ಮಡಿಕೇರಿ, ನ. ೨೯: ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ತಾ. ೩೦ ರಂದು (ಇಂದು) ಕನ್ನಡ ರಾಜ್ಯೋತ್ಸವ ಆಚರಣೆ ಏರ್ಪಡಿಸಲಾಗಿದೆ. ಬೆಳಿಗ್ಗೆ ೧೦.೩೦ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಉದ್ಘಾಟಿಸುವರು.

ಹೋಬಳಿ ಅಧ್ಯಕ್ಷ ಸುನಿಲ್ ಪತ್ರಾವೋ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣಕಾರರಾಗಿ ಕಾವೇರಿ ಕಾಲೇಜು ನಿವೃತ್ತ ಪ್ರಾಂಶುಪಾಲೆ ಎಂ.ಕೆ. ಜಾನಕಿ ಆಗಮಿಸುವರು.

ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾಲೂಕು ಅಧ್ಯಕ್ಷ ನವೀನ್ ಅಂಬೆಕಲ್, ವಸತಿ ಶಾಲೆ ಪ್ರಾಂಶುಪಾಲ ಲೋಕೇಶ್, ಗ್ರಾಮ ಪಂಚಾಯಿತಿ ಸದಸ್ಯ ಕಾಳನ ರವಿ, ನಂಗಾರು ವೀಣಾ, ಠಾಣಾಧಿಕಾರಿ ಪ್ರಿಯಾಂಕ, ಕಸಾಪ ಜಿಲ್ಲಾ ಸಮಿತಿ ಸದಸ್ಯ ಹೊಸೂರು ಸತೀಶ್ ಕುಮಾರ್, ಇನ್ನಿತರರು ಉಪಸ್ಥಿತರಿರುವರು.