ಸೋಮವಾರಪೇಟೆ, ನ. ೩೦: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅನಗತ್ಯ ವಿಳಂಬ, ನಿರ್ಲಕ್ಷö್ಯವಹಿಸಿದರೆ ಶಿಸ್ತುಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು. ಗಂಭೀರ ಪ್ರಕರಣಗಳಿದ್ದರೆ ದಂಡ ವಿಧಿಸುವುದರೊಂದಿಗೆ ಇಲಾಖಾ ಕ್ರಮಕ್ಕೆ ಆದೇಶ ಮಾಡುವುದಾಗಿ ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಅಧ್ಯಕ್ಷ ಕೆ. ಕರಿಯಪ್ಪ ಅವರು ಎಚ್ಚರಿಕೆ ನೀಡಿದರು.

ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆಯಲ್ಲಿ ಭಾಗಿಯಾಗಿದ್ದ ತಾಲೂಕಿನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಈ ಸೂಚನೆ ನೀಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕೆಲಸದ ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅನೇಕ ಕೆಲಸ ಕಾರ್ಯಗಳ ಜವಾಬ್ದಾರಿ ಪಿಡಿಓಗಳ ಮೇಲಿದೆ. ಆದರೂ ಸಾರ್ವಜನಿಕರ ಕುಂದು ಕೊರತೆಗಳಿಗೆ ಸ್ಪಂದಿಸುವ ಮಹತ್ತರ ಜವಾಬ್ದಾರಿಯನ್ನು

(ಮೊದಲ ಪುಟದಿಂದ) ಕಟ್ಟುನಿಟ್ಟಾಗಿ ನಿಭಾಯಿಸಬೇಕು. ಸಣ್ಣಪುಟ್ಟ ಸಮಸ್ಯೆಗಳನ್ನು ತಮ್ಮ ಹಂತದಲ್ಲಿಯೇ ಬಗೆಹರಿಸಿಕೊಳ್ಳಲು ಮುಂದಾಗ ಬೇಕೆಂದು ಸಲಹೆ ನೀಡಿದರು.

ಸಾರ್ವಜನಿಕರ ಹಿತಾಸಕ್ತಿ ಕಾಪಾಡುವುದು, ದೂರುದಾರರಿಗೆ ನ್ಯಾಯ ಒದಗಿಸುವುದು, ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವುದೇ ಪ್ರಾಧಿಕಾರದ ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ ಪ್ರಾಧಿಕಾರವು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ. ಪಿಡಿಓಗಳು ತಮ್ಮ ಹಂತದಲ್ಲಿ ಬಗೆಹರಿಸಬಹುದಾದ ಎಲ್ಲಾ ಪ್ರಕರಣಗಳನ್ನು ಬಗೆಹರಿಸಿಕೊಳ್ಳಬೇಕು. ಅನಗತ್ಯ ವಿಳಂಬ, ನಿರ್ಲಕ್ಷö್ಯ ತೋರಿದರೆ ಕುಂದುಕೊರತೆಗಳಿದ್ದರೆ ದೂರು ನೀಡಲು ಮನವಿ

