ವೀರಾಜಪೇಟೆ, ಡಿ. ೨: ನಗರದ ಪ್ರಮುಖ ರಸ್ತೆಯ ಗುಂಡಿ ಮುಚ್ಚುವ ಕಾಮಗಾರಿ ಕಳಪೆಯಾಗುತ್ತಿದೆ ಎಂದು ಸಾರ್ವಜನಿಕರು ಪ್ರತಿಭಟಿಸಿದ ಕಾರಣ ರಸ್ತೆ ಕಾಮಗಾರಿ ವಹಿಸಿದ್ದ ಗುತ್ತಿಗೆದಾರರು ಅರ್ಧಕ್ಕೆ ಕೆಲಸ ಸ್ಥಗಿತಗೊಳಿಸಿ ಹಿಂದಿರುಗಿದ ಘಟನೆ ವೀರಾಜಪೇಟೆ ನಗರದ ಹೃದಯಭಾಗದಲ್ಲಿ ನಡೆಯಿತು.
ವೀರಾಜಪೇಟೆ ನಗರದ ಸರ್ವ ಪ್ರಮುಖ ರಸ್ತೆಗಳು, ಸಂಪರ್ಕ ರಸ್ತೆಗಳು, ರಾಜ್ಯ ಹೆದ್ದಾರಿ ಸೇರಿದಂತೆ ಹಲವು ರಸ್ತೆಗಳು ಬೃಹತ್ ಗಾತ್ರದ ಗುಂಡಿಗಳಾಗಿ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಈ ಹಿನೆÀ್ನಲೆಯಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚುವ ಕಾಮಗಾರಿಗಳು, ಅಂದರೆ ವೀರಾಜಪೇಟೆ ನಗರದ ಡೆಂಟಲ್ ಕಾಲೇಜು ಸನಿಹದ ಸಿದ್ದಾಪುರ ರಸ್ತೆ ಸುಂಕದಕಟ್ಟೆಯಿAದ ಮಲಬಾರ್ ರಸ್ತೆ, ಮೀನುಪೇಟೆಯವರೆಗಿನ ಪ್ರಮುಖ ರಸ್ತೆಗಳ ಗುಂಡಿಗಳನ್ನು ಮುಚ್ಚುವ ಕಾಮಗಾರಿ ಸ್ಥಳಕ್ಕೆ ಇಲಾಖೆಯ ಅಧಿಕಾರಿಗಳು ಆಗಮಿಸುವಂತೆ ಪಟ್ಟು ಹಿಡಿದರು. ಇದರಿಂದ ಅಲ್ಪ ಸಮಯ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಸ್ಥಳಕ್ಕೆ ಆರಕ್ಷಕ ಇಲಾಖೆಯ ಅಧಿಕಾರಿಗಳು ಆಗಮಿಸಿ ಪ್ರತಿಭಟಿಸುತ್ತಿದ್ದ ಸಾರ್ವಜನಿಕರನ್ನು ಶಾಂತವಾಗಿಸಿದರು.
ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಗಾತ್ರದ ಹೊಂಡಗಳಾಗಿ ಸಂಚಾರಕ್ಕೆ ಅಡಚÀಣೆ ಉಂಟಾಗಿದೆ. ಇಂದು ಗುಂಡಿಗಳನ್ನು ಮುಚ್ಚುವ ಕಾಮಗಾರಿ ನಡೆಯುತಿತ್ತು. ಗುಂಡಿಗಳನ್ನು ಮುಚ್ಚುವಲ್ಲಿ ಯಾವುದೇ ಗುಣಮಟ್ಟದ ಸಾಮಾಗ್ರಿಗಳನ್ನು ಬಳಸದೇ, ಮನಬಂದAತೆ ಕೆಲಸ ಮಾಡುತ್ತಿದ್ದುದರಿಂದ ಪ್ರತಿಭಟನೆ ಮಾಡಿದ್ದೇವೆ ಎಂದು ಕಾವೇರಿ ಗಣೇಶೋತ್ಸವ ಸಮಿತಿಯ ನಂಬುಡುಮಾಡ ರಾಜಪ್ಪ ಪ್ರತಿಕ್ರಿಯಿಸಿದರು.
ರಸ್ತೆ ಕಾಮಗಾರಿಯು ಕಳಪೆ ಕಾಮಗಾರಿ ಎಂದು ಸಾರ್ವಜನಿಕರು ಪ್ರತಿಭಟಿಸಿದರು. ಈ ವೇಳೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಲಾಗಿದೆ. ಬೃಹತ್ ಗಾತ್ರದ ಗುಂಡಿಗಳಲ್ಲಿ ಸಿಮೆಂಟ್ ಮಿಶ್ರಿತ ಜಲ್ಲಿ ಕಲ್ಲುಗಳನ್ನು ಅಳವಡಿಸಲು ಮತ್ತು ಸಣ್ಣ ಗಾತ್ರದ ಗುಂಡಿಗಳಲ್ಲಿ ಡಾಂಬರು ಮಿಶ್ರಿತ ಜಲ್ಲಿ ಕಲ್ಲುಗಳನ್ನು ತುಂಬಿ ಗುಂಡಿಗಳನ್ನು ಮುಚ್ಚುವಂತೆ ಸೂಚಿಸಲಾಗಿದ್ದು, ಗುತ್ತಿಗೆದಾರರು ಅದರಂತೆ ಕಾಮಗಾರಿಯನ್ನು ಕೈಗೊಂಡಿದ್ದಾರೆ. ಎಲ್ಲಿಯೂ ಕಳಪೆ ಕಾಮಗಾರಿ ನಡೆಯದಂತೆ ಎಚ್ಚರ ವಹಿಸುತ್ತೇನೆ ಎಂದು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಸಿದ್ದೇಗೌಡ ಹೇಳಿದರು.
ಈ ವೇಳೆಯಲ್ಲಿ ನಡೆಯುತ್ತಿದ್ದ ರಸ್ತೆ ಕಾಮಗಾರಿಗಳನ್ನು ಅರ್ಧಕ್ಕೆ ಸ್ಥಗಿತಗೊಳಿಸಿ ಕಾರ್ಮಿಕರು ಹಿಂದಿರುಗಿದರು.
-ಕಿಶೋರ್ ಕುಮಾರ್ ಶೆಟ್ಟಿ