ಮಡಿಕೇರಿ, ಡಿ. ೨: ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ವಿದ್ಯಾರ್ಥಿ, ವಿದ್ಯಾರ್ಥಿ ನಿಯರಿಗೆ ಆಟೋಟ ಮತ್ತು ಪಠ್ಯೇತರ ವಿಷಯಗಳಲ್ಲಿ ವಿವಿಧ ಸ್ಪರ್ಧೆಗಳನ್ನು ನಡೆಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ನಿವೃತ್ತ ಉಪನ್ಯಾಸಕಿ, ಕೊಡವ ಸಮಾಜದ ಮಾಜಿ ಉಪಾಧ್ಯಕ್ಷೆ ಹಾಗೂ ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಮಾಜಿ ಕಾರ್ಯಾಧ್ಯಕ್ಷೆ ಕಲಿಯಂಡ ಸರಸ್ವತಿ ಚೆಂಗಪ್ಪ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ನಂತರ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿ, ವಿದ್ಯಾರ್ಥಿ ನಿಯರಿಗೆ ಬಹುಮಾನ ವಿತರಣೆ ಮಾಡಿದರು. ಕೊಡವ ಸಮಾಜ ಹಾಗೂ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಅಧ್ಯಕ್ಷ ಮಂಡುವAಡ ಪಿ. ಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಶಾಲಾ ಕಾರ್ಯಾಧ್ಯಕ್ಷ ನಂದಿನೆರವAಡ ಚೀಯಣ್ಣ ಮತ್ತು ಕೊಡವ ಸಮಾಜದ ಆಡಳಿತ ವರ್ಗ, ಶಾಲಾ ಆಡಳಿತ ವರ್ಗದ ಗಣ್ಯರು ಹಾಜರಿದ್ದರು.

ಸಭಾ ಕಾರ್ಯಕ್ರಮಕ್ಕೂ ಮುನ್ನ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾದ ವೇದಿಕೆಯನ್ನು ಗಣಹೋಮ ಮಾಡುವುದರ ಮೂಲಕ ಉದ್ಘಾಟಿಸಲಾಯಿತು.