್ತರಾಗಿದ್ದ ಅಲೋಕ್ ಸಿಂಗ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ೨೦೦೦ ಬ್ಯಾಚ್ ಐಪಿಎಸ್ ಅಧಿಕಾರಿ ಲಕ್ಷ್ಮಿಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ೧೯೯೫ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಅಲೋಕ್ ಸಿಂಗ್ ಅವರನ್ನು ರಾಜ್ಯ ರಾಜಧಾನಿ ಲಖನೌದಲ್ಲಿರುವ ಡಿಜಿಪಿ ಕಚೇರಿಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಎಡಿಜಿಪಿ) ನೇಮಕ ಮಾಡಲಾಗಿದೆ. ಅಲೋಕ್ ಸಿಂಗ್ ಸೇರಿದಂತೆ ಒಟ್ಟು ೧೬ ಐಪಿಎಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ. ೪೮ ವರ್ಷದ ಲಕ್ಷ್ಮಿಸಿಂಗ್ ಅವರು ಯುಪಿಎಸ್ ಸಿ ಪರೀಕ್ಷೆಯಲ್ಲಿ ಮೊದಲ ಮಹಿಳಾ ಐಪಿಎಸ್ ಟಾಪರ್ ಆಗಿದ್ದು, ಹೈದರಾಬಾದ್‌ನ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟಿçÃಯ ಪೊಲೀಸ್ ಅಕಾಡೆಮಿಯಲ್ಲಿ ಅತ್ಯುತ್ತಮ ಪ್ರೊಬೇಷನರ್ ಎಂಬ ಪ್ರಶಸ್ತಿಯನ್ನು ಪಡೆದಿದ್ದಾರೆ. ತರಬೇತಿ ಅವಧಿಯಲ್ಲಿ ಲಕ್ಷ್ಮಿಸಿಂಗ್ ಅವರಿಗೆ ಪ್ರಧಾನಮಂತ್ರಿ ಬೆಳ್ಳಿ ಪದಕ ಮತ್ತು ಗೃಹ ಸಚಿವರ ಪಿಸ್ತೂಲ್ ಕೂಡ ಲಭಿಸಿದೆ.

ಡ್ರಗ್ಸ್ ಇದ್ದ ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್ ಮಹಿಳಾ ಪಡೆ

ಅಮೃತಸರ, ನ. ೨೯: ಪಂಜಾಬ್‌ನ ಅಮೃತಸರ ಜಿಲ್ಲೆಯಲ್ಲಿ ೩.೧ ಕೆ.ಜಿ. ಮಾದಕ ವಸ್ತುಗಳೊಂದಿಗೆ ಭಾರತದ ಗಡಿ ಪ್ರವೇಶಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ(ಬಿಎಸ್‌ಎಫ್)ಯ ಮಹಿಳಾ ಪಡೆ ಹೊಡೆದುರುಳಿಸಿದೆ. ಈ ಮೂಲಕ ಗಡಿಯಾಚೆಗಿನ ಡ್ರಗ್ಸ್ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ರಾತ್ರಿ ಅಮೃತಸರ ನಗರದ ಉತ್ತರಕ್ಕೆ ೪೦ ಕಿ.ಮೀ. ದೂರದಲ್ಲಿರುವ ಚಹರ್‌ಪುರ ಗ್ರಾಮದ ಬಳಿ ಪಾಕ್ ಡ್ರೋನ್ ಭಾರತದ ಭೂಪ್ರದೇಶ ಪ್ರವೇಶಿಸುತ್ತಿರುವುದನ್ನು ಗಮನಿಸಿದ ಬಿಎಸ್‌ಎಫ್ ಮಹಿಳಾ ಸಿಬ್ಬಂದಿ ಅದರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಎಸ್‌ಎಫ್‌ನ ೭೩ ಬೆಟಾಲಿಯನ್‌ನ ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌ಗಳು ಡ್ರೋನ್ ಮೇಲೆ ೨೫ ಸುತ್ತು ಗುಂಡು ಹಾರಿಸಿ ರಾತ್ರಿ ೧೧.೦೫ಕ್ಕೆ ಹೊಡೆದುರುಳಿಸಿದರು. ಶೋಧ ಕಾರ್ಯಾಚರಣೆಯ ಸಮಯದಲ್ಲಿ ಬಿಎಸ್‌ಎಫ್ ಭಾಗಶಃ ಹಾನಿಗೊಳಗಾದ ಹೆಕ್ಸಾಕಾಪ್ಟರ್ ಅನ್ನು ವಶಪಡಿಸಿಕೊಂಡಿದೆ ಎಂದು ಅವರು ಹೇಳಿದ್ದಾರೆ. ಸದಾ ಎಚ್ಚರ ವಹಿಸುವ ಬಿಎಸ್‌ಎಫ್ ಪಡೆಗಳು ಮತ್ತೊಮ್ಮೆ ಡ್ರೋನ್ ಅನ್ನು ಸೆರೆಹಿಡಿಯುವ ಮೂಲಕ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿವೆ. ಡ್ರೋನ್ ಅನ್ನು ಮಹಿಳಾ ಸಿಬ್ಬಂದಿ ಹೊಡೆದುರುಳಿಸಿದ್ದಾರೆ ಎಂದು ಬಿಎಸ್‌ಎಫ್ ವಕ್ತಾರರು ತಿಳಿಸಿದ್ದಾರೆ.

