ಕನ್ನಡ ಬಾವುಟ ಹಾರಿಸಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ : ನಾಲ್ವರ ಬಂಧನ

ಬೆಳಗಾವಿ, ಡಿ. ೨: ಕನ್ನಡ ಬಾವುಟ ಹಾರಿಸಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಬೆಳಗಾವಿ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಕರ್ನಾಟಕ-ಮಹಾರಾಷ್ಟç ಗಡಿ ವಿವಾದ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ಇದರ ಮಧ್ಯೆ ಕನ್ನಡ ಬಾವುಟ ಹಾರಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಸಹಪಾಠಿಗಳಿಂದ ಹಲ್ಲೆ ನಡೆದಿರುವ ಘಟನೆ ಬೆಳಗಾವಿಯ ಕಾಲೇಜೊಂದರಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬAಧಿಸಿದAತೆ ನಾಲ್ವರು ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸುಮೀತ್ ಕಾಂಬ್ಳೆ ಸೇರಿ ನಾಲ್ವರನ್ನು ಬಂಧನ ಮಾಡಲಾಗಿದೆ. ಬಂಧಿತರ ಪೈಕಿ ಮೂರು ಜನ ವಿದ್ಯಾರ್ಥಿಗಳು ಅಪ್ರಾಪ್ತರಾಗಿದ್ದು, ಓರ್ವ ಪ್ರಾಪ್ತ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ನಾನು ದೂರು ಕೊಡಲು ಸಿದ್ಧವಿದ್ದೆ. ಠಾಣೆಗೆ ಕರೆದುಕೊಂಡು ಹೋಗಿ ಹೆದರಿಸಿ ಡಿಸಿಪಿ ರವೀಂದ್ರ ಗಡಾದಿ ಮತ್ತು ಎಸಿಪಿ ನಾರಾಯಣ್ ಭರಮನಿ ನನ್ನ ಮೇಲೆ ಹಲ್ಲೆ ಮಾಡಿದರು. ಡಿಸಿಪಿ ನನ್ನ ವಿರುದ್ಧ ಅವಾಚ್ಯ ಶಬ್ದ ಬಳಸಿ ಬೈದು ಬೂಟಗಾಲಿಂದ ಒದ್ದರು. ಅಶ್ಲೀಲ ಪದ ಬಳಸಿದ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಆಗಬೇಕು ಎಂದು ಹೇಳಿಕೆ ನೀಡಿದ್ದಾನೆ.

ಛತ್ತೀಸ್‌ಗಢ: ಗಣಿಯಲ್ಲಿ ಮಣ್ಣು ಕುಸಿದು ೭ ಮಂದಿ ಸಾವು

ಬಸ್ತಾರ್, ಡಿ. ೨: ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯ ಮಲ್ಗಾಂವ್ ಪ್ರದೇಶದಲ್ಲಿ ಸುಣ್ಣದ ಕಲ್ಲಿನ ಗಣಿಯಲ್ಲಿ ಮಣ್ಣು ಕುಸಿದು ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಲ್ಲಿ ಆರು ಮಹಿಳೆಯರು ಸೇರಿದ್ದಾರೆ ಎಂದು ಹೇಳಿದ್ದಾರೆ. ಜಿಲ್ಲೆಯ ಪ್ರಧಾನ ಕಚೇರಿ ಜಗದಲ್‌ಪುರದಿಂದ ಸುಮಾರು ೧೨ ಕಿ.ಮೀ. ದೂರದಲ್ಲಿರುವ ನಗರನಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಮಾಲ್ಗಾಂವ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಣಿಯಲ್ಲಿ ಮಣ್ಣನ್ನು ಅಗೆಯುತ್ತಿದ್ದಾಗ ಅದರ ಒಂದು ಭಾಗ ಕುಸಿದು ಬಿದ್ದಿದೆ, ಇದರಿಂದಾಗಿ ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡರು ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಐವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ರೂ. ೧೦ ಕೋಟಿ ವೆಚ್ಚದಲ್ಲಿ ಕನ್ನಡ ಭವನಗಳ ನಿರ್ಮಾಣ

