ಮಡಿಕೇರಿ, ನ. ೩೦: ವೃತ್ತಿಪರ ಶಿಕ್ಷಣ ಮೊದಲನೇ ವರ್ಷದಲ್ಲಿ ಓದುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ (ಸೈನ್ಯಾಧಿಕಾರಿಗಳ ಮಕ್ಕಳನ್ನು ಹೊರತುಪಡಿಸಿ) ಕೇಂದ್ರಿಯ ಸೈನಿಕ ಮಂಡಳಿಯಿAದ ಪ್ರಧಾನಮಂತ್ರಿ ಶಿಷ್ಯ ವೇತನಕ್ಕಾಗಿ ಅರ್ಜಿ ಸಲ್ಲಿಸಲು ನವೆಂಬರ್ ೩೦ ಕೊನೆಯ ದಿನವಾಗಿತ್ತು.

ಪ್ರಸ್ತುತ ೨೦೨೨-೨೩ನೇ ಸಾಲಿನ ಪ್ರವೇಶ ಪ್ರಕ್ರಿಯೆಗಳು ವಿಳಂಬವಾಗಿರುವ ಕಾರಣ ತಾ. ೩೧ ರವರೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ ಎಂದು ಕೇಂದ್ರೀಯ ಸೈನಿಕ ಮಂಡಳಿಯು ಘೋಷಿಸಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು WWW.ಏSಃ.ಉಔಗಿ.Iಓ ನಲ್ಲಿ ಸಲ್ಲಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.