ಚೆಯ್ಯಂಡಾಣೆ: ಕಕ್ಕಬೆಯ ಸಮಾಜ ಕಲ್ಯಾಣ ಇಲಾಖೆಯ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು.
ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ ಮುಖ್ಯ ಶಿಕ್ಷಕಿ ಸುಮಯ್ಯ ಕೆ.ಎಂ. ಸಂವಿಧಾನ ಪೀಠಿಕೆಯನ್ನು ಓದಿ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಸಹ ಶಿಕ್ಷಕರಾದ ಕವಿತ, ಅಶ್ವಿನಿ ಹಾಗೂ ಸಿಬ್ಬಂದಿಗಳಾದ ವಿನುತ, ವಂದನ ಹಾಜರಿದ್ದರು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಘೋಷಣಾ ವಾಕ್ಯ, ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು.ನರಿಯಂದಡ: ಸ್ಥಳೀಯ ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು.
ಶಿಕ್ಷಕಿ ಬಿ.ಪಿ. ಸುನಿತಾ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭ ಮುಖ್ಯ ಶಿಕ್ಷಕರಾದ ಮನೋಹರ್ ನಾಯ್ಕ್, ಶಿಕ್ಷಕ ವೃಂದದವರು, ಸಿಬ್ಬಂದಿಗಳು ಹಾಜರಿದ್ದರು.ಸೋಮವಾರಪೇಟೆ: ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಜಿಲ್ಲಾ ಘಟಕದ ವತಿಯಿಂದ ಪಟ್ಟಣದಲ್ಲಿ ರುವ ಬಾಬಾ ಸಾಹೇಬ್ ಡಾ. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಸಮಿತಿ ಅಧ್ಯಕ್ಷ ಜೆ.ಆರ್. ಪಾಲಾಕ್ಷ, ಸಮಿತಿಯ ಉಪಾಧ್ಯಕ್ಷ ಜೆ.ಎಲ್. ಜನಾರ್ಧನ್, ಕಾರ್ಯದರ್ಶಿ ಎಂ.ಎಸ್. ವಿರೇಂದ್ರ ಪದಾಧಿಕಾರಿಗಳಾದ ಡಿ.ಕೆ. ವೀರಭದ್ರ, ಕೆ.ಎನ್. ಇಂದ್ರೇಶ್, ಎಂ.ಪಿ. ಹೊನ್ನಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.