‘ಮಿಷನ್ ಆತ್ಮನಿರ್ಭರ್' : ೨೦೪೭ರ ವೇಳೆಗೆ ನೌಕಾಪಡೆ ಸ್ವಾವಲಂಬಿ
ನವದೆಹಲಿ, ಡಿ. ೩: ಭಾರತೀಯ ನೌಕಾಪಡೆಯು ೨೦೪೭ರ ವೇಳೆಗೆ ‘ಆತ್ಮನಿರ್ಭರ್'(ಸ್ವಾವಲಂಬಿ)ವಾಗುವ ಗುರಿ ಹೊಂದಿದೆ ಎಂದು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಹೇಳಿದ್ದಾರೆ. ನೌಕಾಪಡೆ ದಿನದ ಹಿನ್ನೆಲೆಯಲ್ಲಿ ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಡ್ಮಿರಲ್ ಕುಮಾರ್, ಸ್ವದೇಶಿ ವಿಮಾನವಾಹಕ ನೌಕೆ (ಐಎಸಿ) ೧೧ಕ್ಕೆ ಹೋಗಬೇಕೆ ಅಥವಾ ಐಎಸಿಐಗಾಗಿ ಪುನರಾವರ್ತಿತ ಆದೇಶಕ್ಕೆ ಆದ್ಯತೆ ನೀಡಬೇಕೆ ಎಂದು ನೌಕಾಪಡೆ ಆಲೋಚಿಸುತ್ತಿದೆ ಎಂದು ಹೇಳಿದರು. ಕೇಂದ್ರ ಸರ್ಕಾರವು ಆತ್ಮನಿರ್ಭರ್ ಭಾರತದ ಕುರಿತು ನಮಗೆ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಿದೆ. ನೌಕಾಪಡೆಯು ೨೦೪೭ರ ವೇಳೆಗೆ ‘ಆತ್ಮನಿರ್ಭರತೆ' ಗುರಿ ಸಾಧಿಸುವುದಾಗಿ ನಾವು ಭರವಸೆ ನೀಡಿದ್ದು, ಈ ದಿಸೆಯಲ್ಲಿ ಕಳೆದ ಒಂದು ವರ್ಷದಿಂದ ಹಲವು ಕೆಲಸಗಳನ್ನು ಮಾಡಿದ್ದೇವೆ ಎಂದರು. ಅಮೆರಿಕದ ಪ್ರಿಡೇಟರ್ ಡ್ರೋನ್ಗಳನ್ನು ಖರೀದಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಒಟ್ಟು ೩೦ ಶಸ್ತçಸಜ್ಜಿತ ಎಂಕ್ಯೂ-೯ಬಿ ಪ್ರಿಡೇಟರ್ ಡ್ರೋನ್ಗಳ ಖರೀದಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ಹೇಳಿದರು. ಹಿಂದೂ ಮಹಾಸಾಗರ ಪ್ರದೇಶದಲ್ಲಿ ಚೀನಾದ ವಿವಿಧ ಮಿಲಿಟರಿ ಮತ್ತು ಸಂಶೋಧನಾ ಹಡಗುಗಳ ಚಲನವಲನಗಳ ಮೇಲೆ ನೌಕಾಪಡೆಯು ಬಲವಾದ ನಿಗಾ ವಹಿಸಿದೆ ಎಂದು ನೌಕಾಪಡೆ ಮುಖ್ಯಸ್ಥರು ತಿಳಿಸಿದರು.
ವಸತಿ ಯೋಜನೆಯಲ್ಲಿ ಶೇ.೩ ರಷ್ಟು ದಿವ್ಯಾಂಗರಿಗೆ ಮೀಸಲು
ಬೆಂಗಳೂರು, ಡಿ. ೩: ದಿವ್ಯಾಂಗರಿಗೆ ವಸತಿ ಯೋಜನೆಯಲ್ಲಿ ಶೇ. ೩ರಷ್ಟು ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿAದು ಆಯೋಜಿಸಿದ್ದ ವಿಶ್ವ ವಿಶೇಷಚೇತನರ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದಿವ್ಯಾಂಗರಿಗೆ ೫ ಲಕ್ಷ ರೂ. ವರೆಗೆ ಸರ್ಕಾರಿ ವೆಚ್ಚದಲ್ಲಿ ಆರೋಗ್ಯ ಸೇವೆ ಒದಗಿಸುವ ವಿಮಾ ಯೋಜನೆ ಜಾರಿ ಮಾಡಲಾಗುವುದು ಎಂದರು. ದಿವ್ಯಾಂಗರ ವಿದ್ಯಾಭ್ಯಾಸಕ್ಕೆ ನೆರವಾಗಲು ಮುಂಬರುವ ಬಜೆಟ್ನಲ್ಲಿ ವಿಶೇಷ ಅನುದಾನ ಒದಗಿಸಲಾಗುವುದು, ಬುದ್ಧಿಮಾಂದ್ಯ ಮಕ್ಕಳಿಗೆ ಶೆಲ್ಟರ್ಡ್ ವರ್ಕ್ಶಾಪ್ಗಳನ್ನು ತೆರೆಯಲಾಗುವುದು ಮತ್ತು ವಿಶೇಷಚೇತನರಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯುತ್ ಚಾಲಿತ ಮೂರು ಚಕ್ರಗಳ ಬೈಸಿಕಲ್ ವಿತರಿಸಲಾಗುವುದು ಎಂದು ಅವರು ತಿಳಿಸಿದರು. ಬುದ್ಧಿಮಾಂದ್ಯ, ಶ್ರವಣ ದೋಷವುಳ್ಳ, ಅಂಧ ಮಕ್ಕಳ ಸ್ಕಾಲರ್ಶಿಪ್ಗಳನ್ನು ದಾಖಲೆ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ. ವಸತಿ ನಿಲಯಗಳಿಗೆ ಅಗತ್ಯ ಅನುದಾನ ನೀಡಿ, ಮಾಸಿಕ ನಿರ್ವಹಣಾ ವೆಚ್ಚವನ್ನು ಸಹ ಏರಿಸಲಾಗಿದೆ ಎಂದು ತಿಳಿಸಿದರು.