ರಾಮದುರ್ಗ, ಡಿ. ೨: ಗೋವಾ, ಕಾಸರಗೋಡು ಹಾಗೂ ಸೊಲ್ಲಾಪುರದಲ್ಲಿ ತಲಾ ರೂ. ೧೦ ಕೋಟಿ ವೆಚ್ಚದ ಕನ್ನಡ ಭವನಗಳ ನಿರ್ಮಾಣಕ್ಕೆ ಈಗಾಗಲೇ ಮಂಜೂರಾತಿ ನೀಡಲಾಗಿದೆ. ಇದಲ್ಲದೆ ಕರ್ನಾಟಕದ ಹೊರಗಿನ ಪುಣ್ಯಕ್ಷೇತ್ರಗಳಿಗೆ ಯಾತ್ರೆ ಕೈಗೊಳ್ಳುವ ಕನ್ನಡಿಗ ಭಕ್ತಾದಿಗಳಿಗೆ ಅಲ್ಲಿ ವಸತಿಗಾಗಿ ಯಾತ್ರಾ ನಿವಾಸಗಳ ನಿರ್ಮಾಣಕ್ಕೆ ಕೂಡಾ ಮಂಜೂರಾತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿಯ ರಾಮದುರ್ಗದಲ್ಲಿಂದು ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಅನಾವರಣ ಸೇರಿದಂತೆ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಮಲಪ್ರಭಾ ನದಿಯ ಪ್ರವಾಹದಿಂದ ಪದೇ ಪದೇ ಹಾನಿಗೊಳಗಾಗುತ್ತಿದ್ದ ರಾಮದುರ್ಗ ತಾಲೂಕಿನ ಹಳ್ಳಿಗಳ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಈಗ ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿದೆ. ರಾಮದುರ್ಗ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು. ಇತರ ರಾಜ್ಯಗಳೊಂದಿಗೆ ಗಡಿಯನ್ನು ಹಂಚಿಕೊAಡಿರುವ ರಾಜ್ಯದ ಪ್ರದೇಶಗಳ ೧,೮೦೦ ಗ್ರಾಮ ಪಂಚಾ ಯಿತಿಗಳ ಸಮಗ್ರ ಅಭಿವೃದ್ಧಿಗೆ ಈಗಾಗಲೇ ಯೋಜನೆ ರೂಪುಗೊಂಡಿದ್ದು, ಶೀಘ್ರದಲ್ಲಿಯೇ ಅನುಷ್ಠಾನಗೊಳ್ಳಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಅಕ್ರಮ ಹಣ ವರ್ಗಾವಣೆ ಪ್ರಕರಣ : ಉಪ ಕಾರ್ಯದರ್ಶಿ ಬಂಧನ

ರಾಯ್‌ಪುರ, ಡಿ. ೨: ಕಲ್ಲಿದ್ದಲು ಲೆವಿ ಹಗರಣಕ್ಕೆ ಸಂಬAಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬAಧಿಸಿದAತೆ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಕಚೇರಿಯ ಉಪ ಕಾರ್ಯದರ್ಶಿ ಸೌಮ್ಯಾ ಚೌರಾಸಿಯಾ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ರಾಜ್ಯದ ಪ್ರಬಲ ಅಧಿಕಾರಿ ಎಂದು ಪರಿಗಣಿಸಲ್ಪಟ್ಟ ಚೌರಾಸಿಯಾ ಅವರನ್ನು ವಿಚಾರಣೆಗೆ ಒಳಪಡಿಸಿದ ನಂತರ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಇಡಿ ಕಸ್ಟಡಿಗೆ ತೆಗೆದುಕೊಂಡಿದೆ. ಬಂಧನದ ನಂತರ ಅಧಿಕಾರಿಯನ್ನು ಆರೋಗ್ಯ ತಪಾಸಣೆಗಾಗಿ ಕರೆದೊಯ್ಯಲಾಯಿತು. ಈ ಪ್ರಕರಣಕ್ಕೆ ಸಂಬAಧಿಸಿದAತೆ ಇಡಿ ಹಲವಾರು ದಾಳಿಗಳನ್ನು ನಡೆಸಿದ ನಂತರ ಕಳೆದ ಅಕ್ಟೋಬರ್‌ನಲ್ಲಿ ರಾಜ್ಯದ ಐಎಎಸ್ ಅಧಿಕಾರಿ ಸಮೀರ್ ವಿಷ್ಣೋಯ್ ಮತ್ತು ಇತರ ಇಬ್ಬರನ್ನು ಬಂಧಿಸಿತ್ತು. ಛತ್ತೀಸ್‌ಗಢದಲ್ಲಿ ಕಾರ್ಟೆಲ್‌ನಿಂದ ಸಾಗಿಸಲ್ಪಟ್ಟ ಪ್ರತಿ ಟನ್ ಕಲ್ಲಿದ್ದಲಿಗೆ ೨೫ ರೂಪಾಯಿ ಅಕ್ರಮವಾಗಿ ಸುಲಿಗೆ ಮಾಡಲಾದ ಹಗರಣಕ್ಕೆ ಸಂಬAಧಿಸಿದAತೆ ೨೦೦೨ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಇಡಿ ಶೋಧ ಕಾರ್ಯಾಚರಣೆಗಳನ್ನು ನಡೆಸಿತ್ತು.