ಮಡಿಕೇರಿ, ಡಿ. ೧: ಜಿಲ್ಲಾ ಜೆಡಿಎಸ್ ವತಿಯಿಂದ ಜನವರಿ ತಿಂಗಳಿನಲ್ಲಿ ಮಡಿಕೇರಿಯಲ್ಲಿ ಅಲ್ಪಸಂಖ್ಯಾತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಿದ್ದು, ಇದರ ಭಾಗವಾಗಿ ತಾ. ೬ ರಂದು ಮಡಿಕೇರಿಯ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ ಎಂದು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸಾಖ್ ಖಾನ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತ ರುಗಳನ್ನು ಒಂದುಗೂಡಿಸಲು ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಯಿA, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಇನ್ನಿತರ ಗಣ್ಯರನ್ನು ಆಹ್ವಾನಿಸಲಾಗುತ್ತದೆ. ಸುಮಾರು ೨೫ ಸಾವಿರ ಜನ ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ವೀರಾಜಪೇಟೆ ಕ್ಷೇತ್ರಕ್ಕೆ ಮತ್ತೋರ್ವ ಆಕಾಂಕ್ಷಿ

ವೀರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಬಯಸಿ ಈಗಾಗಲೇ ಮನ್ಸೂರ್ ಅಲಿ ಅರ್ಜಿ ಸಲ್ಲಿಸಿದ್ದು, ಇದೀಗ ಕೊಂಡAಗೇರಿಯ ಯೂಸಾಫ್ ಹಾಜಿ ಅವರು ಕೂಡ ಅರ್ಜಿಯನ್ನು ಸಲ್ಲಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಇಸಾಖ್, ಕೊಡಗಿನ ೨ ಕ್ಷೇತ್ರಗಳಲ್ಲಿ ಯಾವುದಾದರು ಒಂದು ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಯ ಸ್ಪರ್ಧೆಗೆ ಅವಕಾಶ ನೀಡಬೇಕು. ಮಡಿಕೇರಿ ಕ್ಷೇತ್ರದಿಂದ ತಾನು ಅರ್ಜಿ ಸಲ್ಲಿಸಿದ್ದೇನೆ. ಯಾವುದಾದರು ಒಂದು ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿದರು ಮತ್ತೋರ್ವ ಅಭ್ಯರ್ಥಿ ಕಣದಿಂದ ಹಿಂದೆ ಸರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಆಕಾಂಕ್ಷಿ ಯೂಸಫ್ ಮಾತನಾಡಿ, ಹಲವು ವರ್ಷದಿಂದ ಪಕ್ಷಕ್ಕಾಗಿ ದುಡಿದಿದ್ದೇನೆ. ಟಿಕೆಟ್‌ಗಾಗಿ ಅರ್ಜಿ ನೀಡಿದ್ದೇನೆ. ಇದನ್ನು ಪರಿಗಣಿಸುವ ವಿಶ್ವಾಸ ಇದೆ ಎಂದರು.

ಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮನ್ಸೂರ್ ಅಲಿ, ಕುಶಾಲನಗರ ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಬೀರ್, ಜಿಲ್ಲಾ ಯುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಜಾಶೀರ್, ಸುಂಟಿಕೊಪ್ಪ ಗ್ರಾ.ಪಂ. ಸದಸ್ಯ ಜಿನಾಸುದ್ದೀನ್ ಇದ್ದರು.