ಮಡಿಕೇರಿ: ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿಯ ಸಾರ್ವಜನಿಕ ಗ್ರಂಥಾಲಯಲ್ಲಿ ಸಂವಿಧಾನ ದಿವಸ ಆಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಸಂವಿಧಾನ ದಿವಸದ ಬಗ್ಗೆ ಮಾತನಾಡಿದ ಗ್ರಾ.ಪಂ. ಸದಸ್ಯ ಎಂ.ಡಿ. ಅಯ್ಯಪ್ಪ (ಅಶೋಕ) ಅವರು ವೈಯಕ್ತಿಕವಾಗಿ ಬಹುಮಾನ ನೀಡಿದರು.

ಗ್ರಾ.ಪಂ. ಅಧ್ಯಕ್ಷರು ಸಂವಿಧಾನ ದಿವಸದ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು. ನಂತರ ಭಾರತ ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಭೋದಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷೆ ಬಿ.ಸಿ. ಸುಜಾತ, ಗ್ರಾ.ಪಂ. ಸದಸ್ಯರು, ಶಾಲಾ ಶಿಕ್ಷಕರು ಹಾಗೂ ಮಕ್ಕಳು, ಗ್ರಂಥಾಲಯ ಮೇಲ್ವಿಚಾರಕಿ ಟಿ.ಬಿ. ಕೋಮಲ ಮತ್ತು ಗ್ರಾ.ಪಂ. ಸಿಬ್ಬಂದಿಗಳು ಹಾಜರಿದ್ದರು.

ಮರಗೋಡು: ನೆಹರೂ ಯುವ ಕೇಂದ್ರ ಮಡಿಕೇರಿ, ಯುವಜನ ಸೇವಾ ಮತ್ತು ಕ್ರೀಡಾ ಸಚಿವಾಲಯ ಕೊಡಗು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಡಗು, ಜಿಲ್ಲಾ ಯುವ ಒಕ್ಕೂಟ ಕೊಡಗು ಮತ್ತು ತಾಲೂಕು ಯುವ ಒಕ್ಕೂಟ ಮಡಿಕೇರಿ, ಭಗತ್ ಯುವಕ ಸಂಘ ಹುಲಿತಾಳ ಮತ್ತು ಭಾರತಿ ಸಂಯುಕ್ತ ಪದವಿಪೂರ್ವ ಕಾಲೇಜು ಮರಗೋಡು ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಜರುಗಿತು.

ಮರಗೋಡಿನ ಭಾರತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಜರುಗಿದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತಿ ಹೈಸ್ಕೂಲ್ ಸೊಸೈಟಿಯ ಅಧ್ಯಕ್ಷ ಕಟ್ಟೆಮನೆ ಸೋನಾಜಿತ್ ವಹಿಸಿದ್ದರು. ಈ ಸಂದರ್ಭ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಂವಿಧಾನದ ರಚನೆ ಹಾಗೂ ಧ್ಯೇಯೋದ್ದೇಶಗಳ ಬಗ್ಗೆ ತಿಳಿದುಕೊಂಡರೆ ಭವಿಷ್ಯದಲ್ಲಿ ಸಂವಿಧಾನದ ಸೃಷ್ಟಿಕರ್ತರ ಆಶೋತ್ತರಗಳನ್ನು ನನಸಾಗಿಸಲು ಸಾಧ್ಯವಾಗುತ್ತದೆ, ಈ ನಿಟ್ಟಿನಲ್ಲಿ ಸಂವಿಧಾನ ದಿನಾಚರಣೆ ಅಗತ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ‘ಭಾರತ ಸಂವಿಧಾನದ ಕತೆ’ ಬಗ್ಗೆ ಚೇರಂಬಾಣೆ ಅರುಣ ಪ್ರೌಢಶಾಲೆಯ ಶಿಕ್ಷಕ ಎಸ್.ಪಿ. ಪರಮೇಶ್ ಉಪನ್ಯಾಸ ನೀಡಿದರು. ನಮ್ಮೆಲ್ಲರ ಮನಸ್ಸಿನಲ್ಲಿ ಭಾರತವನ್ನು ಪೂಜಿಸುವ , ಗೌರವಿಸುವ ಮನೋಭಾವ ಇರಬೇಕು ಎಂದು ತಿಳಿಸಿದರು. ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭ ಸಂವಿಧಾನದ ಪಿತಾಮಹ ಅಂಬೇಡ್ಕರ್ ಮತ್ತು ಸಂವಿಧಾನ ಕೃತಿಗೆ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿ ಬಳಿಕ ಪ್ರತಿಜ್ಞಾ ವಿಧಿಯನ್ನು ಭೋದಿಸಲಾಯಿತು.

