ತೈಲ ಬೆಲೆ ಇಳಿಸದ ಕೇಂದ್ರ:ಕಾAಗ್ರೆಸ್ ಆರೋಪ

ನವದೆಹಲಿ, ಡಿ. ೧: ಕಚ್ಚಾ ತೈಲ ಬೆಲೆ ಕಳೆದ ೧೦ ತಿಂಗಳಲ್ಲೇ ಅತಿ ಕಡಿಮೆಯಾಗಿದೆ. ಆದರೂ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸದೆ ಜನರ ಲೂಟಿ ಮುಂದುವರೆಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. "ಮೇ ೧೬, ೨೦೧೪ ರಂದು (ದೆಹಲಿ) - ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ ೧೦೭.೦೯ ಡಾಲರ್ ಇತ್ತು. ಆಗ ಪೆಟ್ರೋಲ್ - ಪ್ರತಿ ಲೀಟರ್ ೭೧.೫೧ ರೂ. ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್ ೫೭.೨೮. ಇತ್ತು. ಡಿಸೆಂಬರ್ ೧, ೨೦೨೨ ರಂದು - ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ ೮೭.೫೫. ಡಾಲರ್ ಗೆ ಇಳಿಕೆಯಾಗಿದೆ. ಇದು ಕಳೆದ ೧೦ ತಿಂಗಳಲ್ಲೇ ಅತ್ಯಂತ ಕಡಿಮೆಯಾಗಿದೆ. ಜಾಗತಿಕ ಕಚ್ಚಾ ತೈಲ ದರ ಶೇ. ೨೫ ರಷ್ಟು ಇಳಿಕೆಯಾಗಿದ್ದರೂ, ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸರ್ಕಾರ ಒಂದೇ ಒಂದು ರೂಪಾಯಿ ಇಳಿಕೆ ಮಾಡಿಲ್ಲ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಜನರು ದುಬಾರಿ ಹಣದುಬ್ಬರದಿಂದ ಬಳಲುತ್ತಿರುವಾಗ ಪ್ರಧಾನಿಯವರು ಜನರ ಮೇಲೆ ಹೆಚ್ಚು ತೆರಿಗೆ ವಿಧಿಸುವ ಮೂಲಕ ಹಣ ವಸೂಲಿ ಮಾಡುವಲ್ಲಿ ನಿರತರಾಗಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಕಳೆದ ೬ ತಿಂಗಳಲ್ಲಿ ಕಚ್ಚಾ ತೈಲವು ಶೇ. ೨೫ ಕ್ಕಿಂತ ಹೆಚ್ಚು ಅಗ್ಗವಾಗಿದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ೧೦ ರೂ.ಗಿಂತ ಹೆಚ್ಚು ಕಡಿಮೆ ಮಾಡಬಹುದು. ಆದರೆ ಸರ್ಕಾರ ಒಂದೇ ಒಂದು ರೂಪಾಯಿಯನ್ನು ಕಡಿಮೆ ಮಾಡಿಲ್ಲ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ಚಿರತೆ ಪ್ರತ್ಯಕ್ಷ: ಜನರಲ್ಲಿ ಹೆಚ್ಚಿದ ಆತಂಕ!

ಬೆAಗಳೂರು, ಡಿ. ೧: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ತುರಹಳ್ಳಿ ಅರಣ್ಯ ಪ್ರದೇಶ ಮತ್ತು ದೇವನಹಳ್ಳಿ ಸುತ್ತಮುತ್ತ ಚಿರತೆ ಪ್ರತ್ಯಕ್ಷವಾಗಿರುವುದು ಜನರಲ್ಲಿ ಭೀತಿಯನ್ನು ಮೂಡಿಸಿದೆ. ನಾಲ್ಕು ಚಿರತೆಗಳು ಓಡಾಡುತ್ತಿರುವುದು ಸಿಸಿಟಿವಿಗಳಲ್ಲಿ ಪತ್ತೆಯಾಗಿದೆ ಎಂದು ಸ್ಥಳೀಯ ನಿವಾಸಿಗಳು ಹೇಳುತ್ತಿದ್ದಾರೆ. ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಬೋನ್ ಇಡುವ ಮೂಲಕ ಚಿರತೆ ಸೆರೆಗೆ ಅರಣ್ಯ ಅಧಿಕಾರಿಗಳು ಮುಂದಾಗಿದ್ದಾರೆ. ಬೋನ್‌ನಲ್ಲಿ ನಾಯಿಮರಿ ಕಟ್ಟಿಹಾಕಿ ಚಿರತೆ ಸೆರೆಗೆ ಪ್ರಯತ್ನಿಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಖಾಸಗಿ ಕಾರ್ಖಾನೆ ಬಳಿ ಕೂಡ ಎರಡು ದಿನದಿಂದ ಚಿರತೆ ಓಡಾಟ ನಡೆಸಿರುವುದು ಪತ್ತೆಯಾಗಿದೆ. ಈ ಪ್ರದೇಶಗಳ ನಿವಾಸಿಗಳು ಎಚ್ಚರಿಕೆಯಿಂದ ಓಡಾಡುವಂತೆ ಅರಣ್ಯ ಇಲಾಖೆ ತಿಳಿಸಿದೆ.