ಗಡಿ ವಿವಾದ: ಸುಪ್ರೀಂನಲ್ಲಿ ಇಂದು ವಿಚಾರಣೆ

ನವದೆಹಲಿ, ನ. ೨೯: ಕರ್ನಾಟಕ - ಮಹಾರಾಷ್ಟç ಗಡಿ ವಿವಾದ ಪ್ರಕರಣ ತಾ. ೩೦ ರಂದು (ಇಂದು) ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಬರಲಿದ್ದು, ಈ ಕುರಿತು ಹಿರಿಯ ವಕೀಲ ಮುಕುಲ್ ರೋಹಟಗಿ, ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಾಡುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನವದೆಹಲಿಯಲ್ಲಿಂದು ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮುಕುಲ್ ರೋಹಟಗಿ ಹಿರಿಯ ವಕೀಲರಾಗಿದ್ದು, ಕರ್ನಾಟಕ ಮತ್ತು ಮಹಾರಾಷ್ಟç ಗಡಿ ಸಂಬAಧಪಟ್ಟ ಹಾಗೆ ಈಗಾಗಲೇ ಎಲ್ಲ ವಿಷಯವನ್ನು ನಮ್ಮ ಅಡ್ವೋಕೇಟ್ ಜನರಲ್ ವಿವರಿಸಿದ್ದಾರೆ. ಗಡಿ ವಿವಾದದ ಕಾನೂನಾತ್ಮಕ ಹಿನ್ನೆಲೆ ಬಗ್ಗೆ ರೋಹಟಗಿ ಅವರಿಗೆ ವಿವರಣೆ ನೀಡಿದ್ದೇನೆ. ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡನೆ ಮಾಡಲು ಎಲ್ಲಾ ರೀತಿಯ ಸಿದ್ಧತೆ ನಡೆದಿದೆ ಎಂದು ಅವರು ತಿಳಿಸಿರುವುದಾಗಿ ಹೇಳಿದರು. ಮಹಾರಾಷ್ಟç ಸರ್ಕಾರ ಹಾಕಿರುವ ಮೇಂಟೈನಬಲಿಟಿ ಕುರಿತಾಗಿ ವಿಚಾರಣೆ ನಡೆಯಲಿದೆ. ಹಿಂದಿನ ಸಿಜೆಐ ದೀಪಕ್ ಮಿಶ್ರಾ ಅವರು ಮೇಂಟೈನಬಲಿಟಿ ವಿಚಾರವನ್ನು ಸಿದ್ದಪಡಿಸಿದ್ದರು. ಅದಕ್ಕೆ ನಮ್ಮ ಪ್ರತಿರೋಧ ಹೇಗಿರಬೇಕು ಎಂಬುದರ ಬಗ್ಗೆ ನಾವು ಸಿದ್ದರಾಗಿದ್ದೇವೆ ಎಂದು ತಿಳಿಸಿದರು.

