ಸಿದ್ದಾಪುರ, ಡಿ. ೨: ಪಕ್ಷದಲ್ಲಿ ಭಿನ್ನಾಭಿಪ್ರಾಯ ಬಿಟ್ಟು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ರಾಜ್ಯ ಕಾಂಗ್ರೆಸ್ ಪಕ್ಷದ ಕಾನೂನು ಘಟಕದ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಕರೆ ನೀಡಿದರು. ಹಾಲುಗುಂದ ಗ್ರಾ.ಪಂ. ವ್ಯಾಪ್ತಿಯ ಕೊಂಡAಗೇರಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕಾರ್ಯಕರ್ತರು ತಮ್ಮ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬಿಟ್ಟು ಪಕ್ಷ ಸಂಘಟನೆ ಮಾಡಬೇಕೆಂದು ಕರೆ ನೀಡಿದರು.
ರಾಜ್ಯ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಪಿ.ಸಿ. ಹಸೈನಾರ್ ಹಾಜಿ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಕಳೆದ ಸುಮಾರು ವರ್ಷಗಳಿಂದ ಆಡಳಿತ ನಡೆಸುತ್ತಿದ್ದರೂ ಕೂಡ ಅಭಿವೃದ್ಧಿಯ ಬಗ್ಗೆ ಆಸಕ್ತಿ ವಹಿಸುತ್ತಿಲ್ಲ ಎಂದು ದೂರಿದರು. ಜಿಲ್ಲೆಯ ಗ್ರಾಮಾಂತರ ಪ್ರದೇಶಗಳ ರಸ್ತೆಯು ಸೇರಿದಂತೆ ಬಹುತೇಕ ರಸ್ತೆಗಳು ತೀವ್ರವಾಗಿ ಹದಗೆಟ್ಟಿದ್ದು, ಸಂಚರಿಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬಗ್ಗೆ ಸರ್ಕಾರವು ನಿರ್ಲಕ್ಷö್ಯ ವಹಿಸುತ್ತಿರುವುದು ಖಂಡನೀಯ ಎಂದರು. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆರೋಪಿಸಿದರು.
ಸಭೆಯಲ್ಲಿ ಮಾಜಿ ಸಚಿವರಾದ ಬಿ.ಎ. ಜೀವಿಜಯ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕಾಂಗ್ರೆಸ್ ಮುಖಂಡರುಗಳಾದ ಕೆ.ಪಿ. ಚಂದ್ರಕಲಾ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಿತಿನ್ ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಗ್ರಾ.ಪಂ. ಸದಸ್ಯ ಅಂದಾಯಿ ಅಬ್ದುಲ್ ರೆಹಮಾನ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಜರಿದ್ದರು.