ಮಡಿಕೇರಿ, ಡಿ. ೨: ಕುಶಾಲನಗರದ ಮುತ್ತಿನಹಾರ ವಾದ್ಯಗೋಷ್ಠಿ ಕಲಾವಿದರ ಸಂಘದ ವಾರ್ಷಿಕೋತ್ಸವ ತಾ. ೪ರಂದು ಸಂಜೆ ೫ ಗಂಟೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ, ಮಡಿಕೇರಿ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಕಲಾವಿದ ರವಿ ಸಂತೋಷ್ ಕಾರ್ಯಕ್ರಮ ಉದ್ಘಾಟಿಸುವರು.
ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಕೇಶವ ಕಾಮತ್, ಜಾನಪದ ಪರಿಷತ್ ಮಡಿಕೇರಿ ತಾಲೂಕು ಅಧ್ಯಕ್ಷ ಅನಿಲ್ ಎಚ್.ಟಿ., ಗ್ರೀನ್ ಸಿಟಿ ಫೋರಂ ಅಧ್ಯಕ್ಷ ಚೆಯ್ಯಂಡ ಸತ್ಯ ಗಣಪತಿ, ಹೆಚ್.ಪಿ.ಕೆ.ಆರ್. & ಕೆ. ಪ್ರೆಸ್ಕ್ಲಬ್ ಅಧ್ಯಕ್ಷ ಚೇತನ್ರಾಜ್ ಭಾಗವಹಿಸುವರು. ಇದೇ ಸಂದರ್ಭ ಸಾಧಕರಿಗೆ ಸನ್ಮಾನ ಹಾಗೂ ಸಂಗೀತ ರಸಮಂಜರಿ ನಡೆಯಲಿದೆ.