ನಾಪೋಕ್ಲು, ಡಿ. ೨: ಕೊಡಗು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಈಚೆಗೆ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಯುವ ಸಬಲೀಕರಣ ಕ್ರೀಡಾ ಇಲಾಖೆಯ ಕ್ರೀಡಾ ನಿಲಯದ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹರ್ಷಿತ ೬೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ೪೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ ವಿದ್ಯಾರ್ಥಿನಿ ದೇವ್ ಮರಡಿ ೨೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ೧೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ ಮೇಘನ ೮೦ ಮೀಟರ್ ಹರ್ಡಲ್ಸ್ನಲ್ಲಿ ದ್ವಿತೀಯ ಸ್ಥಾನವನ್ನು ಗವಿನ್ ೧೦೦x೪ ಮೀಟರ್ ರಿಲೇಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.

ಬಾಲಕಿರ ವಿಭಾಗದಲ್ಲಿ ಶಾಂಭವಿ ೬೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು, ೪೦೦ ಮೀಟರ್ ಓಟದಲ್ಲಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು , ಚಶ್ಮಿತ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನವನ್ನು ಚಕ್ರ ಎಸೆತ ದ್ವಿತೀಯ, ಕ್ರೀಡಾ ನಿಲಯದ ಹರ್ಷಿತ ೬೦೦ ಓಟದಲ್ಲಿ ಪ್ರಥಮ ಸ್ಥಾನ ೧೦೦ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. ಬೋಪಣ್ಣ ೮೦ ಮೀಟರ್ ಹರ್ಡಲ್ಸ್ನಲ್ಲಿ ಪ್ರಥಮ ಸ್ಥಾನವನ್ನು ನಾಲ್ಕು ನೂರು ಮೀಟರ್ ರೀಲೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಬಾಲಕಿಯರ ವಿಭಾಗದ ೪x೧೦೦ ಮೀಟರ್ ರಿಲೇ ಓಟದಲ್ಲಿ ಸ್ಪರ್ಧೆಯಲ್ಲಿ ಕ್ರೀಡಾ ವಸತಿ ನಿಲಯದ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು, ಬಾಲಕರ ೪x೧೦೦ ಮೀಟರ್ ರಿಲೇಯಲ್ಲಿ ಕ್ರೀಡಾ ವಸತಿ ನಿಲಯದ ತಂಡವು ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿದೆ. ಇವರುಗಳಿಗೆ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ವಿಸ್ಮಯಿ ವಿ.ಟಿ., ಅಥ್ಲೆಟಿಕ್ಸ್ ತರಬೇತುದಾರ ಮಹಾಬಲ ಕೆ, ಹಾಕಿ ತರಬೇತುದಾರರು ಬಿಂದಿಯಾ ಕೆ, ಕ್ಷೇಮ ಪಾಲಕರು ಮಾರ್ಗದರ್ಶಕರಾಗಿದ್ದಾರೆ.