ಹಾಸನ, ಕೊಡಗು, ಮೈಸೂರು, ಮಂಡ್ಯ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಒಳಗೊಂಡAತೆ ಪ್ರಾಧಿಕಾರದ ವಿಭಾಗೀಯ ಕಚೇರಿ ಕಾರ್ಯನಿರ್ವಹಿಸುತ್ತಿದ್ದು, ಇದರ ಕೇಂದ್ರ ಸ್ಥಾನ ಚಿಕ್ಕಮಗಳೂರಿನಲ್ಲಿದೆ. ಎಲ್ಲಾ ಜಿಲ್ಲೆಗಳ ಜಿ.ಪಂ. ಕಚೇರಿಯಲ್ಲಿ ಪ್ರಾಧಿಕಾರದ ಕುಂದುಕೊರತೆ ನಿವಾರಣಾ ಕಚೇರಿಯನ್ನು ತೆರೆಯಲಾಗಿದೆ. ಕೊಡಗು ಜಿಲ್ಲೆಗೆ ಸಂಬAಧಿಸಿದAತೆ ಮಡಿಕೇರಿಯಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಕಚೇರಿಯಿದೆ. ಸಾರ್ವಜನಿಕರು ಜಿ.ಪಂ., ತಾ.ಪಂ., ಗ್ರಾ.ಪಂ.ಗಳಿಗೆ ಸಂಬAಧಿಸಿದAತೆ ಕುಡಿಯುವ ನೀರು ಮತ್ತು ಸರಬರಾಜು ನಿರ್ವಹಣೆ, ರಸ್ತೆ ನಿರ್ವಹಣೆ, ಆರೋಗ್ಯ, ಬೀದಿ ದೀಪ, ನೈರ್ಮಲ್ಯೀಕರಣ, ಫಲಾನುಭವಿಗಳ ಆಯ್ಕೆಯಲ್ಲಿ ಲೋಪದೋಷ, ಪ್ರಮಾಣ ಪತ್ರ ನೀಡುವುದು, ಸವಲತ್ತು ಮಂಜೂರು ಮಾಡುವಲ್ಲಿ ಲೋಪದೋಷ, ಸರಕು-ಸೇವೆ ನೀಡಲು ನಿರಾಕರಿಸುವ ಅಧಿಕಾರಿ ಸೇರಿದಂತೆ ಇತರ ಸಮಸ್ಯೆಗಳಿದ್ದರೆ ಸಾರ್ವಜನಿಕರು ಅರ್ಜಿಯ ಮೂಲಕ ಕುಂದುಕೊರತೆ ನಿವಾರಣಾ ಪ್ರಾಧಿಕಾರ, ೨ನೇ ಮಹಡಿ, ಜಿಲ್ಲಾ ಪಂಚಾಯತ್ ಕಚೇರಿ, ಮಡಿಕೇರಿ, ಕೊಡಗು ಜಿಲ್ಲೆ-ಇಲ್ಲಿಗೆ ದೂರು ನೀಡಬಹುದು. ಮಾಹಿತಿಗೆ ಮೊ:೮೪೩೧೫೬೨೨೮೧ನ್ನು ಸಂಪರ್ಕಿಸಬಹುದು ಎಂದು ಪ್ರಾಧಿಕಾರದ ಅಧ್ಯಕ್ಷ ಕೆ. ಕರಿಯಪ್ಪ ಅವರು ‘ಶಕ್ತಿ’ ಮೂಲಕ ಮನವಿ ಮಾಡಿದ್ದಾರೆ.ಮುಂದೆ ವಿಚಾರಣೆ ಎದುರಿಸ ಬೇಕಾಗುತ್ತದೆ ಎಂದು ಎಚ್ಚರಿಸಿದರು.

ನಾಗರಿಕರಿಗೆ ಸೇವೆ ನೀಡುವಲ್ಲಿ ಉದ್ದೇಶಪೂರ್ವಕವಾಗಿ ನಿರ್ಲಕ್ಷö್ಯ ವಹಿಸಿದರೆ ಕಲಂ ೨೯೬/೭ ಅಡಿಯಲ್ಲಿ ನೋಟೀಸ್ ನೀಡಿ ಶಿಸ್ತು ಕ್ರಮ ಜರುಗಿಸುವುದು, ಅಧಿಕಾರಿಗಳಿಂದ ದಂಡ ವಸೂಲಿ ಮಾಡಲು ಅವಕಾಶವಿದೆ ಎಂದ ಕರಿಯಪ್ಪ ಅವರು, ಕೆಲವೊಂದು ಪ್ರಕರಣಗಳಲ್ಲಿ ಗ್ರಾ.ಪಂ. ಸದಸ್ಯರ ಒತ್ತಡಕ್ಕೆ ಮಣಿದು ಅಧಿಕಾರಿಗಳು ತಪ್ಪಿಗೆ ಸಿಲುಕಿಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರಿ ಅಧಿಕಾರಿಗಳೆಂಬ ಎಚ್ಚರಿಕೆ ಪಿಡಿಓಗಳಿಗೆ ಇರಬೇಕು. ಸದಸ್ಯರ ಮಾತಿಗೆ ಕಟ್ಟುಬಿಟ್ಟು ಸೇವೆಗೆ ಸಂಚಕಾರ ತಂದುಕೊಳ್ಳಬಾರದು. ದೂರುಗಳು ಬಂದರೆ ಕ್ರಮಕ್ಕೆ ಒಳಪಡಬೇಕಾಗುತ್ತದೆ ಎಂದು ಕಿವಿಮಾತು ಹೇಳಿದರು.

ಸಭೆಯಲ್ಲಿ ಮಹಾತ್ಮಾ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ರವೀಶ್ ಸೇರಿದಂತೆ ತಾಲೂಕಿನ ಎಲ್ಲಾ ಗ್ರಾ.ಪಂ.ಗಳ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು.