ಮಡಿಕೇರಿ, ಡಿ. ೨: ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸ ಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ರವರ ಕೋರಿಕೆಯಂತೆ ತಾ.೩ ರಂದು (ಇಂದು) ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ಆಲೂರು ಸಿದ್ದಾಪುರ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಗೋಣಿಮರೂರು, ಆಲೂರು ಸಿದ್ದಾಪುರ, ಮಾಲಂಬಿ, ಸಿದ್ದಲಿಂಗಪುರ, ಅಳುವಾರ, ಹೊಸಗುತ್ತಿ, ಕೈಸರವಳ್ಳಿ, ಗಣಗೂರು, ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಅಭಿಯಂತರರಾದ ಅನಿತಾ ಬಾಯಿ ಕೋರಿದ್ದಾರೆ.