ಸಿದ್ದಾಪುರ, ಡಿ. ೩: ನೆಲ್ಲಿಹುದಿಕೇರಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಂಗ್ಲಭಾಷಾ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಜುಸ್ತಿನ್ ಕೊರೆಯ ನಿವೃತ್ತಿಯಾದ ಹಿನ್ನೆಲೆ ಅವರನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ನೆಲ್ಲಿಹುದಿಕೇರಿಯ ಕರ್ನಾಟಕ ಪಬ್ಲಿಕ್ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪಿ.ಸಿ. ಅಚ್ಚಯ್ಯ ಹಾಗೂ ಸಮಿತಿಯ ಸದಸ್ಯರು, ಪ್ರಾಂಶುಪಾಲ ಅಂತೋಣಿ ವಿವಿಯನ್ ಆಲ್ವರೀಸ್, ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.