ಕೂಡಿಗೆ, ಡಿ. ೧: ಕುಶಾಲನಗರ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನಲ್ಲಿ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವತಿಯಿಂದ ೨೦೨೨-೨೩ನೇ ಸಾಲಿನ ವಿಟಿಯು ಅಂತರ ಕಾಲೇಜುಗಳ ವಲಯಮಟ್ಟದ ಬಾಲಕಿಯರ ಕಬಡ್ಡಿ ಟೂರ್ನಿಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು. ಇಂಜಿನಿಯರಿAಗ್ ಕಾಲೇಜಿನ ಮೂಲ ಸೌಕರ್ಯ ಅಭಿವೃದ್ಧಿಗೆ ಸರ್ಕಾರದ ವತಿಯಿಂದ ಹೆಚ್ಚಿನ ಗಮನ ಹರಿಸಲಾಗಿದೆ ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಸೀನಪ್ಪ ಮಾತನಾಡಿ, ಇಂತಹ ಟೂರ್ನಿಗಳು ವಿದ್ಯಾರ್ಥಿಗಳಲ್ಲಿ ಪರಸ್ಪರ ಪ್ರೀತಿ, ಸ್ನೇಹಪರತೆ ಬೆಳೆಸಲು ಸಹಕಾರಿಯಾಗಿದೆ ಎಂದರು. ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಪ್ರಸಾದ್ ಸಾಲ್ಯಾನ್ ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಬಿ. ಜೈವರ್ಧನ್, ಜಿಲ್ಲಾ ಯುವಜನ ಸೇವೆ, ಕ್ರೀಡೆ ಮತ್ತು ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ. ವಿಸ್ಮಯಿ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ, ನಿವೃತ್ತ ಪ್ರಾಂಶುಪಾಲ ಹೆಚ್.ವಿ. ಶಿವಪ್ಪ ಮತ್ತು ಇನ್ನಿತರರು ಹಾಜರಿದ್ದರು.