ಗುಜರಾತ್ ಚುನಾವಣೆ: ೨ನೇ ಹಂತದ ಬಹಿರಂಗ ಪ್ರಚಾರಕ್ಕೆ ತೆರೆ
ಅಹಮದಾಬಾದ್, ಡಿ. ೩: ಗುಜರಾತ್ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಹೈವೋಲ್ಟೇಜ್ ಬಹಿರಂಗ ಪ್ರಚಾರಕ್ಕೆ ಶನಿವಾರ ಸಂಜೆ ೫ ಗಂಟೆಗೆ ತೆರೆ ಬಿದ್ದಿದೆ. ತಾ. ೫ ರಂದು ಕೊನೆಯ ಹಂತದ ಮತದಾನ ನಡೆಯಲಿದ್ದು, ೯೩ ಕ್ಷೇತ್ರಗಳಲ್ಲಿ ಒಟ್ಟು ೮೩೩ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ತಾ. ೮ ರಂದು ಫಲಿತಾಂಶ ಪ್ರಕಟವಾಗಲಿದೆ. ಎರಡನೇ ಹಂತದ ಪ್ರಮುಖ ಅಭ್ಯರ್ಥಿಗಳೆಂದರೆ ಘಟ್ಲೋಡಿಯಾದಿಂದ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ವಿರಂಗಾಮ್ನಿAದ ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಮತ್ತು ಗಾಂಧಿನಗರ ದಕ್ಷಿಣದಿಂದ ಒಬಿಸಿ ನಾಯಕ ಅಲ್ಪೇಶ್ ಠಾಕೋರ್ ಅವರು ಕಣದಲ್ಲಿದ್ದಾರೆ. ಹಾರ್ದಿಕ್ ಪಟೇಲ್ ಮತ್ತು ಠಾಕೂರ್ ಇಬ್ಬರೂ ಭಾರತೀಯ ಜನತಾ ಪಕ್ಷದ ಟಿಕೆಟ್ನಲ್ಲಿ ಸ್ಪರ್ಧಿಸುತ್ತಿದ್ದಾರೆ. ಸೌರಾಷ್ಟç, ಕಚ್ ಮತ್ತು ದಕ್ಷಿಣ ಗುಜರಾತ್ನ ೮೯ ಸ್ಥಾನಗಳಿಗೆ ಮೊದಲ ಹಂತದ ಮತದಾನ ಡಿಸೆಂಬರ್ ೧ ರಂದು ನಡೆದಿದ್ದು, ಶೇ. ೬೩.೩೧ ರಷ್ಟು ಮತದಾನವಾಗಿದೆ, ಇದು ಕಳೆದ ಬಾರಿಗಿಂತ ಕಡಿಮೆಯಾಗಿದೆ. ಅಹಮದಾಬಾದ್, ವಡೋದರಾ ಮತ್ತು ಗಾಂಧಿನಗರ ಸೇರಿದಂತೆ ಉತ್ತರ ಮತ್ತು ಮಧ್ಯ ಗುಜರಾತ್ನ ೧೪ ಜಿಲ್ಲೆಗಳಲ್ಲಿ ಸೋಮವಾರ ಮತದಾನ ನಡೆಯಲಿದ್ದು, ಆಡಳಿತರೂಢ ಬಿಜೆಪಿ, ಕಾಂಗ್ರೆಸ್ ಮತ್ತು ಎಎಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆಂಗಳೂರಿಗೆ ಆಗಮನ
ಬೆಂಗಳೂರು, ಡಿ. ೩: ಬೆಂಗಳೂರಿನ ಇಸ್ಕಾನ್ ದೇಗುಲದ ವತಿಯಿಂದ ಆಯೋಜಿಸಿರುವ ಗೀತಾ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಹೆಚ್.ಎ.ಎಲ್. ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ನಗರಾಭಿವೃದ್ಧಿ ಸಚಿವರಾದ ಬಿ ಬಸವರಾಜು (ಬೈರತಿ) ಅವರು ರಕ್ಷಣಾ ಸಚಿವರನ್ನು ಆತ್ಮೀಯವಾಗಿ ಬರ ಮಾಡಿಕೊಂಡರು. ಈ ಸಮಯದಲ್ಲಿ ಲೆಫ್ಟಿನೆಂಟ್ ಜನರಲ್ ಬಸಂತ್ ರೆಪ್ ಸ್ವಾಲ್, ಉತ್ತರಾಧಿ ಮಠದ ಸ್ವಾಮೀಜಿ ಸತ್ಯಧ್ಯಾನಾಚಾರ್, ಹೆಚ್.ಎ.ಎಲ್.ನ ವ್ಯವಸ್ಥಾಪಕ ನಿರ್ದೇಶಕ ಅನಂತ ಕೃಷ್ಣ ಮತ್ತು ಹಿರಿಯ ಅಧಿಕಾರಿಗಳು ಇದ್ದರು.
