ಮಡಿಕೇರಿ, ಡಿ. ೨: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಯುವ ಜನ ಸೇವಾ ಕ್ರೀಡಾ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಾಗೂ ಸ್ವಾಮಿ ವಿವೇಕಾನಂದ ಯುವ ಸಂಘ, ಕೊಡಗು ಶಾಖೆ ಮತ್ತು ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ವಿಶೇಷ ಮಕ್ಕಳ ಶಾಲೆಗಳು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಶೇಷಚೇತನರ ದಿನಾಚರಣೆಯು ‘ಎಲ್ಲರನ್ನು ಒಳಗೊಂಡ ಸಮಾಜದ ನಿರ್ಮಾಣಕ್ಕಾಗಿ ಪರಿವರ್ತಕ ಪರಿಹಾರಗಳು, ಸುಗಮ್ಯ ಮತ್ತು ಸಮಾನ ಜಗತ್ತನ್ನು ಉತ್ತೇಜಿಸುವಲ್ಲಿ ಆವಿಷ್ಕಾರದ ಪಾತ್ರ’ ಎಂಬ ಘೋಷವಾಕ್ಯದೊಂದಿಗೆ ತಾ.೩ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಓಂಕಾರ ಸದನದಲ್ಲಿ ನಡೆಯಲಿದೆ.