ಮಡಿಕೇರಿ, ಡಿ. ೧: ಕೊಡಗು ಜಿಲ್ಲಾಡಳಿತ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಡಿಸೆಂಬರ್, ಎರಡು ಮತ್ತು ಮೂರನೇ ವಾರದಲ್ಲಿ ಉದ್ಯೋಗ ಮೇಳ ಆಯೋಜಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೌಶಲ್ಯ ಅಭಿವೃದ್ಧಿ ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ಉದ್ಯೋಗ ಮೇಳ ಆಯೋಜಿಸುವ ಸಂಬAಧ ಪೂರ್ವಭಾವಿ ಸಭೆ ನಡೆಯಿತು.
ತಾ. ೧೩ ರಂದು ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ತಾ. ೧೬ ರಂದು ಮಡಿಕೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ತಾ. ೨೦ ರಂದು ಗೋಣಿಕೊಪ್ಪ ಕಾವೇರಿ ಕಾಲೇಜಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಉದ್ಯೋಗ ಮೇಳ ಆಯೋಜಿಸಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಕಾಲೇಜಿನ ಪ್ರಾಂಶುಪಾಲರ ಜೊತೆ ಸಮನ್ವಯ ಸಾಧಿಸಿ ಉದ್ಯೋಗ ಮೇಳ ಯಶಸ್ವಿಗೆ ಶ್ರಮಿಸುವಂತೆ ನಿರ್ದೇಶನ ನೀಡಿದರು. ಉದ್ಯೋಗ ಮೇಳ ಸಂದರ್ಭದಲ್ಲಿ ಅಭಾ ಕಾರ್ಡ್ ನೋಂದಣಿಗೆ ಕ್ರಮವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಜಿ.ಪಂ. ಸಿಇಓ ಡಾ. ಎಸ್. ಆಕಾಶ್ ಅವರು ಮಾತನಾಡಿ, ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳ ನೋಂದಣಿಗೆ ಕ್ರಮವಹಿಸುವುದು, ಉದ್ಯೋಗ ಮೇಳದಲ್ಲಿ ಭಾಗವಹಿಸುವ ಉದ್ಯೋಗದಾತರ ನಿಖರ ಮಾಹಿತಿಯನ್ನು ಒದಗಿಸುವಂತೆ ಅವರು ತಿಳಿಸಿದರು. ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಜೀವನೋಪಾಯ ಇಲಾಖೆಯ ಅಧಿಕಾರಿ ಉಮಾ ಅವರು ಮಾತನಾಡಿ, ತಿತಿತಿ.ಞoushಚಿಟಞಚಿಡಿ.ಛಿom ವೆಬ್ಪೋರ್ಟಲ್ನಲ್ಲಿ ೮,೭೫೩ ಅಭ್ಯರ್ಥಿಗಳು ನೋಂದಣಿಯಾಗಿದ್ದಾರೆ. ಪದವಿ, ಸ್ನಾತಕೋತ್ತರ ಪದವಿ, ಪಿಯುಸಿ, ಡಿಪ್ಲೋಮಾ, ಐಟಿಐ, ಎಸ್ಎಸ್ಎಲ್ಸಿ ಓದಿದವರು ಹೆಸರು ನೋಂದಾಯಿಸಿದ್ದಾರೆ ಎಂದು ಮಾಹಿತಿ ನೀಡಿದರು. ಪ್ರಧಾನಮಂತ್ರಿ ಕೌಶಲ್ಯ ವಿಕಾಸ್ ಯೋಜನೆಯಡಿ ೧,೫೦೪ ಮಂದಿ ತರಬೇತಿ ಪಡೆದಿದ್ದಾರೆ. ಇವರಲ್ಲಿ ೫೮೮ ಮಂದಿ ವಿವಿಧ ಸಂಸ್ಥೆಗಳಲ್ಲಿ ಉದ್ಯೋಗ ಪಡೆದಿದ್ದಾರೆ. ಹಾಗೆಯೇ ಮುಖ್ಯಮಂತ್ರಿ ಅವರ ಕೌಶಲ್ಯ ಕರ್ನಾಟಕ ಯೋಜನೆಯಡಿ ೨೩೩ ಮಂದಿ ತರಬೇತಿ ಪಡೆದು ೮೩ ಮಂದಿ ಉದ್ಯೋಗ ಪಡೆದಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳ ನೋಂದಣಿ ಸಂಬAಧ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ವತಿಯಿಂದ ಆಯೋಜಿಸಲಾದ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆ ಹಾಗೂ ಮುಖ್ಯಮಂತ್ರಿ ಅವರ ಕೌಶಲ್ಯ ಕರ್ನಾಟಕ ಯೋಜನೆಯಡಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ತಿತಿತಿ.ಞoushಚಿಟಞಚಿಡಿ.ಛಿom ವೆಬ್ ಪೋರ್ಟಲ್ನಲ್ಲಿ ನೋಂದಣಿಯಾಗಿರುವ ಅಭ್ಯರ್ಥಿಗಳಿಗೆ ಹಾಗೂ ತಿತಿತಿ.ಟಿಛಿs.gov.iಟಿ ನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ನೋಂದಾಯಿಸಿರುವ ಉದ್ಯೋಗ ಆಕಾಂಕ್ಷಿಗಳಿಗೆ ಬಲ್ಕ್ ಎಸ್ಎಂಎಸ್ ಮುಖಾಂತರ ಉದ್ಯೋಗ ಮೇಳದಲ್ಲಿ ಭಾಗವಹಿಸಲು ತಿಳಿಸಲಾಗುವುದು ಎಂದರು.
ಹಾಗೆಯೇ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ನೋಂದಣಿಗಾಗಿ ಗೂಗಲ್ ವೆಬ್ಲಿಂಕ್ hಣಣಠಿ://ಜಿoಡಿms/gಟe/ಇಡಿಛಿWUಟಿಉಥಿಠಿs೪Svಎಖಡಿ೭/ನಲ್ಲಿ ನೋಂದಾಯಿಸಬಹುದಾಗಿದೆ ಎಂದರು.
ಉದ್ಯೋಗ ಮೇಳದಲ್ಲಿ ಎಲ್ ಅಂಡ್ ಟಿ, ಥಿಯೋರಾಮ್ ಕಂಪನಿ, ಕಾಫಿ ಕ್ಯೂರಿಂಗ್, ಮಾಂಡೋವಿ ಮೋಟರ್ಸ್, ಸಾಯಿ ಗಾರ್ಮೆಂಟ್ಸ್, ಪ್ಯಾಲೇಸ್ ಟೊಯೋಟಾ, ಟ್ರಿಟೆಂಟ್ ಅಟೋ ಮೊಬೈಲ್, ಭಾರತ ಸುಜುಕಿ, ಟಾಟಾ ಸ್ಟೆçöÊಲಿ, ಪ್ರೇರಣಾ ಮೋಟರ್ಸ್, ಓರಿಯಂಟ್ ಬೆಲ್, ಮತ್ತಿತರ ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ ಎಂದು ಅವರು ತಿಳಿಸಿದರು.
ಕೌಶಲ್ಯ ಅಭಿವೃದ್ಧಿ, ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಹಾಯಕ ನಿರ್ದೇಶಕಿ ರೇಖಾ ಗಣಪತಿ, ಸಹಾಯಕ ಸಾಂಖ್ಯಿಕ ಅಧಿಕಾರಿ ಡಾ. ಹೆಚ್.ಜೆ. ರೂಪ, ಜಿಲ್ಲಾ ಸಂಯೋಜಕ ಎನ್.ಆರ್. ರವಿಕುಮಾರ್, ಡಿವೈಎಸ್ಪಿ ಗಜೇಂದ್ರ ಪ್ರಸಾದ್, ಜಿ.ಪಂ. ಯೋಜನಾ ನಿರ್ದೇಶಕ ಜಗದೀಶ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಶಿವಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಶಬಾನಾ ಎಂ. ಶೇಖ್, ಜಿ.ಪಂ. ಇಂಜಿನಿಯರ್ ಶ್ರೀಕಂಠಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಐಟಿಡಿಪಿ ಇಲಾಖೆ ಅಧಿಕಾರಿ ಹೊನ್ನೇಗೌಡ, ಸಾಂಖ್ಯಿಕ ಅಧಿಕಾರಿ ನಾರಾಯಣ, ಇತರರು ಇದ್ದರು.