ಕಾರ್ಯಕ್ರಮದಲ್ಲಿ ಮರಗೋಡು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಎಂ. ಚಂದ್ರಮೌಳಿ, ಹೊಸ್ಕೇರಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ತೇಜಸ್, ಹೊಸ್ಕೇರಿ ಗ್ರಾಮ ಪಂಚಾಯಿತಿ ಸದಸ್ಯೆ ಹಾಗೂ ಭಾರತಿ ಹೈಸ್ಕೂಲ್ ಸೊಸೈಟಿ ನಿರ್ದೇಶಕಿ ಬಡುವಂಡ್ರ ಕವಿತಾ, ಪ್ರಾಂಶುಪಾಲ ಆರ್. ಸುರೇಶ್ ನಾಯ್ಕ್, ಮುಖ್ಯಶಿಕ್ಷಕ ಪಿ.ಎಸ್. ರವಿಕೃಷ್ಣ, ಹಾಕತ್ತೂರು ಗ್ರಾಮ ಪಂಚಾಯಿತಿ ಸದಸ್ಯ ಬಿ.ವಿ. ಯೋಗೇಶ್, ತಾಲೂಕು ಯುವ ಒಕ್ಕೂಟದ ಅಧ್ಯಕ್ಷ ಬಾಳಾಡಿ ದಿಲೀಪ್ ಕುಮಾರ್, ಭಗತ್ ಯುವಕ ಸಂಘದ ಕಾರ್ಯದರ್ಶಿ ಹೆಚ್.ಪಿ. ನಂದಕುಮಾರ್ ಉಪಸ್ಥಿತರಿದ್ದರು. ಶಿಕ್ಷಕಿ ಬಿ.ಬಿ. ಪೂರ್ಣಿಮಾ ನಿರ್ವಹಿಸಿದರು.ಸೋಮವಾರಪೇಟೆ: ನಗರ ಕಾಂಗ್ರೆಸ್ ವತಿಯಿಂದ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ನಾಗರಾಜ್ ವಹಿಸಿದ್ದರು.

ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ಜೀವನದ ತತ್ವಾದರ್ಶಗಳನ್ನು ಮೆಲುಕು ಹಾಕಲಾಯಿತು. ಕಾಂಗ್ರೆಸ್ ಎಸ್‌ಸಿ-ಎಸ್‌ಟಿ ಘಟಕದ ಜಿಲ್ಲಾಧ್ಯಕ್ಷ ಬಿ.ಈ. ಜಯೇಂದ್ರ, ಕಾರ್ಯದರ್ಶಿ ಹೆಚ್. ಮಂಜುನಾಥ್, ನಗರ ಕಾಂಗ್ರೆಸ್ ಕಾರ್ಯದರ್ಶಿ ಮಹಮ್ಮದ್ ಶಫಿ (ಬೇಟು), ಕಾರ್ಮಿಕ ಘಟಕದ ಅಧ್ಯಕ್ಷ ಜೇಕಬ್ ಸೈಮನ್, ಹಾನಗಲ್ ಕಿರಣ್, ಪುಟ್ಟಸ್ವಾಮಿ, ರಾಮು, ಎಸ್‌ಸಿ-ಎಸ್‌ಟಿ ಘಟಕದ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.ವೀರಾಜಪೇಟೆ: ಸರ್ಕಾರಿ ಪಥಮ ದರ್ಜೆ ಕಾಲೇಜು, ವೀರಾಜಪೇಟೆಯ ಐ.ಕ್ಯೂ.ಎ.ಸಿ. (ಆಂತರಿಕ ಗುಣಮಟ್ಟ ಭರವಸಾ ಕೋಶ) ರಾಜ್ಯಶಾಸ್ತç ವಿಭಾಗ, ಎನ್.ಎಸ್.ಎಸ್. ಘಟಕ-೧ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ವೀರಾಜಪೇಟೆ ಮತ್ತು ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ವೀರಾಜಪೇಟೆಯ ಹಿರಿಯ ಸಿವಿಲ್ ನ್ಯಾಯಾಧೀಶ ನ್ಯಾ. ಲೋಕೇಶ್ ಎಂ.ಜಿ. ಅವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನ್ಯಾಯಾಧೀಶ ನ್ಯಾ. ಸಂತೋಷ್ ಕೊಠಾರಿ ಅವರು ಸಂವಿಧಾನದ ಬೆಳವಣಿಗೆ ಹಾಗೂ ಆಶಯಗಳ ಕುರಿತಂತೆ ಉಪನ್ಯಾಸವನ್ನು ನೀಡಿದರು.

ವೀರಾಜಪೇಟೆ ವಕೀಲರ ಸಂಘದ ಅಧ್ಯಕ್ಷರು ಹಾಗೂ ವಕೀಲ ದಿನೇಶ್ ಎಂ.ಕೆ., ಹಾಜಿರಾ ಎಂ., ಮಹಮದ್ ನವಲಗುಂದ, ಧನ್ಯಾ ಎಂ.ಕೆ., ಪ್ರದ್ಯುಮ ಅವರು ಭಾರತೀಯ ಸಂವಿಧಾನದ ವಿವಿಧ ಅಂಶಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಅಭಿಪ್ರಾಯ ಹಂಚಿಕೊAಡರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಯಾನಂದ ಕೆ.ಸಿ. ವಹಿಸಿದ್ದರು. ವೇದಿಕೆಯಲ್ಲಿ ರಾಜ್ಯಶಾಸ್ತç ವಿಭಾಗದ ಮುಖ್ಯಸ್ಥರು ಮತ್ತು ರಾ.ಸೇ.ಯೋ.ಯ ಯೋಜನಾಧಿಕಾರಿ ದಿವ್ಯ ಎಂ.ಬಿ. ಉಪಸ್ಥಿತರಿದ್ದರು. ವಿದ್ಯಾರ್ಥಿನಿ ತೀರ್ಥ ನಿರೂಪಿಸಿ, ರಾಜ್ಯಶಾಸ್ತç ಉಪನ್ಯಾಸಕರಾದ ವನಿತಕುಮಾರ್ ವಂದಿಸಿದರು.