ಜಿ೨೦ ಅಧ್ಯಕ್ಷತೆ ಮಾನವಕುಲದ ಪ್ರಯೋಜನಕ್ಕಾಗಿ ಕೆಲಸ ಮಾಡಲಿದೆ

ನವದೆಹಲಿ, ಡಿ. ೧: ಇಂದಿನಿAದ ಭಾರತವು ಜಿ೨೦ ಶೃಂಗಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದು, ಆಜಾದಿ ಕಾ ಅಮೃತ ಮಹೋತ್ಸವದ ವರ್ಷದಲ್ಲಿ ಮಹತ್ವದ ಶೃಂಗಸಭೆಯು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯವಾಗಿದೆ. ಪ್ರಧಾನಿ ಮೋದಿ ನವೆಂಬರ್ ೧೬ ರಂದು ಬಾಲಿಯಲ್ಲಿ ಇಂಡೋನೇಷ್ಯಾದ ಅಧ್ಯಕ್ಷ ಜೋಕೊ ವಿಡೋಡೊ ಅವರಿಂದ ಭಾರತದ ಜಿ೨೦ ಅಧ್ಯಕ್ಷ ಸ್ಥಾನವನ್ನು ಅಧಿಕೃತವಾಗಿ ಸ್ವೀಕರಿಸಿದರು. ಇಂದಿನಿAದ ಭಾರತದ ಜಿ೨೦ ಅಧ್ಯಕ್ಷತೆ ಆರಂಭವಾಗುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಸರಣಿ ಟ್ವೀಟ್ ಮಾಡಿರುವ ಮೋದಿಯವರು, ಭಾರತದ ಜಿ೨೦ ಅಧ್ಯಕ್ಷತೆ ಮಾನವಕುಲದ ಪ್ರಯೋಜನಕ್ಕಾಗಿ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ. ಭಾರತದ ಜಿ೨೦ ಅಧ್ಯಕ್ಷತೆಯು ಏಕತ್ವದ ಸಾರ್ವತ್ರಿಕ ಅರ್ಥ ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯವನ್ನು ಉತ್ತೇಜಿಸಲು ಕೆಲಸ ಮಾಡುತ್ತದೆ. ಇಂದು ಜಗತ್ತು ಎದುರಿಸುತ್ತಿರುವ ದೊಡ್ಡ ಸವಾಲುಗಳನ್ನು ಒಟ್ಟಾಗಿ ಕಾರ್ಯನಿರ್ವಹಿಸುವ ಮೂಲಕ ಮಾತ್ರ ಪರಿಹರಿಸಬಹುದು. ಮಾನವೀಯತೆಯ ಆರನೇ ಒಂದು ಭಾಗದಷ್ಟು ಮತ್ತು ಅದರ ಅಗಾಧ ವೈವಿಧ್ಯತೆಯ ಭಾಷೆಗಳು, ಧರ್ಮಗಳು, ಪದ್ಧತಿಗಳು ಮತ್ತು ನಂಬಿಕೆಗಳೊAದಿಗೆ, ಭಾರತವು ಪ್ರಪಂಚದ ಸೂಕ್ಷ್ಮರೂಪವಾಗಿದೆ ಎಂದು ತಿಳಿಸಿದ್ದಾರೆ. ಸಾಮೂಹಿಕ ನಿರ್ಧಾರ ತೆಗೆದುಕೊಳ್ಳುವ ಹಳೆಯ-ತಿಳಿದಿರುವ ಸಂಪ್ರದಾಯಗಳೊAದಿಗೆ, ಭಾರತವು ಪ್ರಜಾಪ್ರಭುತ್ವದ ಅಡಿಪಾಯ ಡಿಎನ್‌ಎಗೆ ಕೊಡುಗೆ ನೀಡುತ್ತದೆ. ಮುಕ್ತ, ಅಂತರ್ಗತ ಮತ್ತು ಪರಸ್ಪರ ಕಾರ್ಯಸಾಧ್ಯವಾದ ಡಿಜಿಟಲ್ ಸಾರ್ವಜನಿಕ ಸರಕುಗಳನ್ನು ರಚಿಸಲು ನಾವು ತಂತ್ರಜ್ಞಾನವನ್ನು ಬಳಸಿದ್ದೇವೆ. ನಾಗರಿಕ ಕಲ್ಯಾಣಕ್ಕಾಗಿ ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತೇವೆ ಎಂದಿದ್ದಾರೆ.

