ವೀರಾಜಪೇಟೆ, ಡಿ. ೩: ವೀರಾಜಪೇಟೆಯ ಮೀನುಪೇಟೆಯಲ್ಲಿರುವ ಚೈತನ್ಯ ಮಠಪುರ ಶ್ರೀ ಮುತ್ತಪ್ಪ ದೇವಸ್ಥಾನದ ಅಧ್ಯಕ್ಷ ಹಾಗೂ ಓಣಂ ಆಚರಣೆ ಸಮಿತಿಯ ಸ್ಥಾಪಕ ಅಧ್ಯಕ್ಷ ಮತ್ತು ಪ.ಪಂ. ಮಾಜಿ ಅಧ್ಯಕ್ಷ ಇ.ಸಿ. ಜೀವನ್ ಸ್ಮರಣಾರ್ಥ ಓಣಂ ಸಮಿತಿ ಪದಾಧಿಕಾರಿಗಳು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.

ಈ ಸಂದರ್ಭ ಓಣಂ ಆಚರಣಾ ಸಮಿತಿ ಅಧ್ಯಕ್ಷ ಪಿ.ಜಿ. ಸುಮೇಶ್, ಉಪಾಧ್ಯಕ್ಷ ಸಿ.ಆರ್. ಸಜೀವನ್, ಕಾರ್ಯದರ್ಶಿ ಸಿ.ಆರ್. ಬಾಬು ಮತ್ತು ರಂಜು, ಮಾಜಿ ಅಧ್ಯಕ್ಷ ಪದ್ಮನಾಭ, ಆರ್ಜಿ ಗ್ರಾ.ಪಂ. ಉಪಾಧ್ಯಕ್ಷ ಉಪೇಂದ್ರ, ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಜೆ. ಶ್ರೀನಿವಾಸ್ ಹಾಗೂ ಓಣಂ ಸಮಿತಿಯ ಸದಸ್ಯರುಗಳು ಹಣ್ಣು ಹಂಪಲು ವಿತರಣಾ ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದರು.