ವೀರಾಜಪೇಟೆ, ಡಿ. ೧: ಡಿಸೆಂಬರ್ ತಿಂಗಳಿನಲ್ಲಿ ವೀರಾಜಪೇಟೆಯ ಆರ್ಜಿ-ಬೇಟೋಳಿ ಗ್ರಾಮದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಸಮ್ಮೇಳನದ ಸ್ವಾಗತ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಕೆ.ಜಿ. ಬೋಪಯ್ಯ ಅವರನ್ನು ಆಯ್ಕೆ ಮಾಡಲಾಯಿತು.

ಸಮ್ಮೇಳನದ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಸಂಘ-ಸAಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಕನ್ನಡ ಸಾಹಿತ್ಯ ಪರಿಷÀತ್ ತಾಲೂಕು ಅಧ್ಯಕ್ಷ ರಾಜೇಶ್ ಪದ್ಮನಾಭ ಅಧ್ಯಕ್ಷತೆ ವಹಿಸಿದ್ದರು.

ತಾಲೂಕು ತಹಶೀಲ್ದಾರ್ ಡಿ. ಅರ್ಚನಾ ಭಟ್, ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಅಪ್ಪಣ್ಣ, ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ತಾಲೂಕು ಅಧ್ಯಕ್ಷ ಮಧೋಶ್ ಪೂವಯ್ಯ, ತಾಲೂಕು ಕಾರ್ಯದರ್ಶಿ ಟೋಮಿ ಹಾಗೂ. ಹೆಚ್.ಜಿ. ಸಾವಿತ್ರಿ ವೇದಿಕೆಯಲ್ಲಿ ಇದ್ದರು.