ಶ್ರೀಮAಗಲ, ಡಿ. ೧: ಪೊನ್ನಂಪೇಟೆ ತಾಲೂಕು ಶ್ರೀಮಂಗಲ ಹೋಬಳಿಯ ಟಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಸಂಬAಧಿಸಿದAತೆ ಪೌತಿ ಖಾತೆ ಆಂದೋಲನವನ್ನು ಶ್ರೀಮಂಗಲ ಹೋಬಳಿ ಉಪ ತಹಶೀಲ್ದಾರ್ ಎ.ಕೆ ಅಕ್ಕಮ್ಮ ಅಧ್ಯಕ್ಷತೆಯಲ್ಲಿ ಟಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಸಲಾಯಿತು.

ಈ ಸಂದರ್ಭ ಶ್ರೀಮಂಗಲ ಹೋಬಳಿಯ ರಾಜಸ್ವ ನಿರೀಕ್ಷಕ ಡಿ. ಶಿವಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸರಿತಾ ತಮ್ಮಯ್ಯ, ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಹಾಜರಿದ್ದರು.