ಪೂಜಾ ಸಿಂಘಾಲ್‌ಗೆ ಸೇರಿದ ರೂ. ೮೮.೭೭ ಕೋಟಿ ಆಸ್ತಿ ಜಪ್ತಿ

ರಾಂಚಿ, ಡಿ. ೧: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಅಮಾನತುಗೊಂಡ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರಿಗೆ ಸೇರಿದ ರಾಂಚಿಯಲ್ಲಿರುವ ೮೮.೭೭ ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಜಪ್ತಿ ಮಾಡಿದೆ. ಎಮ್‌ಜಿಎನ್‌ಆರ್‌ಇಜಿಎ ಹಣದ ದುರುಪಯೋಗ ಮತ್ತು ಇತರ ಆರೋಪಗಳಿಗೆ ಸಂಬAಧಿಸಿದAತೆ ಮೇ ೧೧ ರಂದು ಸುಮಾರು ೧೫ ಗಂಟೆಗಳ ಕಾಲ ವಿಚಾರಣೆಯ ನಂತರ ಮನಿ ಲಾಂಡರಿAಗ್ ಪ್ರಕರಣದಲ್ಲಿ ಪೂಜಾ ಸಿಂಘಾಲ್ ಅವರನ್ನು ಇಡಿ ಬಂಧಿಸಿತ್ತು. ೨೦೦೦ ಬ್ಯಾಚ್‌ನ ಐಎಎಸ್ ಅಧಿಕಾರಿ ಪೂಜಾಗೆ ಸೇರಿದ ರೂ. ೮೮.೭೭ ಕೋಟಿ ಮೌಲ್ಯದ ಸ್ಥಿರ ಆಸ್ತಿಗಳನ್ನು ಇಡಿ ಜಪ್ತಿ ಮಾಡಿದೆ. ಜಪ್ತಿ ಮಾಡಿದ ಆಸ್ತಿಗಳಲ್ಲಿ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಅಂದರೆ ಪಲ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಒಂದು ಡಯಾಗ್ನೋಸ್ಟಿಕ್ ಸೆಂಟರ್ ಅಂದರೆ ಪಲ್ಸ್ ಡಯಾಗ್ನೋಸ್ಟಿಕ್ ಮತ್ತು ಇಮ್ಯಾಜಿನಿಂಗ್ ಸೆಂಟರ್ ಹಾಗೂ ರಾಂಚಿಯಲ್ಲಿರುವ ಎರಡು ನಿವೇಶನಗಳು ಸೇರಿವೆ ಎಂದು ಪ್ರಕಟಣೆ ತಿಳಿಸಿದೆ. ೨೦೦೮ ಮತ್ತು ೨೦೧೧ ರ ನಡುವೆ ೧೮.೦೬ ಕೋಟಿ ರೂಪಾಯಿ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಕಿರಿಯ ಎಂಜಿನಿಯರ್ ರಾಮ್ ಬಿನೋದ್ ಪ್ರಸಾದ್ ಸಿನ್ಹಾ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳವು ೨೦೧೭ ರಲ್ಲಿ ದಾಖಲಿಸಿದ ಎಫ್‌ಐಆರ್ ಅನ್ನು ಆಧರಿಸಿ ಇಡಿ ಪೂಜಾ ಸಿಂಘಾಲ್ ವಿರುದ್ಧ ತನಿಖೆ ನಡೆಸುತ್ತಿದೆ. ತರುವಾಯ, ಇಡಿ ಸಿನ್ಹಾಗೆ ಸೇರಿದ ರೂ. ೪.೮ ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿತ್ತು ಮತ್ತು ೨೦೨೦ರಲ್ಲಿ ಅವರ ವಿರುದ್ಧ ಎರಡು ಚಾರ್ಜ್ಶೀಟ್‌ಗಳನ್ನು ಸಲ್ಲಿಸಿತು. ತನಿಖೆ ಸಮಯದಲ್ಲಿ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಹೆಸರು ಕೂಡ ಕೇಳಿಬಂದಿತ್ತು.

