ಕುಶಾಲನಗರ, ನ. ೩೦: ಕುಶಾಲನಗರ ಆಟೋ ಮಾಲೀಕರು ಮತ್ತು ಚಾಲಕರ ಸಂಘದ ಆಶ್ರಯದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅದ್ದೂರಿ ಮೆರವಣಿಗೆ ನಡೆಯಿತು.

ಬೈಚನಹಳ್ಳಿ ಮಾರಿಯಮ್ಮ ದೇವಾಲಯ ಬಳಿಯಿಂದ ಆರಂಭಗೊAಡ ಮೆರವಣಿಗೆಗೆ ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಚಾಲನೆ ನೀಡಿದರು. ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು. ಈ ಸಂದರ್ಭ ಆಟೋ ಮಾಲೀಕರು ಚಾಲಕರ ಸಂಘದ ಅಧ್ಯಕ್ಷ ಆರ್. ಮೋಹನ್, ಪಟ್ಟಣ ಪಂಚಾಯಿತಿ ಸದಸ್ಯ ಅಮೃತರಾಜ್, ಸಂಘದ ಪದಾಧಿಕಾರಿಗಳು ಇದ್ದರು.