ಸೋಮವಾರಪೇಟೆ, ನ. ೩೦: ಕೂಡಿಗೆಯಲ್ಲಿ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ನಲ್ಲಿ ಭಾಗವಹಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾದ ನೇರುಗಳಲೆ ಸರ್ಕಾರಿ ಪ್ರೌಢಶಾಲೆ ಹಾಗೂ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ನೇರುಗಳಲೆ ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಲಾಯಿತು. ಪ್ರೌಢಶಾಲಾ ವಿಭಾಗದ ಶಾಟ್‌ಪುಟ್‌ನಲ್ಲಿ ಪ್ರಥಮ ಹಾಗೂ ಜಾವಲಿನ್‌ನಲ್ಲಿ ದ್ವಿತೀಯ ಸ್ಥಾನಗಳಿಸಿದ ಬಿ.ಸಿ. ಲಾಂಛನ, ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನಗಳಿಸಿದ ನವೀನ್, ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನಗಳಿಸಿದ ರಿಹಾನ, ಪ್ರಾಥಮಿಕ ಶಾಲಾ ವಿಭಾಗದ ಶಾಟ್‌ಪುಟ್‌ನಲ್ಲಿ ಪ್ರಥಮ ಸ್ಥಾನಗಳಿಸಿದ ನೇಸರ ಅವರುಗಳನ್ನು ಗ್ರಾ.ಪಂ. ವತಿಯಿಂದ ಸನ್ಮಾನಿಸಲಾಯಿತು.

ಗ್ರಾ.ಪಂ. ಅಧ್ಯಕ್ಷೆ ಕೆ.ಜಿ. ಪುಷ್ಪ, ಅಭಿವೃದ್ಧಿ ಅಧಿಕಾರಿ ಆಯಿಷಾ ಅವರುಗಳು ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿದರು. ಈ ಸಂದರ್ಭ ಗ್ರಾ.ಪಂ. ಉಪಾಧ್ಯಕ್ಷ ಪ್ರವೀಣ್, ಸದಸ್ಯರಾದ ವಿನೋದ್ ಕುಮಾರ್, ಹೆಚ್.ಆರ್. ಪ್ರಕಾಶ್, ವಿನಯ್ ಸಂಭ್ರಮ್, ರಾಮ್‌ದೇವ್, ಜಲಜಾಕ್ಷಿ, ಕವಿತ, ಅಶ್ವಿನಿ, ಎಸ್‌ಡಿಎಂಸಿ ಅಧ್ಯಕ್ಷೆ ಪದ್ಮಾವತಿ, ಮುಖ್ಯಶಿಕ್ಷಕಿ ಎಸ್ತೆಲಾ ಡಿಸಿಲ್ವಾ, ಕೃಷ್ಣೇಗೌಡ, ಶಿಕ್ಷಕರುಗಳಾದ ಚಂದ್ರಾವತಿ, ರಂಗಸ್ವಾಮಿ, ರತ್ನಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.