ಪಿಎಫ್‌ಐ ನಿಷೇಧ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು, ನ. ೨೯: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ)ಯಡಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಭಯೋತ್ಪಾದನಾ ಸಂಘಟನೆಗಳ ಜೊತೆ ಸಂಪರ್ಕ ಹೊಂದುವ ಮೂಲಕ ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದೆ ಎನ್ನುವ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಬೆಂಗಳೂರಿನ ನಿವಾಸಿ, ಪಿಎಫ್‌ಐ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ನಾಸಿರ್ ಅಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಆದೇಶ ಕಾಯ್ದಿರಿಸಿತು. ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಜಯಕುಮಾರ್ ಪಾಟೀಲ್ ಅವರು “ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ (ಯುಎಪಿಎ) ೧೯೬೭ರ ಸೆಕ್ಷನ್ ೩, ಉಪ ನಿಯಮ ೩ರ ಅಡಿ ಪಿಎಫ್‌ಐ ನಿಷೇಧಿಸಿರುವುದು ಕಾನೂನು ಬಾಹಿರ. ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು “ಪಿಎಫ್‌ಐ ಸಂಘಟನೆ ದೇಶ ವಿರೋಧಿ ಕೃತ್ಯಗಳನ್ನು ನಡೆಸುತ್ತಿತ್ತು. ಅದು ಭಯೋತ್ಪಾದಕ ಸಂಘಟನೆಗಳ ಕೈ ಜೋಡಿಸಿ ದೇಶದಲ್ಲಿ ಹಿಂಸಾತ್ಮಕ ಚಟುವಟಿಕೆಗಳನ್ನು ನಡೆಸುತ್ತಿತ್ತು. ಜೊತೆಗೆ ಸಂಘಟನೆಯ ಸದಸ್ಯರು ರಾಷ್ಟçದಲ್ಲಿ ಭೀತಿಯ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ” ಎಂದು ನಿಷೇಧ ವನ್ನು ಸಮರ್ಥಿಸಿದರು. ಕೇಂದ್ರ ಸರ್ಕಾರ ಕಳೆದ ಸೆಪ್ಟೆಂಬರ್ ೨೮ ರಂದು ಐದು ವರ್ಷಗಳವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಪಿಎಫ್‌ಐ ಸಂಘಟನೆ ಯನ್ನು ನಿಷೇಧ ಮಾಡಿ ಆದೇಶ ಹೊರಡಿಸಿತ್ತು. ದೇಶವ್ಯಾಪಿ ಪಿಎಫ್‌ಐ ಸಂಘಟನೆಯ ಕಚೇರಿ ಮತ್ತು ಅದರ ಸದಸ್ಯರ ನಿವಾಸಗಳ ಮೇಲೆ ದಾಳಿ ನಡೆಸಿದ್ದ ನಂತರ ಕೇಂದ್ರ ಸರ್ಕಾರ ನಿಷೇಧ ಆದೇಶ ಹೊರಡಿಸಿತ್ತು.

ಅಫ್ತಾಬ್‌ಗೆ ಡಿಸೆಂಬರ್ ೧ ರಂದು ನಾರ್ಕೋ ಪರೀಕ್ಷೆ

ನವದೆಹಲಿ, ನ. ೨೯: ದೆಹಲಿಯ ಬುಲಂದ್ ಶಹರ್‌ನಲ್ಲಿ ನಡೆದ ಶ್ರದ್ಧಾ ವಾಕರ್ ಬರ್ಬರ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾಗೆ ಡಿಸೆಂಬರ್ ೧ ರಂದು ರೋಹಿಣಿಯಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ನಾರ್ಕೋ ಪರೀಕ್ಷೆ ನಡೆಸಲು ದೆಹಲಿ ಕೋರ್ಟ್ ದೆಹಲಿ ಪೊಲೀಸರಿಗೆ ಅನುಮತಿ ನೀಡಿದೆ ಎಂದು ಆರೋಪಿ ಪರ ವಕೀಲರು ತಿಳಿಸಿದ್ದಾರೆ. ಡಿಸೆಂಬರ್ ೧ ಮತ್ತು ಡಿಸೆಂಬರ್ ೫ ರಂದು ಪೂನಾವಾಲಾನನ್ನು ರೋಹಿಣಿಯಲ್ಲಿರುವ ಎಫ್‌ಎಸ್‌ಎಲ್‌ಗೆ ಕರೆದೊಯ್ಯಲು ಅನುಮತಿ ಕೋರಿ ಪೊಲೀಸರು ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಅದಕ್ಕೆ ಅನುಮತಿ ನೀಡಿದೆ ಎಂದು ಪೂನಾವಾಲಾ ಪರ ವಕೀಲ ಅಬಿನಾಶ್ ಕುಮಾರ್ ಹೇಳಿದ್ದಾರೆ. ಆರೋಪಿಯನ್ನು ಈಗಾಗಲೇ ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇನ್ನೂ ಉತ್ತರಸಿಗದ ಕೆಲವು ಪ್ರಶ್ನೆಗಳಿಗೆ ಉತ್ತರ ಪಡೆಯಲು ಪೂನಾವಾಲಾನನ್ನು ನಾರ್ಕೋ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ೨೮ ವರ್ಷದ ಪೂನಾವಾಲಾ ತನ್ನೊಂದಿಗೆ ಲಿವ್-ಇನ್ ಸಂಬAಧದಲ್ಲಿದ್ದ ಪ್ರೇಯಸಿ ಶ್ರದ್ಧಾ ವಾಲ್ಕರ್ ಅವರನ್ನು ಕತ್ತು ಹಿಸುಕಿ ಕೊಂದು, ಆಕೆಯ ದೇಹವನ್ನು ೩೫ ತುಂಡುಗಳಾಗಿ ಕತ್ತರಿಸಿದ್ದನು.