ಮಡಿಕೇರಿ, ಡಿ. ೩: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ ಅಡಿಯಲ್ಲಿ ಯುವಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆದ್ದರಿಂದ ೨೧ ರಿಂದ ೩೫ ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ, ಕನ್ನಡವನ್ನು ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಇರುವ, ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ, ಅರ್ಹತಾ ಮಾನದಂಡಗಳನ್ನು ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಗಳೊAದಿಗೆ ತಾ. ೫ ರಂದು ನೇರ ಸಂದರ್ಶನಕ್ಕೆ ಯುವಸ್ಪಂದನ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮಡಿಕೇರಿ ಇಲ್ಲಿ ಹಾಜರಿರುವಂತೆ ಕೋರಿದೆ.
ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ ಕೊಡಗು ಇವರನ್ನು ಖುದ್ದಾಗಿ ಅಥವಾ ದೂ.ಸಂ. ೯೪೮೦೦೩೨೭೧೨ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.