ಮಡಿಕೇರಿ, ನ. ೩೦: ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ವೀರಾಜಪೇಟೆ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದು, ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ನಾಪೋಕ್ಲುವಿನ ಎಂ.ಎ. ಮನ್ಸೂರ್ ಆಲಿ ತಿಳಿಸಿದ್ದಾರೆ.

ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಪಕ್ಷದ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಝಕರಿಯಾ ಝಾಕಿರ್ ಹಾಗೂ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರಿಗೆ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿರುವ ಅವರು, ವರಿಷ್ಠರು ತಮಗೆ ಸ್ಪರ್ಧಿಸಲು ಅವಕಾಶ ನೀಡಲಿದ್ದಾರೆ ಎಂದÀÄ ವಿಶ್ವಾಸ ವ್ಯಕ್ತಪಡಿಸಿದ್ದಾರೆ.