ಪಿಎಸ್ಐ ನೇಮಕಾತಿ ಹಗರಣ: ಅಮೃತ್ ಪಾಲ್ ವಿರುದ್ಧ ಕಾನೂನು ಕ್ರಮ
ಬೆಂಗಳೂರು, ಡಿ. ೩: ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬAಧಿಸಿದAತೆ ಬಂಧಿತ, ಎಡಿಜಿಪಿ ಆಗಿದ್ದ ಅಮೃತ್ ಪಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಕರ್ನಾಟಕ ಸರ್ಕಾರ ಅನುಮತಿ ನೀಡಿದೆ ಎಂದು ಮೂಲಗಳು ತಿಳಿಸಿವೆ. ಆರೋಪಿ ಐಪಿಎಸ್ ಅಧಿಕಾರಿಯಾಗಿರುವುದರಿಂದ ಕಾನೂನು ಪ್ರಕ್ರಿಯೆ ಆರಂಭಿಸಲು ಸರ್ಕಾರದ ಒಪ್ಪಿಗೆ ಅಗತ್ಯವಿತ್ತು. ನೇಮಕಾತಿ ಹಗರಣಕ್ಕೆ ಸಂಬAಧಿಸಿದAತೆ ಪ್ರತಿಪಕ್ಷ ಕಾಂಗ್ರೆಸ್ ವಾಗ್ದಾಳಿಗೆ ಗುರಿಯಾಗಿರುವ ಆಡಳಿತಾರೂಢ ಬಿಜೆಪಿ ಇದೀಗ ತನಿಖೆಗೆ ತನ್ನ ಸಮ್ಮತಿಯನ್ನು ನೀಡಿದೆ. ಜೈಲಿನಲ್ಲಿರುವ ಐಪಿಎಸ್ ಅಧಿಕಾರಿ ವಿರುದ್ಧ ಸಿಐಡಿ ೧,೪೦೬ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು. ಬೆಂಗಳೂರಿನ ೧ನೇ ಎಸಿಎಂಎA ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ರಾಜ್ಯವನ್ನೇ ಬೆಚ್ಚಿಬೀಳಿಸಿ ರಾಷ್ಟçಮಟ್ಟದಲ್ಲಿ ಸುದ್ದಿ ಮಾಡಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬAಧಿಸಿದAತೆ ಬಂಧಿತರಾದ ಮೊದಲ ಹಿರಿಯ ಎಡಿಜಿಪಿ ಮಟ್ಟದ ಅಧಿಕಾರಿ ಅಮೃತ್ ಪಾಲ್. ಆರೋಪಿ ಅಮೃತ್ ಪಾಲ್ ಅವರನ್ನು ಹಗರಣದ ೩೫ನೇ ಆರೋಪಿಯನ್ನಾಗಿ ಮಾಡಲಾಗಿದ್ದು, ಸಿಐಡಿ ತನಿಖಾಧಿಕಾರಿ ಡಿವೈಎಸ್ಪಿ ಬಿ.ಕೆ. ಶೇಖರ್ ಅವರು ಹಗರಣದಲ್ಲಿ ಅಮೃತ್ ಪಾಲ್ ವಿರುದ್ಧ ೭೮ ದಾಖಲೆಗಳು, ೩೮ ಸಾಕ್ಷಿಗಳನ್ನು ಸಲ್ಲಿಸಿದ್ದು, ಪಾಲ್ ಅವರ ಪಾತ್ರವನ್ನು ವಿವರಿಸಿದ್ದಾರೆ. ಹಗರಣವನ್ನು ನಡೆಸಲು ಸಂಚು ಮತ್ತು ಸಬ್ ಇನ್ಸ್ಪೆಕ್ಟರ್ ಹುದ್ದೆಯ ಆಕಾಂಕ್ಷಿಗಳಿAದ ಹಣ ವಸೂಲಿ ಮಾಡಿದ್ದರು ಎನ್ನಲಾಗಿದೆ.