ಮಡಿಕೇರಿ, ನ. ೩೦: ಮಡಿಕೇರಿಯ ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯಿಂದ ಡಿಸೆಂಬರ್ ೧೧ ರಂದು ಮತ್ತು ೧೮ರಂದು ಇದೇ ಪ್ರಥಮ ಬಾರಿಗೆ ಜಿಲ್ಲೆಯಲ್ಲಿ ಬ್ರಾಹ್ಮಣರ ಕ್ರೀಡಾಕೂಟವನ್ನು ಆಯೋಜಿಸಲಾಗಿರುವ ಹಿನ್ನೆಲೆಯಲ್ಲಿ ಇಂದು ಗೋಣಿಕೊಪ್ಪಲು ವಿಪ್ರ ಸಭಾಭವನದಲ್ಲಿ ವಿವಿದ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿದ್ಯಾಭಿವೃದ್ಧಿ ನಿಧಿಯ ಉಪಾಧ್ಯಕ್ಷ ರಾಮಚಂದ್ರ ಮೂಗೂರು, ಕೊಡಗು ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ, ಮಂಜುನಾಥ್, ಕಾರ್ಯದರ್ಶಿ ಪ್ರಸಾದ್, ಖಜಾಂಚಿ ಪವನ್, ಮಾಜಿ ಅಧ್ಯಕ್ಷ ಪ್ರಭಾಕರ ನೆಲ್ಲಿತ್ತಾಯ, ವಿಪ್ರ ಮಹಿಳಾ ಸಂಘದ ಅಧ್ಯಕ್ಷೆ ವಿಜಯಲಕ್ಷಿö್ಮ, ಶ್ರೀಧರ್ ಉಪಸ್ಥಿತರಿದ್ದರು.