ಮುಸ್ಲಿA ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಪ್ರಾರಂಭಿಸುವ ಪ್ರಸ್ತಾಪ ಇಲ್ಲ

ಬೆಂಗಳೂರು, ಡಿ. ೧: ವಕ್ಫ್ ಮಂಡಳಿಯಿAದ ರಾಜ್ಯದಲ್ಲಿ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆಗೆ ಹಿಂದೂ ಸಂಘಟನೆಗಳಿAದ ತೀವ್ರ ವಿರೋಧ ಮತ್ತು ಸಮಾಜದ ವಿವಿಧ ವರ್ಗಗಳಿಂದ ವ್ಯತಿರಿಕ್ತ ಅಭಿಪ್ರಾಯ ವ್ಯಕ್ತವಾಗುತ್ತಿದ್ದಂತೆ ಸರ್ಕಾರ ನಿರ್ಧಾರದಿಂದ ಹಿಂದೆ ಸರಿಯುತ್ತದೆಯೇ ಎಂಬ ಅನುಮಾನ ದಟ್ಟವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಇಂದು ವಕ್ಫ್ ಮತ್ತು ಹಜ್ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ, ‘ಮುಸ್ಲಿಂ ಹೆಣ್ಣುಮಕ್ಕಳಿಗೆ ವಿಶೇಷ ಕಾಲೇಜು ತೆರೆಯುವ ಬಗ್ಗೆ ಯಾವುದೇ ಭರವಸೆ ಕೊಟ್ಟಿಲ್ಲ. ವಕ್ಫ್ ಮಂಡಳಿಯು ವಿವಿಧ ಸಂಘ-ಸAಸ್ಥೆಗಳ ಸಹಯೋಗದಲ್ಲಿ ಹಲವು ಶಿಕ್ಷಣ ಸಂಸ್ಥೆಗಳು ನಿರ್ವಹಿಸುತ್ತಿವೆ. ಆದರೆ ಮುಂದಿನ ದಿನಗಳಲ್ಲಿ ವಕ್ಫ್ ಮಂಡಳಿಯು ಒಂದು ನಿರ್ದಿಷ್ಟ ಸಮುದಾಯಕ್ಕಾಗಿ ಶಿಕ್ಷಣ ಸಂಸ್ಥೆ ಆರಂಭಿಸುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಕೇಂದ್ರ ಸಚಿವೆ ಸ್ಮೃತಿ ಇರಾನಿಯವರನ್ನು ವಕ್ಫ್ ಮಂಡಳಿ ಅಧ್ಯಕ್ಷರಿಗೆ ಭೇಟಿ ಮಾಡಲು ನಮ್ಮ ವೈಯಕ್ತಿಕ ಅಧಿಕಾರಿ ಸಹಾಯ ಮಾಡಿರಬಹುದು. ಅಲ್ಲಿ ಅವರು ಏನು ಚರ್ಚೆ ಮಾಡಿದ್ದಾರೆಯೋ ನನಗೆ ಗೊತ್ತಿಲ್ಲ. ಆದರೆ ಈ ಬಗ್ಗೆ ಸಿಎಂ ಅವರ ಜೊತೆ ನಾನು ಚರ್ಚೆ ನಡೆಸಿಲ್ಲ ಎಂದರು. ಈ ಬಗ್ಗೆ ಪ್ರತಿಕ್ರಿಯಿಸಿದ ವಕ್ಫ್ ಮಂಡಳಿ ಅಧ್ಯಕ್ಷ ಶಾ ಸಅದಿ, ನನ್ನ ಪೂರ್ಣ ಹೇಳಿಕೆಯನ್ನು ಮಾಧ್ಯಮಗಳು ಪ್ರಸಾರ ಮಾಡಿಲ್ಲ. ಕೇವಲ ಮುಸ್ಲಿಂ ಮಹಿಳೆಯರಿಗೆ ಮಾತ್ರವೇ ಕಾಲೇಜು ಆರಂಭಿಸುತ್ತೇವೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ಮಾಧ್ಯಮಗಳು ತಿರುಚುತ್ತಿವೆ. ವಕ್ಫ್ ಮಂಡಳಿಯಿAದ ಈಗಾಗಲೇ ೧೧೨ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಪ್ರಸ್ತಾಪಿತ ಕಾಲೇಜುಗಳು ಸಹ ಇದೇ ಮಾದರಿಯಲ್ಲಿ ಕೆಲಸ ಮಾಡುತ್ತವೆ. ಪ್ರಸ್ತಾಪಿತ ಕಾಲೇಜುಗಳಿಗೂ ಹಿಜಾಬ್, ಧರ್ಮದಂಗಲ್ ವಿವಾದಕ್ಕೂ ಯಾವುದೇ ಸಂಬAಧವಿಲ್ಲ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರೊಂದಿಗೂ ನಾನು ಚರ್ಚಿಸಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಬಚಾವೋ, ಭೇಟಿ ಪಡಾವೋ ಯೋಜನೆಯ ಆಶಯಕ್ಕೆ ತಕ್ಕಂತೆ ಈ ಯೋಜನೆಗಳಿವೆ ಎಂದು ಹೇಳಿದರು.